ಯುವವಾಹಿನಿ (ರಿ) ಮೂಲ್ಕಿ ಘಟಕ

ಮೂಲ್ಕಿ ಯುವವಾಹಿನಿಯಿಂದ ವನಮಹೋತ್ಸವ

ಯುವವಾಹಿನಿ (ರಿ) ಮೂಲ್ಕಿ ಘಟಕ ಆಶ್ರಯದಲ್ಲಿ ಮೂಲ್ಕಿ ವಿಜಯಾ ಕಾಲೇಜಿನ ಎನ್.ಎಸ್.ಎಸ್ ಮತ್ತು ಎನ್.ಸಿ.ಸಿ ಹಾಗೂ ಈವಗ್ರೀನ್ ಇದರ ಜಂಟಿ ಸಹಯೋಗದಲ್ಲಿ ದಿನಾಂಕ 07-07-2017ರಂದು ಮೂಲ್ಕಿ ವಿಜಯ ಕಾಲೇಜಿನಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.


ಈ ಸಂದರ್ಭದಲ್ಲಿ ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಮರೋಳಿ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು.. ಅಕಾಡಮಿ ಆಫ್ ಜನರಲ್ ಎಜ್ಯುಕೇಶನ್ ಮಣಿಪಾಲ ಇದರ ಆಡಳಿತಾಧಿಕಾರಿಯಾದ ಡಾll ಹೆಚ್. ಶಾಂತರಾಮ್ ಕಾರ್ಯಕ್ರಮವನ್ನು ಉಧ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಮೂಲ್ಕಿ ವಿಜಯಾ ಕಾಲೇಜಿನ ಪ್ರಾಂಶುಪಾಲರಾದ ಡಾll ಕೆ. ನಾರಾಯಣ ಪೂಜಾರಿ ,ಮೂಲ್ಕಿ ವಿಜಯಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಪಮಿದ ಬೇಗಂ, ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಡಾ.,ಅನುಸೂಯ ಟಿ ಕರ್ಕೇರ ಈವಗ್ರೀನ್ ಪರವಾಗಿ ಯೋಗೀಶ್ ಕೋಟ್ಯಾನ್ ಹಾಗೂ ಮಿಥುನ್ ಕುಮಾರ್ ರವರು ಉಪಸ್ಥಿತರಿದ್ದರು. ಯುವವಾಹಿನಿ ಮೂಲ್ಕಿ ಘಟಕದ ಅಧ್ಯಕ್ಷೆ ರಕ್ಷಿತಾ ಯೋಗೀಶ್ ಕೋಟ್ಯಾನ್ ಸ್ವಾಗತಿಸಿದರು, ಮಾಜಿ ಅಧ್ಯಕ್ಷರಾದ ವಿಜಯ್ ಕುಮಾರ್ ಕುಬೆವೂರು ಪ್ರಸ್ತಾವನೆಗೈದರು, ವಿಜಯಾ ಕಾಲೇಜಿನ ಪ್ರಾಂಶುಪಾಲರಾದ ನಾರಾಯಣ ಪೂಜಾರಿಯವರು ಧನ್ಯವಾದ ಸಮರ್ಪಿಸಿದರು. ಈ ಸಂಧರ್ಭದಲ್ಲಿ ಮುಲ್ಕಿ ಯುವವಾಹಿನಿಯ ಮಾಜಿ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು, ವಿಜಯಾ ಕಾಲೇಜಿನ ಎನ್.ಎಸ್.ಎಸ್ ಮತ್ತು ಎನ್.ಸಿ.ಸಿ ವಿದ್ಯಾರ್ಥಿಗಳು, ಹಾಗೂ ಈವಗ್ರೀನ್ ನ ಪ್ರಮುಖರು ಕಾರ್ಯದಲ್ಲಿ ಭಾಗವಹಿಸಿದ್ದರು. ಕೊನೆಗೆ ಗಣ್ಯ ಅತಿಥಿಗಳೊಂದಿಗೆ ಕಾಲೇಜಿನ ಆವರಣದಲ್ಲಿ ಗಿಡ ನೆಡುವ ಮುಖಾಂತರ ವನಮಹೋತ್ಸವ ಕಾರ್ಯವನ್ನು ಆಚರಿಸಲಾಯಿತು.

Leave a Reply

Your email address will not be published. Required fields are marked *

error: Content is protected !!