ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತ ಯುವವಾಹಿನಿ (ರಿ.)ಬಜಪೆ ಘಟಕದ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಒಂದು ದಿನದ “ಜೀವನ ಕೌಶಲ್ಯ ತರಬೇತಿ” ಕಾರ್ಯಗಾರವು ತಾರೀಕು 19.10.19ನೇ ಶನಿವಾರ ಬೆಳಿಗ್ಗೆ ಗಂಟೆ 9.30ಕ್ಕೆ ಸರಿಯಾಗಿ ಅನ್ಸಾರ್ ಪ್ರೌಢಶಾಲೆ ಬಜಪೆ ಇಲ್ಲಿ ನಡೆಯಿತು. ಅನ್ಸಾರ್ ಶಾಲೆಯ ವಿದ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀಮತಿ ಜ್ಯೋತಿ ನಾರಾಯಣ ಪೂಜಾರಿ(ಸಂಚಾಲಕರು,ಎಸ್,ಎನ್,ಎಸ್ ಶಿಕ್ಷಣ ಪ್ರತಿಷ್ಠಾನ ಸುಂಕದಕಟ್ಟೆ) ಇವರು ನೆರವೇರಿಸಿ ಉದ್ಘಾಟನ ಭಾಷಣ ಮಾಡಿದರು. ಮುಖ್ಯ ಅತಿಥಿಯಾಗಿ ತಾಲೂಕು ಪಂಚಾಯತ್ ಸದಸ್ಯರಾದ ಶ್ರೀಮತಿ ಉಷಾ ಸುವರ್ಣ ಹಾಗೂ ಸಂಪನ್ಮೂಲ ವ್ಯಕ್ತಿಯಾಗಿ ಯುವವಾಹಿನಿ ಬಜ್ಪೆ ಘಟಕದ ಅಧ್ಯಕ್ಷರಾದ ಶ್ರೀಮತಿ ಸಂಧ್ಯಾ ಕುಳಾೖ ಯವರು ಭಾಗವಹಿಸಿ ಕಾರ್ಯಕ್ರಮದ ಬಗ್ಗೆ ಮಾತನ್ನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಅನ್ಸಾರ್ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಯಶ್ರೀ ಜಿ.ಎಸ್ ರವರು ಮಾತನಾಡಿ ತಮ್ಮ ಶಾಲೆಯ ವಿದ್ಯಾರ್ಥಿಗಳ ಬಗ್ಗೆ ಮೆಚ್ಚುಗೆಯ ಮಾತನ್ನಾಡಿದರು. ಯುವವಾಹಿನಿ ಬಜಪೆ ಘಟಕದ ಉಪಾಧ್ಯಕ್ಷರಾದ ಶ್ರೀ ಅಶೋಕ್ ಕುಮಾರ್ ಮುರನಗರ ಕಾರ್ಯಕ್ರಮ ನಿರೂಪಿಸಿದರು. ಕೊನೆಯಲ್ಲಿ ಯುವವಾಹಿನಿ ಬಜಪೆ ಘಟಕದ ಮಾಜಿ ಅಧ್ಯಕ್ಷರಾದ ಶ್ರೀ ಚಂದ್ರಶೇಖರ್ ಪೂಜಾರಿಯವರು ಧನ್ಯವಾದಗಳನ್ನು ಅರ್ಪಿಸಿದರು.