ಕಟಪಾಡಿ : ಯುವವಾಹಿನಿ(ರಿ) ಕಟಪಾಡಿ ಘಟಕ ಹಾಗೂ ರಾಷ್ಟ್ರೀಯ ಬಿಲ್ಲವ ಮಹಾಮಂಡಲ ಮೂಲ್ಕಿ ಇದರ ಜಂಟಿ ಆಶ್ರಯದಲ್ಲಿ ದಿನಾಂಕ 26.11.2018ರಂದು ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗಾಗಿ ಜೀವನೋತ್ಸಾಹ ವ್ಯಕ್ತಿತ್ವ ವಿಕಸನ ಹಾಗೂ ಉದ್ಯೋಗ ಮಾಹಿತಿ ತರಬೇತಿ ಕಾರ್ಯಾಗಾರ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಸುಧಾಕರ್ ಕಾರ್ಕಳ ಕಾರ್ಯಾಗಾರ ನಡೆಸಿಕೊಟ್ಟರು. ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದ ಗೌ| ಪ್ರಧಾನ ಕಾರ್ಯದರ್ಶಿ ಹರೀಶ್ಚಂದ್ರ ಅಮೀನ್ ಕಾರ್ಯಾಗಾರ ಉದ್ಘಾಟಿಸಿದರು. ಯುವವಾಹಿನಿ(ರಿ) ಕಟಪಾಡಿ ಘಟಕದ ಅಧ್ಯಕ್ಷ ರಿತೇಶ್ ಬಿ.ಕೋಟ್ಯಾನ್ ಸ್ವಾಗತಿಸಿದರು. ಈ ಸಂದರ್ಭದಲ್ಲಿ ನಿಕಟಪೂರ್ವ ಅಧ್ಯಕ್ಷ ಮಹೇಶ್ ಅಂಚನ್ ಕಾರ್ಯಕ್ರಮ ಸಯೋದಕ ಸುನೀಲ್ ಡಿ.ಬಂಗೇರ್ ವೇದಿಕೆಯಲ್ಲಿದ್ದರು. ಸುಮಾರು 40 ಮಂದಿ ವಿದ್ಯಾರ್ಥಿಗಳು ಭಾಗವಹಿಸಿದ್ದರು. . ಮಧುಕರ್ ಆಂಚನ್ ಕಾರ್ಯಕ್ರಮ ನಿರೂಪಿಸಿದ್ದರು. ಕಾರ್ಯದರ್ಶಿ ಕಾರ್ತಿಕ್ ಡಿ.ಕೆ. ವಂದಿಸಿದರು.