ಯುವವಾಹಿನಿ(ರಿ.) ಅಡ್ವೆ ಘಟಕದ ಆತಿಥ್ಯದಲ್ಲಿ ಕೃಷ್ಣ ಜನ್ಮಾಷ್ಟಮಿ ಹಾಗೂ ಮೊಸರುಕುಡಿಕೆಯ ಅಂಗವಾಗಿ ದಿನಾಂಕ 24-08-2019 ಶನಿವಾರದಂದು ಪುಟಾಣಿಗಳಿಗೆ ಮುದ್ದುಕೃಷ್ಣ ಸ್ಪರ್ಧೆ, ಬಾಲಕೃಷ್ಣ ಸ್ಪರ್ಧೆ ಹಾಗೂ ಶಾಲಾ ಮಕ್ಕಳಿಗೆ ಭಜನೆ ಸ್ಪರ್ಧೆ ಹಮ್ಮಿಕೊಳ್ಳಲಾಯಿತು. ವಿಜೇತರಿಗೆ ಪ್ರಥಮ, ದ್ವಿತೀಯ, ತೃತೀಯ ಹಾಗೂ ಭಾಗವಹಿಸಿದ ಎಲ್ಲಾ ಮಕ್ಕಳಿಗೆ ಸಮಾಧಾನಕರ ಬಹುಮಾನ ನೀಡಲಾಯಿತು.