ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥವನ್ನು ದಿನಾಂಕ‌ 24-08-2024ನೇ ಶನಿವಾರ ಕುದ್ರೋಳಿ ಶ್ರೀ ಗ್ರಂಥ ಗೋಕರ್ಣನಾಥ ಕ್ಷೇತ್ರದಲ್ಲಿ ಲೋಕಾರ್ಪಣೆ ಮಾಡಲಾಯಿತು.

ಜಗತ್ತಿಗೆ ಮಾನವೀಯತೆಯ ಸಂದೇಶ ನೀಡಿದವರಲ್ಲಿ ಬುದ್ಧ ಮತ್ತು ಬಸವಣ್ಣರ ಬಳಿಕದ ಸ್ಥಾನ ಬ್ರಹ್ಮಶ್ರೀ ನಾರಾಯಣಗುರುಗಳಿಗೆ ಸಲ್ಲುತ್ತದೆ ಎಂದು ಗ್ರಂಥ ಬಿಡುಗಡೆಗೊಳಿಸಿದ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅಭಿಪ್ರಾಯಿಸಿದ್ದಾರೆ.
ಬೌದ್ಧ ಧರ್ಮ ಇಂದು ಪ್ರಪಂಚದಲ್ಲಿ ಮೂರನೇ ದೊಡ್ಡ ಧರ್ಮವಾಗಿದ್ದರೆ, ಭಾರತದಲ್ಲಿ ಅದರ ನೆಲೆ ಮಾತ್ರವಿದೆ. ಬಸವಣ್ಣ 12ನೇ ಶತಮಾನದಲ್ಲಿ ಮಾನವೀಯತೆಯನ್ನು ಪ್ರತಿಪಾದನೆ ಮಾಡುತ್ತಾ ಅಹಿಂಸೆಯೇ ಪರಮೋಧರ್ಮ ಎಂದು ಸಾರಿದವರು. ಬಳಿಕ ರಕ್ತರಹಿತ ಕ್ರಾಂತಿಯ ಮೂಲಕ ಕೇರಳದಲ್ಲಿ ಸಾಮಾಜಿಕ ಬದಲಾವಣೆಯನ್ನು ತಂದವರು ಬ್ರಹ್ಮಶ್ರೀ ನಾರಾಯಣ ಗುರುಗಳು. ಇಂದು ನಾವು ಮಂಗಳೂರಿನಲ್ಲಿ ಸಾಕಷ್ಟು ಗುರು ಮಂದಿರಗಳನ್ನು ಕಟ್ಟಿದ್ದೇವೆ. ಆದರೆ, ನಾರಾಯಣಗುರುಗಳು ಮಂದಿರ ಕಟ್ಟಿಸಿದ ಧೈಯೋದ್ದೇಶಗಳೇ ಬೇರೆ. ದೇವಸ್ಥಾನಕ್ಕೆ ಶೂದ್ರರಿಗೆ, ಪಂಚಮರಿಗೆ ಪ್ರವೇಶಾವಕಾಶ ಇಲ್ಲದಾಗ ಶಿವಗಿರಿಯಲ್ಲಿ ಈಳವ ಶಿವನನ್ನು ಪ್ರತಿಷ್ಠಾಪನೆ ಮಾಡಿ, ಎಲ್ಲಾ ಶೂದ್ರರಿಗೂ ದೇವಸ್ಥಾನಕ್ಕೆ ಪ್ರವೇಶಕ್ಕೆ ಅವಕಾಶ ನೀಡಿದ ನಾರಾಯಣ ಗುರುಗಳು, ಆ ಕಾಲದ ಗೊಡ್ಡು ಸಂಪ್ರದಾಯಗಳನ್ನು ವಿರೋಧಿಸಿ ಹಿಂದೂ ಧರ್ಮದಲ್ಲಿದ್ದುಕೊಂಡೇ ಸುಧಾರಣೆ ತಂದವರು.
ಮದ್ಯಪಾನ ನಿಷೇಧ, ನೈರ್ಮಲ್ಯಕ್ಕೆ ಒತ್ತು ನೀಡಿ, ಶಿಕ್ಷಣಕ್ಕೆ ಪ್ರೋತ್ಸಾಹಿಸಿ, ಆಡಂಬರದ ವಿವಾಹವನ್ನು ವಿರೋಧಿಸಿ ಕೇರಳದಲ್ಲಿ ಕ್ರಾಂತಿ ಮಾಡಿದ ನಾರಾಯಣ ಗುರುಗಳು ಗುರುಮಂದಿರಗಳನ್ನು ಕಟ್ಟಿದ್ದು, ಭಜನೆ ಅಥವಾ ಪೂಜೆ ಮಾಡುವ ಉದ್ದೇಶದಿಂದ ಅಲ್ಲ. ಗುರುಮಂದಿರದ ಜತೆ ಗ್ರಂಥಾಲಯ ಕಟ್ಟಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಸಂದೇಶ ಅವರದ್ದಾಗಿತ್ತು. ಆ ಸಂದೇಶ ಮಾತ್ರ ಪಾಲನೆಯಾಗುತ್ತಿಲ್ಲ ಎಂದು ಬಿ.ಕೆ.ಹರಿಪ್ರಸಾದ್ ಹೇಳಿದರು.

ಮಹಾತ್ಮಾ ಗಾಂಧೀಜಿ ರಾಷ್ಟ್ರಪಿತ ಎಂದು ಜಗತ್ಪಸಿದ್ದರಾಗಲು ನಾರಾಯಣಗುರುಗಳು ಪ್ರೇರಣೆಯಾಗಿದ್ದು, ಗುರುಗಳ ಸರ್ವಧರ್ಮ ಸಮಭಾವದ ಗುರುಮಂತ್ರವನ್ನು ತನ್ನದಾಗಿಸಿಕೊಂಡ ಮಹಾತ್ಮಾ ಗಾಂಧೀಜಿಯವರ ಜನ್ಮದಿನವನ್ನು ಪ್ರಪಂಚದ 127 ದೇಶಗಳಲ್ಲಿ ಆಚರಣೆ ಮಾಡಲಾಗುತ್ತದೆ, ಹಾಗಾಗಿ ಪೂಜೆ, ದೇವಸ್ಥಾನ ನಿರ್ಮಾಣ ಸಾಕು, ಇನ್ನು ಸಮಾಜದ ಶಿಕ್ಷಣಕ್ಕೆ ಆದ್ಯತೆ ನೀಡಿ ಸರಸ್ವತಿ ಮಂದಿರಗಳನ್ನು ಕಟ್ಟುವಂತಾಗಲಿ, ಈ ಗ್ರಂಥದ ಮೂಲಕ ಯುವಪೀಳಿಗೆಗೆ ಮಾರ್ಗದರ್ಶನವಾಗಲಿ ಎಂದು ಆಶಯ ವ್ಯಕ್ತಪಡಿಸಿದರು.

ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೊರಗಪ್ಪ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆರ್ಯ ಈಡಿಗ ಮಹಾ ಸಂಸ್ಥಾನದ ಪೀಠಾಧಿಪತಿ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಶೀರ್ವಚನ ನೀಡಿ, ಜಾತಿ-ಶೋಷಣೆ ವಿರುದ್ಧ ಮಾತನಾಡಿದ ಬಹುತೇಕ ಮಹನೀಯರು ಯಾರೂ ಕ್ಷೇತ್ರಾರಾಧನೆಯನ್ನು ಬೆಂಬಲಿಸಿಲ್ಲ. ಆದರೆ ನಾರಾಯಣ ಗುರುಗಳು ಅದಕ್ಕೆ ಮಹತ್ವ ನೀಡಿದವರು. ಕ್ಷೇತ್ರಾರಾಧನೆಯನ್ನು ಬಿಟ್ಟು ಭಾರತೀಯ ಸಂಸ್ಕೃತಿ ಇಲ್ಲವಾಗಿದ್ದು ಬ್ರಹ್ಮಶ್ರೀ ನಾರಾಯಣ ಗುರುಗಳ ಕ್ಷೇತ್ರ ಸಂಕಲ್ಪ ಮಾನಸಿಕ ನೆಮ್ಮದಿಗೆ ಪೂರಕವಾಗಿದೆ ಎಂದರು.

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಧ್ಯಕ್ಷ ಎಚ್.ಎಸ್. ಸಾಯಿರಾಂ ಕಾರ್ಯಕ್ರಮ ಉದ್ಘಾಟಿಸಿ, ಶುಭ ಹಾರೈಸಿದರು.

ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಹರೀಶ್ ಕೆ ಪೂಜಾರಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಕುದ್ರೋಳಿ ಗುರುಬೆಳದಿಂಗಳು ಫೌಂಡೇಶನ್ ಅಧ್ಯಕ್ಷ ಹಾಗೂ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್., ಮಂಗಳೂರು ವಿವಿ ಉಪಕುಲಪತಿ ಪಿ.ಎಲ್.ಧರ್ಮ, ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನ್ ಚಂದ್ರ ಡಿ. ಸುವರ್ಣ, ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಅಧ್ಯಕ್ಷ ರಾಜಶೇಖರ್ ಕೋಟ್ಯಾನ್, ನಾರಾಯಣಗುರು ವಿಚಾರ ವೇದಿಕೆ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್, ನಮ್ಮ ಕುಡ್ಲ ವಾಹಿನಿ ನಿರ್ದೇಶಕ ಲೀಲಾಕ್ಷ ಬಿ. ಕರ್ಕೇರಾ, ಶ್ರೀ ನಾರಾಯಣಗುರು ವೈದಿಕ ಸಮಿತಿ ಅಧ್ಯಕ್ಷ ಹರೀಶ್ ಶಾಂತಿ, ಬೆಳ್ತಂಗಡಿ ನಾರಾಯಣಗುರು ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ ಕಲ್ಲಾಪು, ಕುಳಾಯಿ ಫೌಂಡೇಶನ್ ಅಧ್ಯಕ್ಷೆ ಪ್ರತಿಭಾ ಕುಳಾಯಿ, ಭಾಗವಹಿಸಿದ್ದರು.

ಗ್ರಂಥ ಅನುವಾದಕರಾದ ಮೀನಾಕ್ಷಿ ರಾಮಚಂದ್ರ, ಹಾಗೂ ಗ್ರಂಥ ಲೋಕಾರ್ಪಣೆ ಕಾರ್ಯದಲ್ಲಿ ಶ್ರಮಿಸಿದ ರಾಮಚಂದ್ರ ಪೂಜಾರಿ ಇವರನ್ನು ಈ ಸಂದರ್ಭದಲ್ಲಿ ಅಭಿನಂದಿಸಲಾಯಿತು.

ಅರವಿಪುರದಿಂದ ಓಂಕಾರೇಶ್ವರದವರೆಗೆ : ಮನಸೂರೆಗೊಂಡ ಮುಖಪುಟ

ಮೇಲು ಕೀಳೆಂದು ಬೀಗುವ, ಬಿಗು ನೀತಿಯ ಖಂಡಿಸಿ ಪಾಮರಪರ ಶಕ್ತಿಯಾಗಿ, ಏಕ ದೇವತಾರಾಧನೆಯ ಬೋಧಿಸಿ, ಸರ್ವರಿಗೂ ಸಮಾನ ಅವಕಾಶದ ಏರು ದ್ವನಿಯಾಗಿ ಹೋರಾಡಿ ಮೌನ ಕ್ರಾಂತಿಯ ಗುರುಸಂದೇಶದ ಮಾನವ ಸರಪಳಿಯ ಒಗ್ಗಟ್ಟಿನ ಸಂಕೇತನ್ನು ಇಲ್ಲಿ ಸೂಚ್ಯವಾಗಿ ಬಳಸಲಾಗಿದೆ. ಒಟ್ಟಾರೆಯಾಗಿ ಇದು ಗುರುಸಂದೇಶದ ಪಾಲನೆಯ ಕಲ್ಪನೆಯಡಿಲ್ಲಿ ನಿರ್ಮಿತವಾಗಿದೆ. ಗುರುಗಳು ತಮ್ಮ ಸ್ವಹಸ್ತದಿಂದ ಹಾಗೂ ತನ್ನ ನಿಷ್ಟಾವಂತ ಶಿಷ್ಯರಿಂದ ಪ್ರತಿಷ್ಟಾಪಿಸಲ್ಪಟ್ಟ 81 ದೇವಾಲಯಗಳ ತತ್ವ ಸಂದೇಶದ ಅಡಿಗಲ್ಲಲ್ಲಿ ದೇಗುಲ ಪ್ರವೇಶ ಮತ್ತು ಪೂಜೆ ನೀಡುವ ಹಕ್ಕು ಸಕಲ ಭಕ್ತ ಕೋಟಿಯ ಕರ್ತವ್ಯವೆನ್ನುವುದನ್ನು ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥದ ಮುಖಪುಟ ಸೂಚಿಸುತ್ತಿರುವುದು ಓದುಗರ ಮನಸೂರೆಗೊಂಡಿದೆ.

ಶಾಲಾ ಕಾಲೇಜು ಮಟ್ಟದ ಪ್ರಬಂಧ ಭಾಷಣ ಸ್ಪರ್ಧೆ
ಶಾಲಾ ಮಕ್ಕಳಿಗೆ ಗುರುಗಳ‌ ಸಂದೇಶದ ಜಾಗೃತಿ ಮೂಡಿಸುವ ಸಲುವಾಗಿ ಯುವವಾಹಿನಿ ಮಂಗಳೂರು ಘಟಕವು ನಾರಾಯಣ ಗುರುಗಳ ಜೀವನ ಹಾಗೂ ತತ್ವಾದರ್ಶ ಕುರಿತಾಗಿ ಪ್ರಬಂಧ ಹಾಗೂ ಭಾಷಣ ಸ್ಪರ್ಧೆಯನ್ನು ಆಯೋಜಿಸಿತ್ತು.
ಈ ಸ್ಪರ್ಧೆಯಲ್ಲಿ 45 ಶಾಲಾ ಕಾಲೇಜುಗಳ 129 ವಿದ್ಯಾರ್ಥಿಗಳು ಭಾಗವಹಿಸಿದ್ದು, 9 ವಿಭಾಗದಲ್ಲಿ 27 ವಿದ್ಯಾರ್ಥಿಗಳು ಬಹುಮಾನ ಗಳಿಸಿದರು

ಯುವವಾಹಿನಿ ಮಂಗಳೂರು ಘಟಕ ಅಧ್ಯಕ್ಷ ನಾಗೇಶ್ ಅಮೀನ್, ಯುವವಾಹಿನಿ ಮಂಗಳೂರು ಘಟಕದ ಕಾರ್ಯದರ್ಶಿ ಶ್ರವಣ್ ಎಸ್. ಕೂಳೂರು, ನಾರಾಯಣಗುರು ತತ್ವಪ್ರಚಾರ ಅನುಷ್ಠಾನ ನಿರ್ದೇಶಕ ಪೂವಪ್ಪ ಕುಕ್ಯಾನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಯುವವಾಹಿನಿ ಕೇಂದ್ರ ಸಮಿತಿ ಮಾಜಿ ಅಧ್ಯಕ್ಷ ಸಾಧು ಪೂಜಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ಜಗದೀಶ್‌ಚಂದ್ರ ಡಿ.ಕೆ ಸ್ವಾಗತಿಸಿದರು. ಶ್ರೀರಕ್ಷಾ ಪ್ರಾರ್ಥಿಸಿದರು. ಯುವವಾಹಿನಿ ಕೇಂದ್ರ ಸಮಿತಿಯ ನಾರಾಯಣಗುರು ತತ್ವಪ್ರಚಾರ ಅನುಷ್ಠಾನ ನಿರ್ದೇಶಕ ಮೋಹನ್ ಮಾಡೂರು ವಂದಿಸಿದರು, ದಿನೇಶ್ ಸುವರ್ಣ ರಾಯಿ ಮತ್ತು ಪ್ರಜ್ಞಾ ಓಡಿಲ್ನಾಳ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 14-12-2024
ಸ್ಥಳ :

ಯುವವಾಹಿನಿ (ರಿ.) ಪುತ್ತೂರು ಘಟಕ

ದಿನಾಂಕ : 15-12-2024
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ (ರಿ) ಕುಳಾಯಿ

ಯುವವಾಹಿನಿ (ರಿ.) ಪಣಂಬೂರು - ಕುಳಾಯಿ ಘಟಕ

ದಿನಾಂಕ : 11-12-2024
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಶಿವಗಿರಿ, ಪೊನ್ನೊಟ್ಟು ವಿಟ್ಲ.

ಯುವವಾಹಿನಿ (ರಿ) ವಿಟ್ಲ ಘಟಕ

ದಿನಾಂಕ : 20-12-2024
ಸ್ಥಳ : ಮೂಡುಬಿದಿರೆ

37ನೇ ವಾರ್ಷಿಕ ಸಮಾವೇಶ

ದಿನಾಂಕ : 07-12-2024
ಸ್ಥಳ : ಕೂಳೂರು ಪಂಪ್‌ ಹೌಸ್ ಬಳಿ

ವಿದ್ಯಾನಿಧಿಯ ಸಹಾಯಾರ್ಥವಾಗಿ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
error: Content is protected !!