ಕಂಕನಾಡಿ: ಯುವವಾಹಿನಿ (ರಿ) ಕಂಕನಾಡಿ ಘಟಕದ ವತಿಯಿಂದ ದಿನಾಂಕ 12-09-2024 ರಂದು ಘಟಕದ ಕಛೇರಿಯಲ್ಲಿ ಸಂಜೆ ಗಂಟೆ 6:30ಕ್ಕೆ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಗುರುವಂದನ ಕಾರ್ಯಕ್ರಮ ಆಚರಿಸಲಾಯಿತು.
ಅಧ್ಯಕ್ಷರಾದ ರಾಹುಲ್ ಸನಿಲ್ ಇವರು ಸಭೆಗೆ ಬಂದ ಎಲ್ಲಾ ಸದಸ್ಯರನ್ನು ಹಾಗೂ ಶಿಕ್ಷಕರನ್ನು ಸ್ವಾಗತಿಸಿದರು.
ಘಟಕದ ಮತ್ತು ಪರಿಸರದ 3 ಶಿಕ್ಷಕರನ್ನು ಸನ್ಮಾನಿಸುವ ಮೂಲಕ ಗುರುವಂದನೆಯನ್ನು ಸಲ್ಲಿಸಲಾಯಿತು.
ಸನ್ಮಾನ ಸ್ವೀಕರಿಸಿದ ಶಿಕ್ಷಕಿ ಶ್ರೀಮತಿ ಶೀಲಾ ಟೀಚರ್ ರವರು ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ಪಡಿಸಿದರು.
ಮಂಗಳೂರು ಘಟಕದ ಮಾಜಿ ಅಧ್ಯಕ್ಷರಾದ ಡಾ/ರಾಕೇಶ್ ಕುಮಾರ್ ರವರು ಶಿಕ್ಷಕರ ದಿನಾಚರಣೆಯ ಮಹತ್ವವನ್ನು ವಿವರಿಸಿದರು.
ಕಾರ್ಯದರ್ಶಿ ನವೀನ್ ಕೋಟ್ಯಾನ್ ಅವರ ಧನ್ಯವಾದದೊಂದಿಗೆ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.