ಯುವವಾಹಿನಿ(ರಿ.) ಪಡುಬಿದ್ರಿ ಘಟಕ

ಕುಟುಂಬ ಕಲರವ

ಪಡುಬಿದ್ರಿ: ಯುವವಾಹಿನಿ ಯುವ ಮನಸ್ಸುಗಳ ಶಕ್ತಿಯಾಗಿದ್ದು ಇಲ್ಲಿ ಅಧಿಕಾರ, ಅವಧಿಗಳು ಮುಖ್ಯವಲ್ಲ. ನಮ್ಮವರು ಎಂಬ ಭಾವನೆಯ ಜೊತೆಗೆ ನಮ್ಮ ಸಂಸ್ಥೆ ಎನ್ನುವ ಅಭಿಮಾನವಿದೆ. ಸಮಾಜಕ್ಕಾಗಿ ದುಡಿಯುವ ಸಂಕಲ್ಪಿತ ಆಶಯವಿದೆ. ಕುಟುಂಬ ಕಲರವದಂತಹ ಕಾರ್ಯಕ್ರಮಗಳು ಪ್ರತಿ ಘಟಕಗಳಲ್ಲೂ ನಡೆಯಬೇಕಿದೆ ಎಂದು ಲಯನ್ಸ್ ಜಿಲ್ಲೆ 317ಡಿ, ಲಿಯೋ ಮಾಜಿ ಜಿಲ್ಲಾಧ್ಯಕ್ಷರಾದ ಕವನ್ ರಾಜ್ ಕುಬೆವೂರು
ಹೇಳಿದರು.

ಅವರು ಪಡುಬಿದ್ರಿ ಸುಜ್ಞಾನ್ ಕಾಲೋನಿಯ ಸಭಾಗೃಹದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ(ರಿ.) ಪಡುಬಿದ್ರಿ ಘಟಕದ ಆಶ್ರಯದಲ್ಲಿ 02-06-2024 ರವಿವಾರದಂದು ಘಟಕದ ಸದಸ್ಯರಿಗಾಗಿ ಜರಗಿದ ಕುಟುಂಬ ಕಲರವ-2024 ಆಟ-ಊಟ-ಕೂಟ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿದರು.

ಎಸ್.ಎಸ್.ಎಲ್.ಸಿ, ಪಿಯುಸಿ ಮತ್ತು ಎಂಬಿಎಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿ ಪಡುಬಿದ್ರಿ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದ ಪ್ರಧಾನ ಅರ್ಚಕರಾದ ಚಂದ್ರಶೇಖರ ಶಾಂತಿ, ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘ(ರಿ.) ಇದರ ಅದ್ಯಕ್ಷರಾದ
ವೈ ಸುಧೀರ್ ಕುಮಾರ್, ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಸಂಘಟನಾ ಕಾರ್ಯದರ್ಶಿ ಭಾರತಿ ಭಾಸ್ಕರ್, ಕಾರ್ಯದರ್ಶಿ ನಿಖಿಲ್ ಪೂಜಾರಿ ಉಪಸ್ಥಿತರಿದ್ದರು.

ಯುವವಾಹಿನಿ ಪಡುಬಿದ್ರಿ ಘಟಕದ ಅಧ್ಯಕ್ಷರಾದ ಅಶ್ವಥ್ ಅಧ್ಯಕ್ಷತೆ ವಹಿಸಿದ್ದರು. ಸುಗಂಧಿ ಶ್ಯಾಮ್, ಸುಜಾತ ಹರೀಶ್ ಪ್ರಾರ್ಥಿಸಿದರು. ಘಟಕದ ಅಧ್ಯಕ್ಷರಾದ ಅಶ್ವಥ್ ಸ್ವಾಗತಿಸಿದರು.
ಮಾಜಿ ಅಧ್ಯಕ್ಷ ಸುಜಿತ್ ಕುಮಾರ್ ಪ್ರಸ್ತಾವನೆಗೈದರು. ರವಿರಾಜ್ ಕೋಟ್ಯಾನ್ ಸ್ಫರ್ದೆಗಳನ್ನು ನಡೆಸಿ ಕೊಟ್ಟರು. ಚೈತ್ರ ಮನೋಹರ್ ಹಾಗೂ ತೇಜಲ್ ಕಾರ್ಯಕ್ರಮ ನಿರೂಪಿಸಿದರು. ಪ್ರಹಸನ ಸ್ಪರ್ಧೆಯಲ್ಲಿ ಚೈತ್ರಾ ಮನೋಹರ್ ತಂಡ, ಪೂಜಾ ವಿಧಿತ್ ತಂಡ , ಐಶ್ವರ್ಯಾ ಕವನ್ ರಾಜ್ ತಂಡ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನವನ್ನು ಪಡೆಯಿತು ಹಾಗೂ ಉತ್ತಮ ನಟ, ನಟಿ ಪ್ರಶಸ್ತಿಯನ್ನು ಪ್ರಸಾದ್ ವೈ ಕೋಟ್ಯಾನ್, ಲಾವಣ್ಯ ಪಲಿಮಾರು, ಹಾಗೂ ಕೃತಿಕಾ ಪಲಿಮಾರು ಪಡೆದುಕೊಂಡರು. ಕಾರ್ಯದರ್ಶಿ ನಿಖಿಲ್ ಪೂಜಾರಿ ವಂದಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 14-12-2024
ಸ್ಥಳ :

ಯುವವಾಹಿನಿ (ರಿ.) ಪುತ್ತೂರು ಘಟಕ

ದಿನಾಂಕ : 15-12-2024
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ (ರಿ) ಕುಳಾಯಿ

ಯುವವಾಹಿನಿ (ರಿ.) ಪಣಂಬೂರು - ಕುಳಾಯಿ ಘಟಕ

ದಿನಾಂಕ : 11-12-2024
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಶಿವಗಿರಿ, ಪೊನ್ನೊಟ್ಟು ವಿಟ್ಲ.

ಯುವವಾಹಿನಿ (ರಿ) ವಿಟ್ಲ ಘಟಕ

ದಿನಾಂಕ : 20-12-2024
ಸ್ಥಳ : ಮೂಡುಬಿದಿರೆ

37ನೇ ವಾರ್ಷಿಕ ಸಮಾವೇಶ

ದಿನಾಂಕ : 07-12-2024
ಸ್ಥಳ : ಕೂಳೂರು ಪಂಪ್‌ ಹೌಸ್ ಬಳಿ

ವಿದ್ಯಾನಿಧಿಯ ಸಹಾಯಾರ್ಥವಾಗಿ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
error: Content is protected !!