ಯುವವಾಹಿನಿ ಪ್ರತಿಭಾ ಪುರಸ್ಕಾರ-2017

ಪ್ರಶಸ್ತಿ ವಿಜೇತ ಯುವ ರಂಗ ನಿರ್ದೇಶಕ ಸ್ಮಿತೇಶ್ ಎಸ್. ಬಾರ್ಯ

ಬೆಳ್ತಂಗಡಿ ತಾಲೂಕಿನ ಹಳೇಕೋಟೆ ಬಾರ್ಯ ನಿವಾಸಿ ಶ್ರೀಮತಿ ರತ್ನ ಹಾಗೂ ಶ್ರೀ ಸುಂದರ ಬಂಗೇರ ದಂಪತಿಗಳ ಹೆಮ್ಮೆಯ ಸುಪುತ್ರರಾದ ಸ್ಮಿತೇಶ್ ಎಸ್. ಬಾರ್ಯ ಇವರು ನಾಟಕರಂಗ ಮತ್ತು ಸಾಂಸ್ಕ್ರತಿಕ ರಂಗದಲ್ಲಿ ಸಾಧನೆಗೈದು ಎಲ್ಲರ ಗಮನ ಸೆಳೆದವರು.Msc. In Psychology ಪದವಿ ಗಳಿಸಿರುವ ಇವರು ಪ್ರಸ್ತುತ ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಮನಃಶಾಸ್ತ್ರ ಉಪನ್ಯಾಸಕರಾಗಿದ್ದಾರೆ. 500ರಕ್ಕೂ ಮಿಕ್ಕಿ  ಸಾಂಸ್ಕ್ರತಿಕ ಕಾರ್ಯಕ್ರಮ ನೀಡಿದ ಹೆಗ್ಗಳಿಕೆ ಇವರದು. 25ಕ್ಕೂ ಮಿಕ್ಕಿ ನಾಟಕಗಳಲ್ಲಿ ಅಭಿನಯ ಹಾಗೂ 20ಕ್ಕೂ ಮಿಕ್ಕಿ ನಾಟಕಗಳ ನಿರ್ದೇಶನ ಮಾಡಿರುವ ಇವರು 2016ರಲ್ಲಿ World Book of Records ಗೆ ಸೇರಿದ ಜಗತ್ತಿನ ಅತೀ ಚಿಕ್ಕ ನಾಟಕ “ಮಹಾಕಾಲ”ದಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ನಿರ್ವಹಿಸಿದ್ದಾರೆ. 2015 ರಲ್ಲಿ ಆಳ್ವಾಸ್ ಕಾಲೇಜಿನಲ್ಲಿ ನಡೆದ ರಾಷ್ಟ್ರ ಮಟ್ಟದ ಚಕ್ರವ್ಯೂಹ ಸ್ಪರ್ಧೆಯಲ್ಲಿ ಪ್ರಹಸನ, ಏಕ ಪಾತ್ರಾಭಿನಯ ಮತ್ತು ಬೀದಿನಾಟಕಗಳಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. 2014ರಲ್ಲಿ ಹರಿಯಾಣದಲ್ಲಿ ನಡೆದ ರಾಷ್ಟ್ರಮಟ್ಟದ ಪ್ರಹಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದಿದ್ದಾರೆಅನೇಕ ಸಂಘ ಸಂಸ್ಥೆಗಳಲ್ಲಿ ಸಾಹಿತ್ಯಿಕ, ,ಸಾಂಸ್ಕ್ರತಿಕ ಕಾರ್ಯಕ್ರಮಗಳಲ್ಲಿ ಅತ್ಯುತ್ತಮ ನಿರೂಪಣೆ ಪ್ರಶಸ್ತಿ ಕೂಡಾ ಗಳಿಸಿರುತ್ತಾರೆ. ಹಲವಾರು ಸಂಘ ಸಂಸ್ಥೆಗಳು ಇವರ ಸಾಧನೆಯನ್ನು ಗುರುತಿಸಿ ಗೌರವಿಸಿದೆ. ಮುಂದಿನ ದಿನಗಳಲ್ಲಿ ಇವರ ಸಾಧನೆ ಇದೇ ರೀತಿ ಮುಂದುವರಿಯಲಿ. ಬಿಲ್ಲವ ಸಮಾಜದ ಅಭಿಮಾನದ ಗೌರವಕ್ಕೆ ಪಾತ್ರರಾದ ಇವರಿಗೆ ಅವರ ಪ್ರತಿಭೆಯನ್ನು ಗುರುತಿಸಿ, ಗೌರವಿಸುತ್ತಾ .ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಯುವವಾಹಿನಿ (ರಿ) ಉಪ್ಪಿನಂಗಡಿ ಘಟಕದ ಆತಿಥ್ಯದಲ್ಲಿ ದಿನಾಂಕ 06.08.2017 ರಂದು ಉಪ್ಪಿನಂಗಡಿಯ ಎಚ್ ಎಮ್.ಆಡಿಟೋರಿಯಂ ಇಲ್ಲಿ ಜರುಗಿದ ಯುವವಾಹಿನಿಯ 30ನೇ ವಾರ್ಷಿಕ ಸಮಾವೇಶದ ಸುಸಂದರ್ಭದಲ್ಲಿ ‘ಯುವವಾಹಿನಿ ಪ್ರತಿಭಾ ಪುರಸ್ಕಾರ’ ನೀಡಿ ಗೌರವಿಸುತ್ತಿದೆ.

ಈ ಸಂದರ್ಭದಲ್ಲಿ ಕರ್ನಾಟಕ ಸರಕಾರದ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಶ್ರೀ ಕೆ.ವಸಂತ ಬಂಗೇರ, ಐ ಎಪ್ ಎಸ್ ಅಧಿಕಾರಿ ಶ್ರೀ ದಾಮೋದರ ಎ.ಟಿ, ಜಿಲ್ಲಾ ಪಂಚಾಯತ್ ಸದಸ್ಯರಾದ ಶ್ರೀಮತಿ ಶಯನಾ ಜಯಾನಂದ,ಪುತ್ತೂರು ತಾಲೂಕು ಬಿಲ್ಲವ ಸಂಘದ ಅಧ್ಯಕ್ಷರಾದ ಶ್ರೀ ಜಯಂತ ನಡುಬೈಲು, ಕಾಸರಗೋಡು ಸರಕಾರಿ ಕಾಲೇಜು ಸಹ ಪ್ರಾಧ್ಯಾಪಕರಾದ ಡಾ.ರಾಜೇಶ್ ಬೆಜ್ಜಂಗಳ,ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಮರೋಳಿ, ಸಮಾವೇಶ ನಿರ್ದೇಶಕರಾದ ಡಾ.ಸದಾನಂದ ಕುಂದರ್, ಕಾರ್ಯದರ್ಶಿ ನಿತೇಶ್ ಜೆ.ಕರ್ಕೇರಾ ಸ್ವಾಗತ ಸಮಿತಿಯ ಅಧ್ಯಕ್ಷರಾದ ಡಾ.ರಾಜಾರಾಮ್, ಯುವವಾಹಿನಿ ಉಪ್ಪಿನಂಗಡಿ ಘಟಕದ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ಉಪಸ್ಥಿತರಿದ್ದರು

 

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 25-12-2024
ಸ್ಥಳ : ಯುವವಾಹಿನಿ ಸಭಾಂಗಣ ಊರ್ವಸ್ಟೋರ್

ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು

ದಿನಾಂಕ : 21-12-2024
ಸ್ಥಳ : ಹೆಚ್. ಎಂ. ಆಡಿಟೋರಿಯಂ ಉಪ್ಪಿನಂಗಡಿ

ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕ

ದಿನಾಂಕ : 22-12-2024
ಸ್ಥಳ : ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಂಗಣ ಕಡಬ

ಯುವವಾಹಿನಿ (ರಿ.) ಕಡಬ ಘಟಕ

ದಿನಾಂಕ : 20-12-2024
ಸ್ಥಳ : ಶ್ರೀ ಬ್ರಹ್ಮ ಬೈದರ್ಕಳ ಗರಡಿ ಅಡ್ವೆ

ಯುವವಾಹಿನಿ (ರಿ) ಅಡ್ವೆ ಘಟಕ

ದಿನಾಂಕ : 29-12-2024
ಸ್ಥಳ : ಸ್ಕೌಟ್ ಗೈಡ್ಸ್ ಕನ್ನಡ ಭವನ ಮೂಡುಬಿದಿರೆ

ಯುವವಾಹಿನಿ (ರಿ.) ಮೂಡುಬಿದಿರೆ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
error: Content is protected !!