ಕಟಕಟಪಾಡಿ:- ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಸಂಸ್ಥೆಯ ವರ್ಷದ ಪ್ರತಿಷ್ಠಿತ ಸಾಂಸ್ಕೃತಿಕ ಸೌರಭ, ಡೆನ್ನಾನ ಡೆನ್ನನ – 2022ನೇ ಸಾಲಿನ ಚಾಂಪಿಯನ್ ಪಟ್ಟವನ್ನು ಯುವವಾಹಿನಿ ಬೆಳ್ತಂಗಡಿ ಘಟಕವು ತನ್ನ ಮುಡಿಗೇರಿಸಿಕೊಂಡಿದೆ. ದಿನಾಂಕ 21 ಆಗಸ್ಟ್ 2022ರಂದು ಕಟಪಾಡಿ ವಿಶ್ವನಾಥ ಕ್ಷೇತ್ರದ ಸಪ್ತಪದಿ ಸಭಾಗೃಹದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ ಉಡುಪಿ ಘಟಕದ ಆತಿಥ್ಯದಲ್ಲಿ ಜರಗಿದ ಅಂತರ್ ಘಟಕ ಡೆನ್ನಾನ ಡೆನ್ನನ 2022 ಕಾರ್ಯಕ್ರಮದಲ್ಲಿ ಭಾಗವಹಿಸಿದ ಯುವವಾಹಿನಿಯ 20 ಘಟಕಗಳ ತೀವ್ರ ಪೈಪೋಟಿಯ ಸ್ಪರ್ಧೆಯಲ್ಲಿ ತೀರ್ಪುಗಾರರ ಮೆಚ್ಚುಗೆ ಗಳಿಸಿ ಪ್ರಥಮ ಬಹುಮಾನ ಹಾಗೂ ವೈಯಕ್ತಿಕ ಬಹುಮಾನಗಳೊಂದಿಗೆ ಚಾಂಪಿಯನ್ ಪಟ್ಟವನ್ನು ಪಡೆಯಿತು.
ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಬೆಳ್ತಂಗಡಿ ಘಟಕವು ಪ್ರಶಸ್ತಿ ಫಲಕ ಹಾಗೂ ರೂ 25000/- ನಗದು ಹಾಗೂ ವೈಯಕ್ತಿಕ ಶ್ರೇಷ್ಠ ನಿರ್ವಹಣೆಗಾಗಿ ಎರಡು ಮಂದಿ ಸದಸ್ಯರು ಬಹುಮಾನಕ್ಕೆ ಭಾಜನರಾದರು. ಸಮಾರೋಪ ಸಮಾರಂಭದಲ್ಲಿ ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆಯವರು ಪ್ರಶಸ್ತಿ ಫಲಕ ಹಾಗೂ ನಗದನ್ನು ಬೆಳ್ತಂಗಡಿ ಘಟಕದ ಸದಸ್ಯರಿಗೆ ಹಸ್ತಾಂತರಿಸಿದರು. ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್, ನಾರಾಯಣಗುರು ಅರ್ಬನ್ ಕೋ- ಆಪರೇಟಿವ್ ಬ್ಯಾಂಕ್ ಅಧ್ಯಕ್ಷರಾದ ಹರಿಶ್ಚಂದ್ರ ಅಮೀನ್, ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಗೀತಾಂಜಲಿ ಸುವರ್ಣ, ಉಡುಪಿ ಜಿಲ್ಲೆಯ ಬಿಲ್ಲವ ಪರಿಷತ್ ಅಧ್ಯಕ್ಷರಾದ ನವೀನ್ ಅಮೀನ್ ಶಂಕರಪುರ, ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ದೀಪಕ್ ಕುಮಾರ್ ಎರ್ಮಾಳ್, ಕಾಪು ಬಿಲ್ಲವರ ಸಹಾಯಕ ಸಂಘದ ಗೌರವ ಅಧ್ಯಕ್ಷರಾದ ಪ್ರಭಾಕರ ಪೂಜಾರಿ, ಯುವವಾಹಿನಿ ಉಡುಪಿ ಘಟಕದ ಕಾರ್ಯದರ್ಶಿ ದಯಾನಂದ ಕರ್ಕೇರ, ಯುವವಾಹಿನಿ ಕೇಂದ್ರ ಸಮಿತಿಯ ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ನಿರ್ದೇಶಕರಾದ ಜಗದೀಶ್ ಕುಮಾರ್ ಕಾರ್ಯಕ್ರಮ, ಮಹಾಬಲ ಅಮೀನ್ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ವಹಿಸಿದ್ದರು. ಯುವವಾಹಿನಿ ಉಡುಪಿ ಘಟಕದ ಅಧ್ಯಕ್ಷರಾದ ಪ್ರವೀಣ್ ಡಿ. ಪೂಜಾರಿ ಸ್ವಾಗತಿಸಿದರು. ಮಾಣಿ ಘಟಕದ ಕಾರ್ಯದರ್ಶಿ ರೇಣುಕಾ ಕಣಿಯೂರು ಮತ್ತು ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮ ಸಂಚಾಲಕರಾದ ಅಶೋಕ್ ಕೋಟ್ಯಾನ್ ಸ್ಪರ್ಧಾ ವಿಜೇತರ ಪಟ್ಟಿ ವಾಚಿಸಿದರು. ಯುವವಾಹಿನಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಿಲ್ಪಾಡಿ ವಂದಿಸಿದರು.