ವಿಟ್ಲ: ಯುವವಾಹಿನಿ (ರಿ.) ವಿಟ್ಲ ಘಟಕ ಇದರ ನೇತೃತ್ವದಲ್ಲಿ ಶ್ರೀ ಮಲರಾಯ -ಮೂವರ್ ದೈವಂಗಳ ದೈವಸ್ಥಾನ ಮಾಡತಡ್ಕ ಇದರ ಕಾಲಾವದಿ ನೇಮೋತ್ಸವದ ಪ್ರಯುಕ್ತ ದಿನಾಂಕ 18-02-2024 ಆದಿತ್ಯವಾರ ಬೆಳಿಗ್ಗೆ 8 ರಿಂದ ಮದ್ಯಾಹ್ನ 1ರ ವರೆಗೆ ವಿಟ್ಲ ಘಟಕದ ಸದಸ್ಯರಿಂದ ಶ್ರಮದಾನ ನಡೆಯಿತು.ಈ ಸಂದರ್ಭದಲ್ಲಿ ಯುವವಾಹಿನಿ ವಿಟ್ಲ ಘಟಕದ ಕಾರ್ಯದರ್ಶಿ ಶೋಭಾ, ಕೋಶಾಧಿಕಾರಿ ನಿರ್ಮಲ, ಪ್ರಚಾರ ನಿರ್ದೇಶಕರಾದ ಶ್ರೇಯಸ್ ಪೂಜಾರಿ ಹಾಗೂ ಸದಸ್ಯರು ಉಪಸ್ಥಿತರಿದರು.