ಕುಪ್ಪೆಪದವು :- ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಒಂದರಿಂದ ಹತ್ತು ವರ್ಷದ ಒಳಗಿನ ಮಕ್ಕಳಿಗೆ ದ್ವಿತೀಯ ವರ್ಷದ ಶ್ರೀ ಕೃಷ್ಣ ವೇಷ ಸ್ಪರ್ಧೆಯು ದಿನಾಂಕ 14 ಆಗಸ್ಟ್ 2022ರಂದು ಶ್ರೀ ಮಹಾಲಿಂಗೇಶ್ವರ ಸಭಾಭವನ ಬೊಲಿಯ ಕಡೆಗುಂಡ್ಯ ಇಲ್ಲಿ ನಡೆಯಿತು. ಉದ್ಘಾಟನಾ ಕಾರ್ಯಕ್ರಮ ದಲ್ಲಿ ಘಟಕದ ಅಧ್ಯಕ್ಷರಾದ ಜಗದೀಶ್ (ತಿಮ್ಮಯ್ಯ) ದುರ್ಗಾಕೊಡಿ ಅಧ್ಯಕ್ಷತೆ ವಹಿಸಿದ್ದರು. ಮುತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸತೀಶ್ ಪೂಜಾರಿ ಬಲ್ಲಾಜೆ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು, ವೇದಿಕೆಯಲ್ಲಿ ಮುತ್ತೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಮಾಲತಿ, ಪಂಚಾಯತ್ ಸದಸ್ಯರಾದ ಶ್ರೀಮತಿ ಸುಷ್ಮಾ ಸಂತೋಷ್, ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಆಡಳಿತ ಮಂಡಳಿ ಸದಸ್ಯರಾದ ಶ್ರೀ ಭವಾನಂದ ಶೆಟ್ಟಿ, ಮತ್ತು ಯುವವಾಹಿನಿ ಕೇಂದ್ರ ಸಮಿತಿ ಸಂಘಟನಾ ಕಾರ್ಯದರ್ಶಿ ಆಗಿರುವ ಸತೀಶ್ ಕೆ ಎಂ, ಉಪಸ್ಥಿತರಿದ್ದರು. ಘಟಕದ ಕೋಶಾಧಿಕಾರಿ ಅಶ್ವಿನಿ ಸ್ವಾಗತಿಸಿ , ವಿನಯ್ ಧನ್ಯವಾದ ಸಮರ್ಪಿಸಿ, ಘಟಕದ ಸ್ಥಾಪಕಾಧ್ಯಕ್ಷರಾದ ಅರುಣ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.