ಕಟಪಾಡಿ :- ಯುನೈಟೆಡ್ ಕಿಂಗ್ಡಮ್ ನ ಬರ್ಮಿಂಗ್ಹ್ಯಾಮ್ ನಲ್ಲಿ ನಡೆದ ಕಾಮನ್ವೆಲ್ತ್ ಗೇಮ್ಸ್ ನಲ್ಲಿ ವೇಯ್ಟ್ ಲಿಪ್ಟ್ ವಿಭಾಗದಲ್ಲಿ ದೇಶಕ್ಕೆ ಚೊಚ್ಚಲ ಪದಕ ಪಡೆದು ದೇಶದ ಕೀರ್ತಿ ಪತಾಕೆಯನ್ನು ಹಾರಿಸಿದ ಗುರುರಾಜ್ ಪೂಜಾರಿ ಇವರನ್ನು ಯುವವಾಹಿನಿ ಸಂಸ್ಥೆಯ ವತಿಯಿಂದ ಗೌರವಿಸಿ ಅಭಿನಂದಿಸಲಾಯಿತು. ಕಟಪಾಡಿ ವಿಶ್ವನಾಥ ಕ್ಷೇತ್ರದ ಸಪ್ತಪದಿ ಸಭಾಗ್ರಹದಲ್ಲಿ ಜರಗಿದ ಯುವವಾಹಿನಿ ಕೇಂದ್ರ ಸಮಿತಿ ಹಾಗೂ ಉಡುಪಿ ಘಟಕದ ಆತಿಥ್ಯದಲ್ಲಿ ಜರಗಿದ ಅಂತರ್ ಘಟಕ ಡೆನ್ನಾನ ಡೆನ್ನನ 2022 ಕಾರ್ಯಕ್ರಮದಲ್ಲಿ ಕರ್ನಾಟಕ ಸರಕಾರದ ಇಂಧನ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವರಾದ ಸುನೀಲ್ ಕುಮಾರ್ ಸಂಸ್ಥೆಯ ಪರವಾಗಿ ಗೌರವಿಸಿ ಅಭಿಂದಿಸಿದರು.
ಈ ಸಂದರ್ಭದಲ್ಲಿ ಶಾಸಕ ಲಾಲಾಜಿ ಆರ್ ಮೆಂಡನ್, ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್, ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಅಧಿಕಾರಿ ಪೂರ್ಣಿಮಾ, ದ.ಕ ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟಗಾರರ ಒಕ್ಕೂಟದ ಅಧ್ಯಕ್ಷ ಯಶ್ ಪಾಲ್ ಸುವರ್ಣ, ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಉದಯ್ ಅಮೀನ್ ಮಟ್ಟು, ಕಟಪಾಡಿ ವಿಶ್ವನಾಥ ಕ್ಷೇತ್ರದ ಅಧ್ಯಕ್ಷ ಇ. ಎನ್ ಶಂಕರ ಪೂಜಾರಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಶಿಲ್ಪಾ ಸುವರ್ಣ, ಉಡುಪಿ ಘಟಕದ ಅಧ್ಯಕ್ಷ ಪ್ರವೀಣ್ ಡಿ.ಪೂಜಾರಿ , ಯುವವಾಹಿನಿ ಕೇಂದ್ರ ಸಮಿತಿಯ ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ನಿರ್ದೇಶಕರಾದ ಜಗದೀಶ್ ಕುಮಾರ್ ಉಡುಪಿ ಹಾಗೂ ಡೆನ್ನಾನ ಡೆನ್ನನ ಕಾರ್ಯಕ್ರಮ ಸಂಚಾಲಕರಾದ ಮಹಾಬಲ ಅಮೀನ್ ಮತ್ತು ಅಶೋಕ್ ಕೋಟ್ಯಾನ್ ಉಪಸ್ಥಿತರಿದ್ದರು. ಕೇಂದ್ರ ಸಮಿತಿಯ ನಿರ್ದೇಶಕರಾದ ಜಗದೀಶ್ ಕುಮಾರ್ ಸ್ವಾಗತಿಸಿ, ಘಟಕದ ಕಾರ್ಯದರ್ಶಿ ದಯಾನಂದ ಕರ್ಕೆರ ವಂದಿಸಿ, ರೇಣುಕಾ ಕಣಿಯೂರು ನಿರೂಪಿಸಿದರು.