ಯುವವಾಹಿನಿ (ರಿ) ಹಳೆಯಂಗಡಿ ಘಟಕದ ಪದಗ್ರಹಣ

ಯುವಕರು ನಾಯಕತ್ವ ಗುಣ ಬೆಳೆಸಬೇಕು : ಯಶವಂತ ಪೂಜಾರಿ

ಹಳೆಯಂಗಡಿ : ಯುವ ಸಮುದಾಯ ಉತ್ತಮ‌ ನಾಯಕತ್ವ ಗುಣವನ್ನು ಬೆಳೆಸಬೇಕು ಎಂಬ ಸದುದ್ದೇಶದೊಂದಿಗೆ ಯುವವಾಹಿನಿ ಸಂಸ್ಥೆಯು ಯುವ ಸಮುದಾಯದ ಸಂಘಟನೆಯೊಂದಿಗೆ ಸಮಾಜ ಸೇವೆಗೆ ಆದ್ಯತೆ ನೀಡಲಾಗುತ್ತಿದೆ ಎಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿ ತಿಳಿಸಿದರು.

ಹಳೆಯಂಗಡಿ ಹರಿ ಓಂ ಸಭಾಂಗಣದಲ್ಲಿ ಯುವವಾಹಿನಿ (ರಿ) ಹಳೆಯಂಗಡಿ ಘಟಕದ 2018-19 ನೇ ಸಾಲಿನ ನೂತನ ಪದಾಧಿಕಾರಿಗಳ ಪ್ರತಿಜ್ಞಾ ವಿಧಿ ಬೋಧಿಸಿ ಅವರು ಮಾತನಾಡಿದರು.

ಹಳೆಯಂಗಡಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಚಂದ್ರಶೇಖರ್ ನಾನಿಲ್ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ಯುವವಾಹಿನಿ ಹಳೆಯಂಗಡಿ ಘಟಕದ ನೂತನ‌ ಅಧ್ಯಕ್ಷರಾಗಿ ಹೇಮನಾಥ್ ಬಿ.ಕರ್ಕೇರ ಹಾಗೂ ಪದಾಧಿಕಾರಿಗಳು ಅಧಿಕಾರ ಸ್ವೀಕರಿಸಿದರು.

ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ‌ ಅಧ್ಯಕ್ಷ ಲಕ್ಷ್ಮಣ್ ಸಾಲ್ಯಾನ್, ಡಾ.ನಂದಿನಿ , ವಿಶ್ವನಾಥ್ ಕೋಟ್ಯಾನ್, ಜೈಕೃಷ್ಣ ಬಿ.ಕೋಟ್ಯಾನ್, ಸಂಘದ ಗೌರವಾಧ್ಯಕ್ಷ ಗಣೇಶ್ ಜಿ.ಬಂಗೇರ, ಕಾರ್ಯದರ್ಶಿ ಹಿಮಕರ ಸುವರ್ಣ, ಕಟ್ಟಡ ಸಮಿತಿಯ ಅಧ್ಯಕ್ಷ ಮೋಹನ್ ಎಸ್.ಸುವರ್ಣ ಮತ್ತಿತರರು ಉಪಸ್ಥಿತರಿದ್ದರು.

ಅಧ್ಯಕ್ಷ ಶರತ್ ಕುಮಾರ್ ಸ್ವಾಗತಿಸಿದರು, ಕಾರ್ಯದರ್ಶಿ ಚಂದ್ರಿಕಾ ಪಿ.ಕೋಟ್ಯಾನ್ ವಾರ್ಷಿಕ ವರದಿ ವಾಚಿಸಿದರು. ರಮೇಶ್ ಬಂಗೇರ ವಂದಿಸಿದರು, ಬೃಜೇಶ್ ಕುಮಾರ್ ನಿರೂಪಿಸಿದರು

Leave a Reply

Your email address will not be published. Required fields are marked *

error: Content is protected !!