ಅಡ್ವೆ: ಶ್ರೀ ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ದಿನಾಂಕ13-09-2018 ರಂದು ಯುವವಾಹಿನಿ ಅಡ್ವೆ ಘಟಕದ ವತಿಯಿಂದ ಸದಸ್ಯರಿಗೆ ಹಾಗೂ ಗ್ರಾಮಸ್ಥರಿಗೆ ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ನಂತರ ನಡೆದ ಸರಳ ಸಮಾರೋಪ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಜಿತೇಶ್ ಜೆ. ಕರ್ಕೇರ ವಹಿಸಿದ್ದರು. ಕಾರ್ಯಕ್ರಮದ ಅತಿಥಿಗಳಾಗಿ ಶ್ರೀ ಬ್ರಹ್ಮ ಬೈದರ್ಕಳ ಸೇವಾ ಸಮಿತಿ ಇದರ ಕಾರ್ಯದರ್ಶಿ ನವೀನ್ ಚಂದ್ರ ಸುವರ್ಣ, ಅರ್ಚಕರಾದ ರಾಮ ಪೂಜಾರಿ, ಹಿರಿಯರಾದ ಶೇಖರ ಪೂಜಾರಿ, ಮನೋಜ್ ಜಾನು ಕರ್ಕೇರ ಇವರುಗಳು ಭಾಗವಹಿಸಿದ್ದರು. ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು.
ಅಧ್ಯಕ್ಷ ಜಿತೇಶ್ ಜೆ. ಕರ್ಕೇರ ಸ್ವಾಗತಿಸಿ, ಕಾರ್ಯದರ್ಶಿ ಪ್ರಸನ್ನ ಕುಮಾರ್ ವಂದಿಸಿದರು. ಪ್ರವೀಣ್ ಕುಮಾರ್ ನಿರೂಪಿಸಿದರು.