ಯುವವಾಹಿನಿಯು ಶಿಸ್ತುಬದ್ದ ಸಂಘಟನೆಯಾಗಿ ಕಳೆದ 30 ವರ್ಷಗಳಲ್ಲಿ ಸಮಾಜಮುಖಿ ಕಾರ್ಯಗಳ ಮೂಲಕ ಬಿಲ್ಲವ ಸಮಾಜದ ಪ್ರಬುದ್ಧ ಸಂಘಟನೆಯಾಗಿ ಹೊರಹೊಮ್ಮಿದೆ ಎಂದು ಕರ್ನಾಟಕ ಹೈಕೋರ್ಟು ಸರಕಾರಿ ವಕೀಲರಾದ ಇರುವೈಲ್ ತಾರನಾಥ ಪೂಜಾರಿ ತಿಳಿಸಿದರು
ಅವರು ಮಂಗಳೂರು ನಗರದ ಹೃದಯ ಭಾಗವಾದ ಉರ್ವಸ್ಟೋರ್ ರಘು ಬಿಲ್ಡಿಂಗ್ ನಲ್ಲಿ ದಿನಾಂಕ 28.05.2017 ರಂದು ಅತ್ಯಂತ ಸುಸಜ್ಜಿತವಾದ ಹಾಗೂ ವಿಶಾಲವಾದ ಯುವವಾಹಿನಿ ಸಭಾಂಗಣದ ಉದ್ಘಾಟನಾ ಸಮಾರಂಭವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಕೇರಳ ವರ್ಕಳದ ಶಿವಗಿರಿ ಮಠದ ಪರಮಪೂಜ್ಯ ಶ್ರೀ ಶ್ರೀ ಸತ್ಯಾನಂದ ತೀರ್ಥ ಸ್ವಾಮೀಜಿಯವರು ಆಶೀರ್ವಚನ ನೀಡಿ ಮಾತನಾಡಿ ಯುವವಾಹಿನಿಯು ಬ್ರಹ್ಮಶ್ರೀ ನಾರಾಯಣಗುರುವರ್ಯರ ತತ್ವ ಸಂದೇಶಗಳ ಅನುಸಾರ ವಿದ್ಯೆ, ಉದ್ಯೋಗ, ಸಂಪರ್ಕ ದ ಮೂಲಕ ಯುವಜನತೆಯಲ್ಲಿ ಸದಾ ಜಾಗೃತಿ ಮೂಡಿಸಿ ಸ್ವಾಸ್ಥ್ಯ ಸಮಾಜದ ನಿರ್ಮಾಣದಲ್ಲಿ ಮಹತ್ವದ ಪಾತ್ರ ವಹಿಸಿದೆ .ಅತ್ಯಂತ ಸುಸಜ್ಜಿತವಾದ, ಸುಂದರವಾದ ಯುವವಾಹಿನಿ ಸಭಾಂಗಣವು ಸರ್ವರ ಮನಸೂರೆಗೊಂಡಿರುವುದು ಶ್ಲಾಘನೀಯ.ಯುವವಾಹಿನಿಯ ನೂತನ ಸಭಾಂಗಣದಲ್ಲಿ ಯುವವಾಹಿನಿಯ ಎಲ್ಲಾ ಕನಸುಗಳು ಸಾಕಾರಗೊಳ್ಳಲಿ ಎಂದು ಹಾರೈಸಿದರು.
ರಘ ಬಿಲ್ಡಿಂಗ್ ಕಟ್ಟಡದ ಮಾಲಕರಾದ ಶ್ರೀಮತಿ ಎಮ್.ಶಶಿಕಲಾ ಯುವವಾಹಿನಿ ಸಭಾಂಗಣವನ್ನು ಉದ್ಘಾಟಿಸಿದರು.ಹಾಗೂ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ಮಾಲಕರಾದ ಉಮೇಶ್ ಕೇಂದ್ರ ಸಮಿತಿಯ ಕಛೇರಿ ಉದ್ಘಾಟಿಸಿದರು.
ಉದ್ಯಮಿ ದಿವಾಕರ್ ಕೇಂದ್ರ ಸಮಿತಿ ಕಛೇರಿಯ ಕಂಪ್ಯೂಟರ್ ವಿಭಾಗವನ್ನು ಯುವವಾಹಿನಿ ವೆಬ್ ಸೈಟ್ ಅನಾವರಣಗೊಳಿಸುವ ಮೂಲಕ ಉದ್ಘಾಟಿಸಿದರು. ವಾಸ್ತು ತಜ್ಞರಾದ ರಾಜ್ ಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ಯುವವಾಹಿನಿ ಕೇಂದ್ರ ಸಮಿತಿಯ ಅದ್ಯಕ್ಷರಾದ ಪದ್ಮನಾಭ ಮರೋಳಿ ಸಮಾರಂಭ ಅಧ್ಯಕ್ಷತೆ ವಹಿಸಿದ್ದರು .
ಕಾರ್ಯಕ್ರಮದ ಸಂಚಾಲಕರಾದ ಹರೀಶ್ ಕೆ.ಪೂಜಾರಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಕಾರ್ಯದರ್ಶಿ ಪ್ರವೀಣ್ ಸಾಲ್ಯಾನ್ ಕಿರೋಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಯುವವಾಹಿನಿ ಸಭಾಂಗಣ ನಿರ್ಮಾಣದಲ್ಲಿ ಅವಿರತವಾಗಿ ಶ್ರಮಿಸಿದ ಯಶವಂತ ಪೂಜಾರಿ ಮಾಲೆಮಾರ್ ಇವರನ್ನು ಈ
ಸಂದರ್ಭದಲ್ಲಿ ಅಭಿನಂದಿಸಲಾಯಿತು.ಸಭಾಂಗಣ ನಿರ್ಮಾಣಕ್ಕೆ ಆರ್ಥಿಕ ಸಹಕಾರ ನೀಡಿದ ದಾನಿಗಳಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಮೂಲ್ಕಿ ಯುವವಾಹಿನಿ ಸದಸ್ಯರು ಪ್ರಾರ್ಥನೆ ನೆರವೇರಿಸಿದರು.ಮಂಗಳೂರು ಯುವವಾಹಿನಿ ಅಧ್ಯಕ್ಷರಾದ ರವೀಶ್ ಕುಮಾರ್ ಸ್ವಾಗತಿಸಿದರು. ಯುವವಾಹಿನಿ ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ಯಶವಂತ ಪೂಜಾರಿ ಪ್ರಾಸ್ತಾವನೆ ಮಾಡಿದರು.ಯುವವಾಹಿನಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ನಿತೇಶ್ ಜೆ.ಕರ್ಕೇರಾ ಧನ್ಯವಾದ ನೀಡಿದರು.ನರೇಶ್ ಕುಮಾರ್ ಸಸಿಹಿತ್ಲು ಕಾರ್ಯಕ್ರಮ ನಿರೂಪಿಸಿದರು.
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋರ್ ತುಳುಭವನದಲ್ಲಿ ಜರುಗಿದ ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...
ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...
ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...
ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...
Verygoodprograme congratilation yuvavahini
Another milestone in the history of yuvavahini