ಬಂಟ್ವಾಳ : ಯುವವಾಹಿನಿಯ ಮುಖವಾಣಿ ಯುವಸಿಂಚನ ಪತ್ರಿಕೆಯ ಜುಲೈ ತಿಂಗಳ ಮಾಸಿಕ ಪತ್ರಿಕೆಯನ್ನು ದಿನಾಂಕ 22.07.2018 ರಂದು ಬಿ.ಸಿ.ರೋಡ್ ಸ್ಪರ್ಶ ಕಲಾಮಂದಿರದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಆಟಿಡೊಂಜಿ ಕೂಟ ಕಾರ್ಯಕ್ರಮದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಸಾಂಸ್ಕೃತಿಕ ನಿರ್ದೇಶಕ ಭುವನೇಶ್ ಪಚ್ಚಿನಡ್ಕ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಯುವಸಿಂಚನ ಪತ್ರಿಕೆಯ ಸಂಪಾದಕಿ ಶುಭ ರಾಜೇಂದ್ರ , ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿ, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಕೆ.ಸೇಸಪ್ಪ ಕೋಟ್ಯಾನ್, ಉಪನ್ಯಾಸಕ ಸ್ಮಿತೇಶ್ ಎಸ್.ಬಾರ್ಯ,ವಕೀಲರಾದ ಸುರೇಶ್ ಪೂಜಾರಿ, ಬಂಟ್ವಾಳ ತಾಲೂಕು ಗ್ಯಾರೇಜ್ ಮಾಲಕರ ಸಂಘದ ಅಧ್ಯಕ್ಷ ವಿಶ್ವನಾಥ ಪೂಜಾರಿ, ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಮಿತಿಯ ಅಧ್ಯಕ್ಷೆ ಜಯಲಕ್ಷ್ಮಿ ಭುವನೇಶ್, ಉದ್ಯಮಿ ಸತೀಶ್ ಕುಮಾರ್, ಸಲಹೆಗಾರ ಬಿ.ತಮ್ಮಯ, ಹಿರಿಯರಾದ ಮುತ್ತಪ್ಪ ಪೂಜಾರಿ ,ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷ ಶಿವಾನಂದ ಪೂಜಾರಿ,ಕಾರ್ಯದರ್ಶಿ ಕಿರಣ್ ರಾಜ್ ಪೂಂಜರೆಕೋಡಿ ಮತ್ತಿತರರು ಉಪಸ್ಥಿತರಿದ್ದರು.