ಮಂಗಳೂರಿನ ಸೋಮೇಶ್ವರ ಗ್ರಾಮದ ದಿವಂಗತ ಪುರುಷೋತ್ತಮ ಮತ್ತು ಪ್ರಮೀಳಾ ದಂಪತಿಯ ದ್ವಿತೀಯ ಪುತ್ರ ವೇಗದ ಓಟದ ಸರದಾರನಾಗಿ ಮೂಡಿಬರುತ್ತಿರುವ ಪ್ರತಿಭೆ ಸ್ವಸ್ತಿಕ್ ಕೆ. ಶಾಲಾ ದೈಹಿಕ ಶಿಕ್ಷಕರಾದ ಶ್ರೀ ಸಂದೀಪ್‍ರವರ ಮಾರ್ಗದರ್ಶನದಲ್ಲಿ ಸಾಧನೆಯ ಸರದಾರ. ಸ್ವಸ್ತಿಕ್ ಕೆ. ಅವರು ಯುವ ಜಿಲ್ಲಾಮಟ್ಟದ 100 ಮೀಟರ್ ಓಟದಲ್ಲಿ ಪ್ರಥಮ, ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ 16 ವರ್ಷ ವಯೋಮಾನದ 100 ಮೀಟರ್ ಸ್ಪರ್ಧೆಯಲ್ಲಿ 10.8 ಸೆಕೆಂಡಿನ ದಾಖಲೆಯೊಂದಿಗೆ ಪ್ರಥಮ ಸ್ಥಾನ, 2016-17ನೇ ಸಾಲಿನಲ್ಲಿ 19ರ ವಯೋಮಿತಿಯ ಸ್ಪರ್ಧೆಯಲ್ಲಿ ಪ್ರಶಸ್ತಿ, ಬೆಂಗಳೂರಿನಲ್ಲಿ ನಡೆದ 18ರ ವಯೋಮಿತಿಯ ಯುತ್ ನ್ಯಾಶನಲ್ ಕ್ರೀಡಾ ಕೂಟದಲ್ಲಿ ಪ್ರಥಮ ಸ್ಥಾನ, ಉಡುಪಿಯಲ್ಲಿ ನಡೆದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಪ್ರಥಮ, ಗುಜರಾತಿನಲ್ಲಿ ನಡೆದ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಪ್ರಥಮ, ಮಂಗಳೂರಿನಲ್ಲಿ ನಡೆದ ಖೇಲೋ ಇಂಡಿಯಾ ವಾರ್ಷಿಕ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿರುವುದು ಇವರ ಸಾಧನೆಗಳ ಪ್ರತೀಕ. ರಾಷ್ಟ್ರ ಮಟ್ಟದ ಹೆಚ್ಚಿನ ಕ್ರೀಡಾಕೂಟಗಳಲ್ಲಿ ರಾಜ್ಯವನ್ನು ಪ್ರತಿನಿಧಿಸಿ ಉತ್ತಮ ಸಾಧನೆಯನ್ನು ಮಾಡಿದ್ದು ಸೋಮೇಶ್ವರದ ಪರಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿ.ಯು.ಸಿ.ಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.ಇವರಿಂದ ಕ್ರೀಡಾರಂಗದಲ್ಲಿ ಇನ್ನಷ್ಟು ಸಾಧನೆಗಳು ಮೂಡಿ ಬರಲಿ ಎಂದು ಹಾರೈಸುತ್ತಾ ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಯುವವಾಹಿನಿ (ರಿ) ಉಪ್ಪಿನಂಗಡಿ ಘಟಕದ ಆತಿಥ್ಯದಲ್ಲಿ ದಿನಾಂಕ 06.08.2017 ರಂದು ಉಪ್ಪಿನಂಗಡಿಯ ಎಚ್ ಎಮ್.ಆಡಿಟೋರಿಯಂ ಇಲ್ಲಿ ಜರುಗಿದ ಯುವವಾಹಿನಿಯ 30ನೇ ವಾರ್ಷಿಕ ಸಮಾವೇಶದ ಸುಸಂದರ್ಭದಲ್ಲಿ ‘ಯುವವಾಹಿನಿ ಪ್ರತಿಭಾ ಪುರಸ್ಕಾರ’ ನೀಡಿ ಗೌರವಿಸುತ್ತಿದೆ.
ಈ ಸಂದರ್ಭದಲ್ಲಿ ಕರ್ನಾಟಕ ಸರಕಾರದ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಶ್ರೀ ಕೆ.ವಸಂತ ಬಂಗೇರ, ಐ ಎಪ್ ಎಸ್ ಅಧಿಕಾರಿ ಶ್ರೀ ದಾಮೋದರ ಎ.ಟಿ, ಜಿಲ್ಲಾ ಪಂಚಾಯತ್ ಸದಸ್ಯರಾದ ಶ್ರೀಮತಿ ಶಯನಾ ಜಯಾನಂದ,ಪುತ್ತೂರು ತಾಲೂಕು ಬಿಲ್ಲವ ಸಂಘದ ಅಧ್ಯಕ್ಷರಾದ ಶ್ರೀ ಜಯಂತ ನಡುಬೈಲು, ಕಾಸರಗೋಡು ಸರಕಾರಿ ಕಾಲೇಜು ಸಹ ಪ್ರಾಧ್ಯಾಪಕರಾದ ಡಾ.ರಾಜೇಶ್ ಬೆಜ್ಜಂಗಳ,ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಮರೋಳಿ, ಸಮಾವೇಶ ನಿರ್ದೇಶಕರಾದ ಡಾ.ಸದಾನಂದ ಕುಂದರ್, ಕಾರ್ಯದರ್ಶಿ ನಿತೇಶ್ ಜೆ.ಕರ್ಕೇರಾ ಸ್ವಾಗತ ಸಮಿತಿಯ ಅಧ್ಯಕ್ಷರಾದ ಡಾ.ರಾಜಾರಾಮ್, ಯುವವಾಹಿನಿ ಉಪ್ಪಿನಂಗಡಿ ಘಟಕದ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ಉಪಸ್ಥಿತರಿದ್ದರು