ಬೆಂಗಳೂರು :- ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಸರ್ಕಾರ ಇದರ ಸಹಯೋಗದಲ್ಲಿ ಯುವವಾಹಿನಿ (ರಿ.) ಬೆಂಗಳೂರು ಘಟಕದ ನೇತೃತ್ವದಲ್ಲಿ “ಯುವ ವೈಭವ-2022” ಎಂಬ ಸಾಂಸ್ಕೃತಿಕ ಹಬ್ಬವು ದಿನಾಂಕ 04 ಡಿಸೆಂಬರ್ 2022ರಂದು ಡಾ| ರಾಜಕುಮಾರ್ ಒಳಾಂಗಣ ಕ್ರೀಡಾಂಗಣ, ಮಹಾಲಕ್ಷ್ಮಿ ಲೇಔಟ್ ಇಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಲಾಯಿತು.
ಕಾರ್ಯಕ್ರಮದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು, ಬೆಂಗಳೂರು ಘಟಕದ ಅಧ್ಯಕ್ಷರಾದ ಶ್ರೀಧರ ಡಿ, ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಕಿಶನ್ ಪೂಜಾರಿ ಸೇರಿದಂತೆ ಘಟಕದ ವಿವಿಧ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.
ಬೆಂಗಳೂರು ಯುವವಾಹಿನಿ ಘಟಕದ ಸದಸ್ಯರಿಗೆ ಹಾಗೂ ಸದಸ್ಯರ ಮಕ್ಕಳಿಗೆ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಮಧ್ಯಾಹ್ನದ ನಂತರ ವಿವಿಧ ಸದಸ್ಯರಿಂದ ಮನೋರಂಜನಾ ಕಾರ್ಯಕ್ರಮಗಳು ನಡೆಯಿತು. ಘಟಕದ ಸದಸ್ಯರಿಂದ ಹಾಗೂ ಹವ್ಯಾಸಿ ಕಲಾವಿದರಿಂದ ‘ಮಹಿಶ ವಧೆ’ ಎನ್ನುವ ಯಕ್ಷಗಾನ ಪ್ರಸಂಗವು ನಡೆಯಿತು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು, ಸಂಸ್ಕೃತಿ ಚಿಂತಕರು ಹಾಗೂ ಉಪನ್ಯಾಸಕರಾದ ಡಾ. ಅರುಣ್ ಉಳ್ಳಾಲ್, ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಕಿಶನ್ ಪೂಜಾರಿ, ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರು ಹಾಗೂ ಕೇಂದ್ರ ಸಮಿತಿಯ ಕಾರ್ಯಕಾರಿ ಸಮಿತಿಯ ಸದಸ್ಯರು ಮತ್ತು ವಿವಿಧ ಘಟಕಗಳ ಅಧ್ಯಕ್ಷರು, ಘಟಕದ ಕಾರ್ಯದರ್ಶಿ ವಿಜೇತ್ ಪೂಜಾರಿ, ಕಲೆ ಹಾಗೂ ಸಾಂಸ್ಕೃತಿಕ ನಿರ್ದೇಶಕರಾದ ನವನೀತ್ ಹಾಗೂ ಕುಮಾರಿ ಚೈತ್ರ ಶ್ರೀ ಭಾಗವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಧರ ಡಿ ಇವರು ವಹಿಸಿದ್ದರು. ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವಿಜೇತರಾದ ತಂಡಗಳಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ವೇತನದ ಚೆಕ್ಕನ್ನು ಅರ್ಹ ಫಲಾನುಭಾವಿಗಳಿಗೆ ವಿತರಿಸಲಾಯಿತು. ಧನ್ಯವಾದ ಸಮರ್ಪಣೆಯೊಂದಿಗೆ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.