ಹಳೆಯಂಗಡಿ: ನವಂಬರ್ ೧೪ ರಂದು ಮಕ್ಕಳ ದಿನಾಚರಣೆಯನ್ನು ಸ್ಥಳೀಯ U.B.M.C ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಚಿತ್ರಕಲೆ ಮತ್ತು ಸಂಗೀತ ಸ್ಪರ್ಧೆಯನ್ನು ಯುವವಾಹಿನಿ (ರಿ) ಹಳೆಯಂಗಡಿ ಘಟಕ ಮತ್ತು ಲಯನ್ಸ್ & ಲಿಯೋ ಕ್ಲಬ್ ಹಳೆಯಂಗಡಿ ಜಂಟಿ ಆಶ್ರಯದಲ್ಲಿ ಏರ್ಪಡಿಸಲಾಯಿತು.
ಲಯನ್ಸ್ ಕ್ಲಬ್‌ನ ಅಧ್ಯಕ್ಷರಾದ ವಾಸು ನಾಯಕ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಯುವವಾಹಿನಿ (ರಿ) ಹಳೆಯಂಗಡಿ ಘಟಕದ ಮಾಜಿ ಅಧ್ಯಕ್ಷರಾದ ಮೋಹನ್ ಸುವರ್ಣರವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿ ಮಾತನಾಡಿದರು. ಘಟಕದ ನಿಕಟ ಪೂರ್ವ ಅಧ್ಯಕ್ಷರಾದ ಯಶೋಧರ್ ಸಾಲ್ಯಾನ್, ಕಾರ್ಯದರ್ಶಿಯಾದ ಚಂದ್ರಿಕಾ ಪಿ. ಕೋಟ್ಯಾನ್, ಕೋಶಾಧಿಕಾರಿಯಾದ ಹರೀಶ್ ಅಮೀನ್, ಸದಸ್ಯರಾದ ಪ್ರಜ್ವಲ್ ನಾನಿಲ್, ಸೌರಭ್ ಸಾಲ್ಯಾನ್, ಚೇತನ್ ಕುಮಾರ್, ವಿದ್ಯಾನಾಗರಾಜ್‌ರವರು ಉಪಸ್ಥಿತರಿದ್ದರು. ಮತ್ತು ಕಾರ್ಯದರ್ಶಿಯಾದ ಚಂದ್ರಿಕಾ ಪಿ. ಕೋಟ್ಯಾನ್‌ರವರು ವಿಜೇತರಿಗೆ ಬಹುಮಾನ ವಿತರಿಸಿ ಮಕ್ಕಳಿಗೆ ಶುಭ ಹಾರೈಸಿದರು. ಶಾಲಾ ಮಕ್ಕಳಿಗೆ ಸಿಹಿ ತಿಂಡಿ ವಿತರಿಸಲಾಯಿತು. ಮತ್ತು ಶಾಲಾ ಮುಖ್ಯೋಪಾದ್ಯಾಯಿನಿ ಹಾಗೂ ಅಧ್ಯಾಪಕ (ವೃಂದ) ದವರು ಧನ್ಯವಾದ ಅರ್ಪಿಸಿದರು.
ಕಾರ್ಯಕ್ರಮದ ವಿಶೇಷತೆ:-
೧. ವಿದ್ಯಾರ್ಥಿಗಳಿಂದ ನಿರೂಪಣೆ, ಸ್ವಾಗತ, ಧನ್ಯವಾದ
೨. ಮಕ್ಕಳಿಗೆ ಚಿತ್ರಕಲಾ ಮತು ಸಂಗೀತ ಸ್ಪರ್ಧೆ
೩. ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ