ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕ

ಬಂಟ್ವಾಳ ಯುವವಾಹಿನಿಯ ರಜತ ಸಂಭ್ರಮ -2014

ಸಾಮಾಜಿಕ ಸ್ಥಾನಮಾನ ಇಲ್ಲದ ವರ್ಗದವರಿಗೆ ಶಕ್ತಿ ತುಂಬುವ ಕಾರ್ಯವನ್ನು ಬ್ರಹ್ಮಶ್ರೀ ನಾರಾಯಣಗುರು ಮಾಡಿದ್ದಾರೆ. ಅವರ ತತ್ವ ಸಂದೇಶವನ್ನು ಯುವಕರು ಪಾಲಿಸಬೇಕು ಹಾಗೂ ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಕಳೆದ 25 ವರ್ಷಗಳ ಸಾಧನೆ ಶ್ಲಾಘನೀಯವಾದುದು ಎಂದು ಕೇಂದ್ರ ಸರಕಾರದ ಮಾಜಿ ವಿತ್ತ ಸಚಿವ ಬಿ. ಜನಾರ್ದನ ಪೂಜಾರಿ ತಿಳಿಸಿದರು.

ಅವರು ದಿನಾಂಕ 19.01.2014ನೇ ಆದಿತ್ಯವಾರ ಬಿ.ಸಿ.ರೋಡ್ ಗಾಣದಪಡ್ಪು ನಾರಾಯಣಗುರು ನಗರದ ಕಾಂತಬಾರೆ ಬೂದಬಾರೆ ಸಭಾಂಗಣದ ಕೋಟಿ ಚೆನ್ನಯ ವೇದಿಕೆಯಲ್ಲಿ ಜರುಗಿದ ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ರಜತ ಸಂಭ್ರಮ ಉದ್ಘಾಟಿಸಿ ಮಾತನಾಡಿದರು.

ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ರಜತ ವರ್ಷದ ಅದ್ಯಕ್ಷ ಭುವನೇಶ್ ಪಚ್ಚಿನಡ್ಕ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಕೇರಳ ವರ್ಕಳದ ಶಿವಗಿರಿ ಮಠಾಧೀಶರಾದ ಶ್ರೀ ಶ್ರೀ ಶ್ರೀ ಸತ್ಯಾನಂದ ತೀರ್ಥ ಸ್ವಾಮೀಜಿಯವರು ಆಶೀರ್ವಚನ ನೀಡಿದರು.

ಕರ್ನಾಟಕ ಸರಕಾರದ ನಗರಾಭಿವೃದ್ದಿ ಸಚಿವರಾದ ವಿನಯ ಕುಮಾರ್ ಸೊರಕೆ, ಮಾಜಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಕರ್ನಾಟಕ ಸರಕಾರದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ದಿನೇಶ್ ಅಮೀನ್ ಮಟ್ಟು,ರಾಷ್ರೀಯ ಬಿಲ್ಲವರ ಮಹಾ ಮಂಡಲದ ಅದ್ಯಕ್ಷ ಜಯ ಸಿ ಸುವರ್ಣ, ಕರ್ನಾಟಕ ಪ್ರದೇಶ ಆರ್ಯ ಈಡಿಗ ಸಂಘದ ಅದ್ಯಕ್ಷ ಜೆ.ಪಿ.ನಾರಾಯಣ ಸ್ವಾಮಿ, ಸೊರಬ ಶಾಸಕರಾದ ಮಧು ಬಂಗಾರಪ್ಪ, ಉದ್ಯಮಿ ರಮೇಶ್ ಕುಮಾರ್, ಉದ್ಯಮಿ ಸೀತಾರಾಮ ಪೂಜಾರಿ, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಕೆ.ಸೇಸಪ್ಪ ಕೋಟ್ಯಾನ್, ಮಾಜಿ ಶಾಸಕರಾದ ಎ.ರುಕ್ಮಯ ಪೂಜಾರಿ,  ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಕಾರ್ಯದರ್ಶಿ ನಾಗೇಶ್ ಪೂಜಾರಿ ಎಲಬೆ, ಸಂಚಾಲಕರಾದ ಟಿ.ಶಂಕರ ಸುವರ್ಣ ವೇದಿಕೆಯಲ್ಲಿ ಉಪಸ್ಥಿತರಿದ್ದರು.  ರಜತ ಸಂಭ್ರಮ ಸಂಚಾಲಕರಾದ ಜಿತೇಂದ್ರ ಜೆ.ಸುವರ್ಣ ಸ್ವಾಗತಿಸಿದರು, ಉಪಾಧ್ಯಕ್ಷ ರಾಜೇಶ್ ಸುವರ್ಣ ಪ್ರಾಸ್ತಾವಿಕ ಮಾತನಾಡಿದರು, ಬಿ.ಶ್ರೀಧರ ಅಮೀನ್ ಧನ್ಯವಾದ ನೀಡಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!