ಯುವವಾಹಿನಿ (ರಿ) ಹೆಜಮಾಡಿ ಘಟಕ

ತುಳುವೆರೆ ತುಳಸಿ ಪರ್ಬ

ಹೆಜಮಾಡಿ : ಯುವವಾಹಿನಿ (ರಿ) ಹೆಜಮಾಡಿ ಘಟಕದ ಆಶ್ರಯದಲ್ಲಿ ಹೆಜಮಾಡಿ ಬಿಲ್ಲವ ಸಂಘದ ವಠಾರದಲ್ಲಿ ನವೆಂಬ‌ರ್ 13 ರಂದು ತುಳುವೆರೆ ತುಳಸಿ ಪರ್ಬ ಕಾರ್ಯಕ್ರಮ ಜರುಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ (ರಿ) ಹೆಜಮಾಡಿ ಘಟಕದ ಅಧ್ಯಕ್ಷೆ ದೀಪಾ ದಿನೇಶ್ ವಹಿಸಿದರು.

ಮುಖ್ಯ ಅತಿಥಿಯಾಗಿ ಯುವವಾಹಿನಿ (ರಿ ) ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರು ಉದಯ ಅಮೀನ್ ಮಟ್ಟು, ಹೆಜಮಾಡಿ ಬಿಲ್ಲವ ಸಂಘದ ಅಧ್ಯಕ್ಷರು ಮೋಹನ್ ದಾಸ್ ಹೆಜಮಾಡಿ, ಹೆಜಮಾಡಿ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೆಸರರು ದಯಾನಂದ ಹೆಜಮಾಡಿ, ಹೆಜಮಾಡಿ ಮಹಾಲಿಂಗೇಶ್ವರ ದೇವಸ್ಥಾನದ ಅನುವಂಶಿಕ ಅರ್ಚಕರು ಸುಖೀರ್ಥ ಆಚಾರ್ಯ, ಉಡುಪಿಯ ಯುವ ನ್ಯಾಯವಾದಿ ಹಂಜತ್ ಹೆಜಮಾಡಿ ಕೋಡಿ, ಮುಲ್ಕಿಯ ಉನ್ನತಿ ಕ್ರಿಶ್ಚಿಯನ್ ಕೋಆಪರೇಟಿವ್‌ ಸೊಸೈಟಿಯ ಕಾರ್ಯ ನಿರ್ವಹಣಾಧಿಕಾರಿ ರೋಷನ್‌ ವಿಜಯ ಫುರ್ಟಾಡೊ, ಯುವವಾಹಿನಿ (ರಿ) ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ವಿವೇಕ್ ಬಿ. ಆಗಮಿಸಿದ್ದರು.

ವೇದಿಕೆಯಲ್ಲಿ ಕಾರ್ಯದರ್ಶಿ ಪ್ರಥಮೇಶ್ ಹಾಗೂ ಕಾರ್ಯಕ್ರಮದ ಸಂಯೋಜಕಿ ಜಯಶ್ರೀ ಸದಾಶಿವ್ ಉಪಸ್ಥಿತರಿದ್ದರು.

ಕಾರ್ಯಕ್ರಮದ ಸಂಯೋಜಕಿ ಜಯಶ್ರೀ ಸದಾಶಿವ ಸ್ವಾಗತಿಸಿದರು.

ಯುವವಾಹಿನಿ ಹೆಜಮಾಡಿ ಘಟಕದ ಸ್ಥಾಪಕ ಅಧ್ಯಕ್ಷ ಪ್ರಭೋದ್ ಚಂದ್ರ ಹೆಜಮಾಡಿ ಪ್ರಸ್ತಾವನೆಗೈದರು.

ಪ್ರಾಪ್ತಿ ಆರ್. ಸುವರ್ಣ ವಂದಿಸಿದರು.

ಮನೋಹರ ಹೆಜಮಾಡಿ ಮತ್ತು ಧೀರಜ್ ಕೋಡಿ ಕಾರ್ಯಕ್ರಮ ನಿರೂಪಿಸಿದರು.

ತುಳಸಿ ಪೂಜೆಯ ವಿಧಿ ವಿಧಾನಗಳನ್ನು ಗುರು ಮಂದಿರದ ಅರ್ಚಕರಾದ ಹರೀಶ್ ಶಾಂತಿ ಮುಂಬೈ ಇವರ ನೇತೃತ್ವದಲ್ಲಿ ನೆರವೇರಿಸಲಾಯಿತು.

ಇದೇ ಸಂದರ್ಭದಲ್ಲಿ ಮೂಲ್ಕಿ ಬಿಲ್ಲವ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ವಾಮನ ಕೋಟ್ಯಾನ್ ನಡಿಕುದ್ರು ಇವರನ್ನು ಗೌರವಿಸಲಾಯಿತು.

Leave a Reply

Your email address will not be published. Required fields are marked *

error: Content is protected !!