ಯುವವಾಹಿನಿ (ರಿ) ಬೆಳ್ತಂಗಡಿ ಘಟಕ

ಬೆಳ್ತಂಗಡಿ ಯುವವಾಹಿನಿಯಿಂದ ಯುವವಾಹಿನಿ ಟ್ರೋಫಿ ಕ್ರೀಡಾಕೂಟ ಸಂಪನ್ನ

ಸಂಘಟನೆಯ ಮೂಲಕ ಸಮಾಜವನ್ನು ಕಟ್ಟಿ ಯುವಕರನ್ನು ಒಗ್ಗೂಡಿಸುವ ಶ್ರೇಷ್ಠ ಕಾರ್ಯ ಯುವವಾಹಿನಿ ಮಾಡುತ್ತಿದೆ. ಕ್ರೀಡಾಕೂಟದ ಮೂಲಕ ಯುವ ಮನಸ್ಸುಗಳನ್ನು ಬೆಸೆದು ಸಮಾಜದಲ್ಲಿ ಸಾಮರಸ್ಯ ಮೂಡಿಸುವ ಕಾರ್ಯವನ್ನು ಯುವವಾಹಿನಿಯಂತಹ ಯುವಕರ ಸಂಘಟನೆ ಮಾಡುತ್ತಿರುವುದು ಶ್ಲಾಘನೀಯ ಎಂದು ಮೂಲ್ಕಿ ಬಿಲ್ಲವರ ಮಹಾಮಂಡಲದ ಉಪಾಧ್ಯಕ್ಷ ನಿವೃತ್ತ ಎಸ್ ಪಿ ಪೀತಾಂಬರ ಹೇರಾಜೆ ಹೇಳಿದರು.

ಅವರು ಯುವವಾಹಿನಿ ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ದಿನಾಂಕ. 09.04.2017 ನೇ ಆದಿತ್ಯವಾರ ವೇಣೂರು ಸರಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಬಿಲ್ಲವ ಸಮಾಜ ಭಾಂದವರಿಗಾಗಿ ಜರುಗಿದ ಕ್ರಿಕೆಟ್ ಪಂದ್ಯ ಯುವವಾಹಿನಿ ಟ್ರೋಫಿ- 2017 ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ಯುವವಾಹಿನಿ ಬೆಳ್ತಂಗಡಿ ಘಟಕದ ಅದ್ಯಕ್ಷ ಸದಾನಂದ ಉಂಗಿಲಬೈಲು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಶ್ರೀ ನಾರಾಯಣಗುರು ಸ್ವಾಮಿ ಸೇವಾ ಸಂಘದ ಅದ್ಯಕ್ಷ ಭಗೀರಥ ಜಿ, ಯುವವಾಹಿನಿ ಕೇಂದ್ರ ಸಮಿತಿ ಅದ್ಯಕ್ಷ ಪದ್ಮನಾಭ ಮರೋಳಿ, ಬೆಳ್ತಂಗಡಿ ಸ್ಥಾಯೀ ಸಮಿತಿ ಅದ್ಯಕ್ಷ ಸುಧೀರ್ ಆರ್ ಸುವರ್ಣ, ಬೆಳ್ತಂಗಡಿ ಗೆಜ್ಜೆಗಿರಿ ನಂದನಬಿತ್ತಿಲು ಸೇವಾ ಸಮಿತಿ ಅದ್ಯಕ್ಷ ಸೋಮನಾಥ ಬಂಗೇರ ವರ್ಪಾಳ, ಬೆಳ್ತಂಗಡಿ ಯುವವಾಹಿನಿ ನಿರ್ದೇಶಕಿ ಹಾಗೂ ತಾಲೂಕು ಪಂಚಾಯತ್ ಸದಸ್ಯೆ ಕೇಶವತಿ ಎನ್, ಬಜಿರೆಯ ಸಂಜೀವ ಸುವರ್ಣ, ವೇಣೂರು ಸರಕಾರಿ ಪದವಿಪೂರ್ವ ಕಾಲೇಜು ಉಪನ್ಯಾಸಕ ಸುಧಾಕರ ಪೂಜಾರಿ, ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅದ್ಯಕ್ಷರಾದ ಪ್ರೇಮನಾಥ ಕೆ, ತುಕರಾಮ್ ಎನ್, ಬೆಳ್ತಂಗಡಿ ಎಪಿಎಂಸಿ ಅದ್ಯಕ್ಷ ಸತೀಶ್ ಕೆ.ಕಾಶೀಪಟ್ಲ, ಬೆಳ್ತಂಗಡಿ ಯುವವಾಹಿನಿ ಘಟಕದ ಕಾರ್ಯದರ್ಶಿ ಪ್ರಶಾಂತ್ ಮಚ್ಚಿನ, ಯುವವಾಹಿನಿ ವೇಣೂರು ಸಂಚಲನಾ ಸಮಿತಿಯ ಅದ್ಯಕ್ಷ ನವೀನ್ ಪೂಜಾರಿ ಪಚ್ಚೇರಿ, ಕಾರ್ಯದರ್ಶಿ ಸತೀಶ್ ಪಿ ಎನ್, ಬೆಳ್ತಂಗಡಿ ಯುವಬಿಲ್ಲವ ವೇದಿಕೆಯ ಸ್ಥಾಪಕ ಅದ್ಯಕ್ಷ ಹರೀಶ್ ಕುಮಾರ್, ನಿರ್ದೇಶಕ ಚಿದಾನಂದ ಪೂಜಾರಿ ಮತ್ತಿತರರು ಉಪಸ್ಥಿತವಿರಿದ್ದರು.

ಸನ್ಮಾನ
ವಿವಿಧ ಕ್ಷೇತ್ರದ ಸಾಧಕರಾದ ರಕ್ಷಾ ಜಾರಿಗೆದಡಿ, ಸಂದ್ಯಾ, ರಕ್ಷಿತ್ ಪುನ್ಕೆದಡಿ, ಸಂದೇಶ್ ಇವರುಗಳನ್ನು ಸನ್ಮಾನಿಸಲಾಯುತು.

ಕ್ರೀಡಾಕೂಟದ ಪ್ರಧಾನ ಸಂಚಾಲಕ ರಾಕೇಶ್ ಕುಮಾರ್ ಮೂಡುಕೋಡಿ, ಸ್ವಾಗತಿಸಿದರು, ಅರುಣ್ ಎಸ್ ಕಾರ್ಯಕ್ರಮ ನಿರೂಪಿಸಿದರು, ನವೀನ್ ಪಚ್ಚೇರಿ ವಂದಿಸಿದರು.

ಗುರುದೇವ ವಿವಿದ್ದೋದೇಶ ಸಹಕಾರಿ ಸಂಘ ಪ್ರಥಮ ಬಹುಮಾನ : 5555/- ಮತ್ತು ಯುವವಾಹಿನಿ ಟ್ರೋಫಿ ಹಾಗೂ ದ್ವಿತೀಯ ಬಹುಮಾನ 3333/- ಹಾಗೂ ಯುವವಾಹಿನಿ ಟ್ರೋಫಿ ಮತ್ತು ವೈಯಕ್ತಿಕ ಬಹುಮಾನ ನೀಡಿ ಗೌರವಿಸಲಾಯಿತು.

ಗುರುದೇವ ವಿವಿದ್ದೋದ್ದೇಶ ಸಹಕಾರಿ ಸಂಘ ಪಂದ್ಯಾಟದಲ್ಲಿ ಪ್ರಥಮ ಸ್ಥಾನಕ್ಕಾಗಿ ಪಡೆದ ರೂಪಾಯಿ 5,555 ನ್ನು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಯುವವಾಹಿನಿ ಸಕ್ರೀಯ ಸದಸ್ಯ ಚಂದ್ರಹಾಸರವರ ಕುಟುಂಬಕ್ಕೆ ನೀಡುವ ಸಾಂತ್ವಾನ ನಿಧಿಗೆ ಅರ್ಪಿಸಲಾಯಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!