ಯುವವಾಹಿನಿ (ರಿ.) ಕಂಕನಾಡಿ ಘಟಕ : ವಿಶ್ವ ಯೋಗ ದಿನಾಚರಣೆ

ನಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯದ ಸಮತೋಲನಕ್ಕೆ ಯೋಗ ಸಹಕಾರಿ – ಶಾಂಭವಿ ಅಂಚನ್

ಕಂಕನಾಡಿ :- ಯುವವಾಹಿನಿ (ರಿ.) ಕಂಕನಾಡಿ ಘಟಕದ ವತಿಯಿಂದ ದಿನಾಂಕ 23 ಜೂನ್ 2022 ರಂದು ಘಟಕದ ನೂತನ ಕಚೇರಿಯ ಸಭಾಂಗಣದಲ್ಲಿ “ವಿಶ್ವ ಯೋಗ ದಿನಾಚರಣೆ”ಯನ್ನು ಆಚರಿಸಲಾಯಿತು. ಶಾಂಭವಿ ಅಂಚನ್ ರವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಭಾರತ ವಿಶ್ವಕ್ಕೆ ಕೊಟ್ಟ ಕೊಡುಗೆಯೇ ಯೋಗ , ಯೋಗದಿಂದ ನಮ್ಮ ಜೀವನಶೈಲಿಯಲ್ಲಿ ಆಗುವ ಬದಲಾವಣೆಯನ್ನು ಉದಾಹರಣೆ ಸಹಿತ ವಿವರಿಸಿ ದಿನ ನಿತ್ಯ ನಾವು ಒಂದು ಗಂಟೆಯಾದರೂ ನಮ್ಮ ಆರೋಗ್ಯಕ್ಕಾಗಿ ಯೋಗ ಮಾಡಬೇಕು ಎಂದು ತಿಳಿಸಿ, ಕೆಲವು ಆಸನಗಳನ್ನು ಸದಸ್ಯರಿಂದ ಮಾಡಿಸಿದರು. ಘಟಕದ ಅಧ್ಯಕ್ಷರಾದ ಶ್ರೀಮತಿ ನಯನ ಸುರೇಶ್ ರವರು ಸಭೆಗೆ ಬಂದಂತಹ ಎಲ್ಲಾ ಸದಸ್ಯರನ್ನು ಪ್ರೀತಿಪೂರ್ವಕವಾಗಿ ಸ್ವಾಗತಿಸಿದರು, ನಂತರ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವ ಆಚರಿಸಿದ ಸದ‌ಸ್ಯರನ್ನು ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ಅಲೋಶ್ ರವರನ್ನು ಹೂ ನೀಡಿ ಅಭಿನಂದಿಸಲಾಯಿತು. ನಂತರ ದಿನಾಂಕ 19-6-2022ರಂದು ನಡೆದ ಘಟಕದ ನೂತನ ಕಛೇರಿಯ ಉದ್ಘಾಟನಾ ಸಮಾರಂಭ ಕಾರ್ಯಕ್ರಮದ ಅಭಿಪ್ರಾಯವನ್ನು ಸದಸ್ಯರಿಂದ ಪಡೆಯಲಾಯಿತು. ಕಾರ್ಯಕ್ರಮದಲ್ಲಿ ಘಟಕದ ಪೂರ್ವಾಧ್ಯಕ್ಷರುಗಳು, ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು. ಕಾರ್ಯದರ್ಶಿ ಲೋಕೇಶ್ ಅಮೀನ್ ಧನ್ಯವಾದ ಸಮರ್ಪಿಸಿದರು.

Leave a Reply

Your email address will not be published. Required fields are marked *

error: Content is protected !!