ಯುವವಾಹಿನಿ (ರಿ) ಬಂಟ್ವಾಳ ಘಟಕ

ತಾರಾನಾಥ್ ಅವರಿಗೆ ಯುವವಾಹಿನಿಯಿಂದ ನುಡಿನಮನ

ಮಮತೆಯ ಖನಿ,ಒಲವಿನ ಸೆಲೆ,ಆದರ್ಶ ಕರ್ತವ್ಯ ನಿಷ್ಠೆ, ಕಾರ್ಯ ತತ್ಪರತೆ, ಆಕರ್ಷಣೀಯ ವ್ಯಕ್ತಿತ್ವ, ಸ್ನೇಹ ಶೀಲತೆ, ಸಂಘಟನಾ ಚತುರ ತಾರಾನಾಥ್ ಅವರು ನಮ್ಮನ್ನಗಲಿರುವುದು ತುಂಬಲಾರದ ನಷ್ಟ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ತುಕರಾಮ್ ಎನ್ ತಿಳಿಸಿದರು.

ಅವರು ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ದಿನಾಂಕ 08.06.2017ರಂದು ಅಕಾಲಿಕವಾಗಿ ನಿಧನ ಹೊಂದಿದ ಯುವವಾಹಿನಿ ಬಂಟ್ವಾಳ ಘಟಕದ ಮಾಜಿ ಅಧ್ಯಕ್ಷರಾದ ತಾರಾನಾಥ್ ಅವರಿಗೆ ಬಿ.ಸಿ.ರೋಡಿನ ಯುವವಾಹಿನಿ ಭವನದಲ್ಲಿ ದಿನಾಂಕ 11.06.2017 ರಂದು ಜರುಗಿದ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದರು.

ತಾರಾನಾಥರು ಬೆಳಗಿದ ಹಣತೆಯ ಬೆಳಕನ್ನು ಅನುಸರಿಸಿ ನಾವು ಮುಂದೆ ಸಾಗಬೇಕಾಗಿದೆ.ಎಂದು ಯುವವಾಹಿನಿ ಯ ಸಲಹೆಗಾರರಾದ ಬಿ.ತಮ್ಮಯ ತಿಳಿಸಿದರು.ಮೃತರ ಆತ್ಮಕ್ಕೆ ಶಾಂತಿ ಕೋರಿ ಒಂದು ನಿಮಿಷ ಮೌನ ಪ್ರಾರ್ಥನೆ ನಡೆಸಲಾಯಿತು.

ಸಲಹೆಗಾರರಾದ ಡಾ.ಸದಾನಂದ ಕುಂದರ್,ತಾಲೂಕು ಪಂಚಾಯತ್ ಸದಸ್ಯ  ಗಣೇಶ್ ಸುವರ್ಣ ತುಂಬೆ, ರಾಜೇಶ್ ಬಿ., ಹರೀಶ್ ಕೋಟ್ಯಾನ್,ಗಣೇಶ್ ಪೂಂಜರೆಕೋಡಿ,ದೇಜಪ್ಪ ಕೋಡಿ,ರಾಮಚಂದ್ರ ಸುವರ್ಣ,ಜಿತೇಂದ್ರ.ಜೆ.ಸುವರ್ಣ ಮೋಹನ್ ಪೆಜಕ್ಕಳ, ನುಡಿನಮನ ಸಲ್ಲಿಸಿದರು.ಯುವವಾಹಿನಿಯ ಮಾಜಿ ಅಧ್ಯಕ್ಷರುಗಳು, ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.ಯುವವಾಹಿನಿ ಅಧ್ಯಕ್ಷ ಅರುಣ್  ಕುಮಾರ್ ಸಭೆಯ ಅಧ್ಯಕ್ಷತೆ ವಹಿಸಿದ್ದರು.ಬಿ.ಶ್ರೀಧರ ಅಮೀನ್ ಕಾರ್ಯಕ್ರಮ ನಿರೂಪಿಸಿದರು

2 thoughts on “ತಾರಾನಾಥ್ ಅವರಿಗೆ ಯುವವಾಹಿನಿಯಿಂದ ನುಡಿನಮನ

  1. Tharanath was the senior member of the organization. His sad demise is the great loss to his family as well as the organization.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!