ಮುಲ್ಕಿ:- ದಿನಾಂಕ 25 ಡಿಸೆಂಬರ್ 2022 ರಂದು ಮುಲ್ಕಿಯ ವಿಜಯಾ ಕಾಲೇಜಿನ, ಅರ್ಪಣ ತೆರೆದ ಸಭಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶದಲ್ಲಿ ಯುವವಾಹಿನಿ ಸಾಧನಾ ಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಈ ಸಾಲಿನ ಯುವವಾಹಿನಿ ಸಾಧನಾಶ್ರೀ ಪ್ರಶಸ್ತಿಯನ್ನು 2022ರ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ರಾಜ್ ಕುಮಾರ್ ಬೆಹರೈನ್ ಇವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ಸರಕಾರದ ಇಂಧನ , ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವರಾದ ವಿ. ಸುನೀಲ್ ಕುಮಾರ್, ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಉಪಾಧ್ಯಕ್ಷರಾದ ಸೂರ್ಯಕಾಂತ್ ಜೆ ಸುವರ್ಣ, ಶ್ರೀ ನಾರಾಯಣ ಗುರು ಕಾಲೇಜು ಕುದ್ರೋಳಿ ಇದರ ಉಪನ್ಯಾಸಕರಾದ ಕೇಶವ ಬಂಗೇರ , ಮುಲ್ಕಿ ಮೂಡಬಿದಿರೆ ಕ್ಷೇತ್ರದ ಶಾಸಕರಾದ ಉಮನಾಥ್ ಕೋಟ್ಯಾನ್, ಚಲನಚಿತ್ರನಟ ರಾಹುಲ್ ಅಮೀನ್ , ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಿಲ್ಪಾಡಿ, ಸಮಾವೇಶ ನಿರ್ದೇಶಕರಾದ ಹರೀಂದ್ರ ಸುವರ್ಣ, ಸಮಾವೇಶ ಸಂಚಾಲಕರಾದ ಭಾರತಿ ಭಾಸ್ಕರ ಕೋಟ್ಯಾನ್ ಮತ್ತು ಎಲ್ಲಾ 33 ಘಟಕಗಳ ಅಧ್ಯಕ್ಷರು ಉಪಸ್ಥಿತರಿದ್ದರು.