ಪುತ್ತೂರು : ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಬಿಲ್ಲವ ಸಂಘದ ಅಧ್ಯಕ್ಷರಾದ ಸತೀಶ್ ಕೆಡೆಂಜಿ ದಿನಾಂಕ 08-12-2024 ರಂದು ಅವಿಭಜಿತ ಪುತ್ತೂರು ತಾಲೂಕಿನ ಸಮಾಜ ಬಾಂಧವರಿಗಾಗಿ ನಡೆದ ಕ್ರೀಡಾಕೂಟವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ, ಬ್ರಹ್ಮಶ್ರೀ ನಾರಾಯಣ ಗುರುಗಳ ಆಶೀರ್ವಾದದಿಂದ ಹಲವಾರು ವರ್ಷಗಳ ಬಳಿಕ ಯುವವಾಹಿನಿ ಪುತ್ತೂರು ಘಟಕವು ದೊಡ್ಡ ಮಟ್ಟದಲ್ಲಿ ಕ್ರೀಡಾ ಕೂಟವನ್ನು ಯಶಸ್ವಿಯಾಗಿ ಆಯೋಜಿಸುತ್ತಿದೆ. ಸ್ಪರ್ಧೆಯಲ್ಲಿ ಭಾಗವಹಿಸುವುದು ಮುಖ್ಯ. ಸೋಲು ಗೆಲುವು ಮುಖ್ಯವಲ್ಲ. ಬಿಲ್ಲವ ಸಮಾಜ ಬಾಂಧವರು ಕ್ರೀಡಾಕೂಟದಲ್ಲಿ ಉತ್ತಮ ಪ್ರದರ್ಶನ ನೀಡಿ ಎಂದರು.
ಪುತ್ತೂರು ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ನಿರ್ದೇಶಕರಾದ ಶ್ರೀಕಾಂತ್ ಬಿರಾವು ಮಾತನಾಡಿ ಪುತ್ತೂರಿನ ಯುವವಾಹಿನಿ ಘಟಕವು ಸಮಾಜದ ಅಭಿವೃದ್ಧಿಗೋಸ್ಕರ ಉತ್ತಮ ಕಾರ್ಯ ಮಾಡುತ್ತಿದೆ. ಯುವ ಸಮುದಾಯವನ್ನು ಒಗ್ಗೂಡಿಸಲು ಕ್ರೀಡೆಯಿಂದ ಮಾತ್ರ ಸಹಕಾರಿ. ಈ ನಿಟ್ಟಿನಲ್ಲಿ ಯುವಕರಿಗೆ ಕ್ರಿಕೆಟ್, ಮಹಿಳೆಯರಿಗೆ ತ್ರೋಬಾಲ್ ಕ್ರೀಡೆಯನ್ನು ಆಯೋಜಿಸುತ್ತಿದೆ ಎಂದರು.
ಕೇಂದ್ರ ಸಮಿತಿ ಸಂಘಟನಾ ಕಾರ್ಯದರ್ಶಿ ಜಯಂತ ಬರಿಮಾರು ಮಾತನಾಡಿ ವಿದ್ಯೆ, ಉದ್ಯೋಗ, ಸಂಪರ್ಕ ಎಂಬ ಧ್ಯೇಯ ವಾಕ್ಯದಡಿಯಲ್ಲಿ ಪುತ್ತೂರಿನ ಯುವವಾಹಿನಿ ಘಟಕವು ಕಾರ್ಯ ನಿರ್ವಹಿಸುತ್ತಿದೆ. ಬಿಲ್ಲವ ಸಮಾಜ ಬಾಂಧವರು – ಬಿಲ್ಲವ ಸಂಘ, ಯುವವಾಹಿನಿ ಸಂಘದಲ್ಲಿ ಪಾಲು ಪಡೆದು ಸಾಮಾಜಿಕ ಚಿಂತನೆಯೊಂದಿಗೆ ಕೆಲಸ ಮಾಡಬೇಕು ಎಂದರು.
ಅಧ್ಯಕ್ಷತೆ ವಹಿಸಿದ ಯುವವಾಹಿನಿ ಪುತ್ತೂರು ಘಟಕದ ಅಧ್ಯಕ್ಷ ಜಯರಾಮ ಬಿ.ಎನ್ ಮಾತನಾಡಿ, ಹಲವಾರು ವರ್ಷಗಳಿಂದ ಸಮಾಜ ಬಾಂಧವರಿಗೋಸ್ಕರ ಕ್ರೀಡಾ ಕೂಟವನ್ನು ಆಯೋಜನೆ ಮಾಡುವ ಕನಸು ಇದೀಗ ನನಸಾಗಿದೆ. ನಮ್ಮ ಸಮಾಜ ಬಾಂಧವರಲ್ಲಿ ಅನೇಕ ಪ್ರತಿಭೆಗಳಿವೆ. ಈ ಪ್ರತಿಭೆಗಳನ್ನು ಪ್ರೋತ್ಸಾಹಿಸುವುದು ನಮ್ಮ ಕರ್ತವ್ಯ ಎಂದರು.
ಕ್ರೀಡಾ ನಿರ್ದೇಶಕ ಲೋಹಿತ್ ಸ್ವಾಗತಿಸ,ಕಾರ್ಯದರ್ಶಿ ಸಮಿತ್ ವಂದಿಸಿದರು.