ಯುವವಾಹಿನಿ (ರಿ) ಮುಲ್ಕಿ ಘಟಕದಿಂದ ಶಿಕ್ಷಕರ ದಿನಾಚರಣೆ

ಉತ್ತಮ ಪ್ರಜೆಗಳನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ತರ

ದೇಶದ ಸುಭದ್ರ ಭವಿಷ್ಯ ಮತ್ತು ಉತ್ತಮ ಪ್ರಜೆಗಳನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ತರವಾಗಿದೆ ಎಂದು ಮುಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಗೋಪಿನಾಥ್ ಪಡಂಗ ತಿಳಿಸಿದರು
ಅವರು ದಿನಾಂಕ 05.09.2017ರಂದು ಯುವವಾಹಿನಿ (ರಿ) ಮುಲ್ಕಿ ಘಟಕದ ಆಶ್ರಯದಲ್ಲಿ ಶ್ರೀ ನಾರಾಯಣಗುರು ಪದವಿಪೂರ್ವ ಕಾಲೇಜಿನ ಸಹಯೋಗದೊಂದಿಗೆ ಮುಲ್ಕಿ ರುಕ್ಕುರಾಮ್ ಸಭಾಗೃಹದಲ್ಲಿ ಜರುಗಿದ ಶಿಕ್ಷಕರ ದಿನಾಚರಣೆ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.
ಹಿರಿಯ ಶಿಕ್ಷಕರಾದ ಗಂಗಾಧರ್ ಪೂಜಾರಿ ಹಾಗೂ ವೀಣಾ ಸಿ.ಶೆಟ್ಟಿಗಾರ್ ಇವರನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಗಂಗಾಧರ್ ಮಾನವೀಯ ಮೌಲ್ಯಗಳು ಕುಸಿಯುತ್ತಿರುವ ಕಾಲಘಟ್ಟದಲ್ಲಿ ಗುರುವಂದನೆ ಮೂಲಕ ಸಂಸ್ಕಾರಯುತ ಕಾರ್ಯಕ್ರಮ ಆಯೋಜಿಸಿದ ಮುಲ್ಕಿ ಯುವವಾಹಿನಿ ಕಾರ್ಯ ಶ್ಲಾಘನೀಯ ಎಂದು ತಿಳಿಸಿದರು. ನಾರಾಯಣಗುರು ವಿದ್ಯಾಸಂಸ್ಥೆಗಳ ಒಟ್ಟು 60 ಶಿಕ್ಷಕರನ್ನು ಒಂದೇ ವೇದಿಕೆಯಲ್ಲಿ ಗೌರವಿಸಲಾಯಿತು.
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿ, ನಾರಾಯಣಗುರು ವಿದ್ಯಾಸಂಸ್ಥೆಗಳ ಸಂಚಾಲಕರಾದ ಎಚ್.ವಿ.ಕೋಟ್ಯಾನ್, ಆಡಳಿತಾಧಿಕಾರಿ ಅಡ್ವೆ ರವೀಂದ್ರ ಪೂಜಾರಿ,ಕಾಲೇಜು ಆಡಳಿತ ಮಂಡಳಿಯ ಕಾರ್ಯದರ್ಶಿ ಬಾಲಚಂದ್ರ ಸನಿಲ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು
,ಮುಖ್ಯೋಪಾಧ್ಯಾಯಿನಿ ಯಶೋಧ ಎಲ್.ಸಾಲ್ಯಾನ್, ವಿದ್ಯಾರ್ಥಿ ಸಂಘದ ನಾಯಕರಾದ ಪ್ರಥಮ್ ಅಂಚನ್, ರಮಣೇಶ್ ಪೂಜಾರಿ, ಯುವವಾಹಿನಿ ಮುಲ್ಕಿ ಕಾರ್ಯದರ್ಶಿ ಸತೀಶ್ ಕಿಲ್ಪಾಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಯುವವಾಹಿನಿ (ರಿ) ಮುಲ್ಕಿ ಘಟಕದ ಅಧ್ಯಕ್ಷರಾದ ರಕ್ಷಿತಾ ಯೋಗೀಶ್ ಕೋಟ್ಯಾನ್ ಸ್ವಾಗತಿಸಿದರು,ಪ್ರಾಂಶುಪಾಲರಾದ ಯತೀಶ್ ಅಮೀನ್ ಧನ್ಯವಾದ ನೀಡಿದರು. ಪೂಜಾ ಕಾರ್ಯಕ್ರಮ ನಿರ್ವಹಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!