ಕಂಕನಾಡಿ : ಅಜ್ಞಾನ ವೆಂಬ ಕತ್ತಲನ್ನು ಹೋಗಲಾಡಿಸಿ ಸುಜ್ಞಾನವನ್ನು ನೀಡುವುದೇ ನಿಜವಾದ ಜ್ಞಾನ. ಅಂತಹ ಜ್ಞಾನವನ್ನು ಜಗತ್ತಿಗೆ ನೀಡಿದವರು ಬ್ರಹ್ಮಶ್ರೀ ನಾರಾಯಣ ಗುರುಗಳು. ಅವರ ಸಂದೇಶ, ತತ್ವಗಳು ನಮಗೆ ಸ್ಫೂರ್ತಿ ದಾಯಕ. ಗುರುಗಳ ತತ್ವಾದರ್ಶಗಳನ್ನು ಅನುಷ್ಠಾನಗೊಳಿಸಿ ಮಾನವ ಕುಲವನ್ನು ಉನ್ನತಿ ಯೆಡೆಗೆ ಸಾಗಿಸಬೇಕು. ವಿದ್ಯಾರ್ಥಿಗಳು ವಿದ್ಯಾಭ್ಯಾಸ ದೊಂದಿಗೆ ಮಾನವ ಮೌಲ್ಯ ಹೆಚ್ಚಿಸಿಕೊಳ್ಳಬೇಕು ಎಂದು ಸಾಲಿಗ್ರಾಮ ಡಿವೈನ್ ಪಾರ್ಕ್ ಟ್ರಸ್ಟ್(ರಿ) ಇದರ ಪದಾಧಿಕಾರಿ ಡಿ.ಎಸ್. ಯಶವಂತ್ ತಿಳಿಸಿದರು.
ಅವರು ದಿನಾಂಕ 27-08-2018ರ ಸೋಮವಾರ ದಂದು ಯುವವಾಹಿನಿ(ರಿ.) ಕಂಕನಾಡಿ ಘಟಕದ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 164ನೇ ಜಯಂತಿ ಪ್ರಯುಕ್ತ ಶ್ರೀ ಬ್ರಹ್ಮಮುಗೇರ ಮಹಾಂಕಾಳಿ ದೈವಸ್ಥಾನದ ವಠಾರದಲ್ಲಿ ಆಯೋಜಿಸಿದ್ದ “ಗುರುಸ್ಮರಣೆ ಹಾಗೂ ಪ್ರತಿಭಾ ಪುರಸ್ಕಾರ, ಬಹುಮಾನ ವಿತರಣೆ ” ಕಾರ್ಯಕ್ರಮದಲ್ಲಿ ಗುರುಗಳ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು.
ಶ್ರೀ ಬ್ರಹ್ಮಮುಗೇರ ಮಹಾಂಕಾಳಿ ದೈವಸ್ಥಾನದ ಅಧ್ಯಕ್ಷರಾದ ಶ್ರೀನಿವಾಸ ಬಂಗೇರರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಯುವವಾಹಿನಿಯ ಕಾರ್ಯವೈಖರಿಯನ್ನು ಶ್ಲಾಘಿಸಿದರು. ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಶ್ರೀಮತಿ ನಮಿತಾ ಶ್ಯಾಮ್, ಯುವವಾಹಿನಿ(ರಿ.) ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ನರೇಶ್ ಕುಮಾರ್ ಸಸಿಹಿತ್ಲು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. .ಯುವವಾಹಿನಿ ಕಂಕನಾಡಿ ಘಟಕದ ಅಧ್ಯಕ್ಷ ರಾದ ಭವಿತ್ ರಾಜ್ ಇವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. . ಘ ಘಟಕಕ್ಕೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಿ ಸಹಕರಿಸುತ್ತಿರುವ ಸಲಹೆಗಾರರಾದ ಅಶೋಕ್ ಕುಮಾರ್, ಜಿತೇಂದ್ರ ಸುವರ್ಣ, ಮಂಗಳೂರು ಘಟಕದ ಮಾಜಿ ಅಧ್ಯಕ್ಷರುಗಳಾದ ಹರೀಶ್. ಕೆ.ಪೂಜಾರಿ ಹಾಗೂ ರಾಕೇಶ್ ಕುಮಾರ್ ದಂಪತಿಗಳಿಗೆ ಗೌರವಾರ್ಪಣೆ ಮಾಡಲಾಯಿತು. ಹಾಗೂ ಎಸ್. ಎಸ್. ಎಲ್.ಸಿ. ಮತ್ತು ಪಿ.ಯು.ಸಿ.ಯಲ್ಲಿ ಅತ್ಯುನ್ನತ ಶ್ರೇಣಿ ಯಲ್ಲಿ ಪಾಸಾದ 6 ಮಂದಿ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಸ್ಥಳೀಯ ಶಾಲಾ ಕಾಲೇಜು ಮಕ್ಕಳಿಗೆ ಆಯೋಜಿಸಿದ್ದ ರಂಗೋಲಿ ಸ್ಪರ್ಧೆ,ಕಸದಿಂದ ರಸ ಎಂಬ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.
ಅಧ್ಯಕ್ಷ ಭವಿತ್ ರಾಜ್ ಸ್ವಾಗತಿಸಿದರು. ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರಾದ ಲೋಕೇಶ್ ಅಮೀನ್ ರವರು ವಂದಿಸಿದರು.