ಪಡುಬಿದ್ರಿ :- ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ವತಿಯಿಂದ ಘಟಕವನ್ನು ಬಲಪಡಿಸುವ ನಿಟ್ಟಿನಲ್ಲಿ ವಿಶೇಷ ತರಬೇತಿ ಶಿಬಿರವು ದಿನಾಂಕ 03 ಜುಲೈ 2022 ನೇ ರವಿವಾರ ಬೆಳಿಗ್ಗೆ 10.00 ಗಂಟೆಗೆ ಸರಿಯಾಗಿ ಘಟಕದ ನಿಕಟಪೂರ್ವ ಅಧ್ಯಕ್ಷರಾದ ಚಿತ್ರಾಕ್ಷಿ ಕೆ ಕೋಟ್ಯಾನ್ ರವರ ಮನೆಯಲ್ಲಿ ಜರುಗಿತು. ಘಟಕದ ಮಾಜಿ ಅಧ್ಯಕ್ಷರುಗಳಾದ ರವಿರಾಜ್ ಎನ್ ಕೋಟ್ಯಾನ್, ಯೋಗೀಶ್ ಪೂಜಾರಿ, ಪ್ರಸಾದ್ ವೈ ಕೋಟ್ಯಾನ್, ಸುಜಿತ್ ಕುಮಾರ್ ಹಾಗೂ ಸಂತೋಷ್ ಪೂಜಾರಿ ಯುವವಾಹಿನಿಯ ಧ್ಯೇಯೋದ್ದೇಶ ಹಾಗೂ ಸಂಘಟನೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಸವಿಸ್ತಾರವಾಗಿ ಮಾತನಾಡಿದರು. ಇನ್ನಿತರ ವಿಷಯಗಳ ಬಗ್ಗೆಯೂ ಚರ್ಚಿಸಲಾಯಿತು, ಸಭೆಯಲ್ಲಿ ಭಾಗಿಯಾಗಿದ್ದ ಮಾಜಿ ಅಧ್ಯಕ್ಷರು ಹಾಗೂ ಸದಸ್ಯರು ಸಲಹೆ ಸೂಚನೆ ನೀಡಿ ಸಹಕರಿಸಿದರು. ಘಟಕದ ಅಧ್ಯಕ್ಷರಾದ ಕು.ಯಶೋಧ ಇವರು ಅಧ್ಯಕ್ಷತೆ ವಹಿಸಿ ಎಲ್ಲರನ್ನೂ ಸ್ವಾಗತಿಸಿದರು. ಕೋಶಾಧಿಕಾರಿ ಶ್ರವಣ್ ಲೆಕ್ಕಪತ್ರ ಮಂಡಿಸಿದರು. ನಂತರ 2022 – 23ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯನ್ನು ಚುನಾವಣಾಧಿಕಾರಿ ಚಿತ್ರಾಕ್ಷಿ ಇವರು ನಡೆಸಿದರು. ಬೆಳಗ್ಗಿನ ಉಪಹಾರದ ವ್ಯವಸ್ಥೆ ಮಾಡಿದ ಚಿತ್ರಾಕ್ಷಿ ಹಾಗೂ ಕುಟ್ಟಿ ಕೋಟ್ಯಾನ್ ಇವರುಗಳನ್ನು ಘಟಕದ ವತಿಯಿಂದ ಗೌರವಿಸಲಾಯಿತು. ಕಾರ್ಯದರ್ಶಿ ವಿಧಿತ್ ಪೂಜಾರಿ ಧನ್ಯವಾದ ಸಲ್ಲಿಸಿದರು.