ಮಂಗಳೂರಿನ ನಿವಾಸಿ ಶ್ರೀ ಡಿ. ಭಾಸ್ಕರ ಸನಿಲ್ ಮತ್ತು ಶ್ರೀಮತಿ ವಜ್ರ ಬಿ. ಸನಿಲ್ ದಂಪತಿಗಳ ಸುಪುತ್ರಿ ಕುಮಾರಿ ವಿಭಾ ಬಿ. ಇವರು ಕಲಿಕೆಯಲ್ಲಿ ಮತ್ತು ಸೌಂದರ್ಯ ಸ್ಪರ್ಧೆಯಲ್ಲಿ ಮಿಂಚುತ್ತಿರುವ ಯುವ ಪ್ರತಿಭೆ. ಇವರು 2017ರ ಪಿ.ಯು.ಸಿ ಪರೀಕ್ಷೆಯಲ್ಲಿ 600ರಲ್ಲಿ 583 ಅಂಕ ಗಳಿಸುವುದರೊಂದಿಗೆ PCMB ಯಲ್ಲಿ 97.16% ಅಂಕ ಪಡೆದು ವಿಶಿಷ್ಠ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಮಂಗಳೂರಿನ ಮಹೇಶ್ ಪಿ.ಯು. ಕಾಲೇಜು ವಿದ್ಯಾರ್ಥಿನಿಯಾಗಿರುವ ಇವರು ಉತ್ತಮ ನಾಯಕತ್ವದ ಗುಣಗಳನ್ನು ಈಗಾಗಲೇ ಮೈಗೂಡಿಸಿಕೊಂಡಿದ್ದು, 2016-17ರಲ್ಲಿ ಕಾಲೇಜು ವಿದ್ಯಾರ್ಥಿ ಸಂಘದ ಅಧ್ಯಕ್ಷೆಯಾಗಿ ಕಾರ್ಯ ನಿರ್ವಹಿಸಿರುತ್ತಾರೆ. ಈ ವರ್ಷ ಮಹೇಶ್ ಪಿ.ಯು. ಕಾಲೇಜಿನಲ್ಲಿ ಟಾಪರ್ ಆಗಿದ್ದು ಪ್ರಾಂಶುಪಾಲರ ಎಕ್ಷಲೆನ್ಸ್ ಅವಾರ್ಡ್ ತಮ್ಮದಾಗಿಸಿಕೊಂಡಿರುತ್ತಾರೆ. ಅಲ್ಲದೆ ಸಂತ ಅಲೋಶಿಯಸ್ ಕಾಲೇಜಿನಲ್ಲಿ ಆಯೋಜಿಸಿದ ಸೆಮಿನಾರ್ ನಲ್ಲಿ ಪ್ರಥಮ ಸ್ಥಾನ ಮಹೇಶ್ ಪಿ.ಯು.ಕಾಲೇಜಿನಲ್ಲಿ ನಡೆದ ಸೌಂದರ್ಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು ಚರ್ಚಾ ಸ್ಪರ್ಧೆ, ಭಾಷಣ ಸ್ಪರ್ಧೆ, ಸಂಗೀತ ಸ್ಪರ್ಧೆ, ಮುಖವರ್ಣಿಕೆ ಸ್ಪರ್ಧೆಗಳಲ್ಲಿ ಭಾಗವಹಿಸಿ ತಮ್ಮ ಪ್ರೌಢಿಮೆ ತೋರಿರುತ್ತಾರೆ. ಇವರ ಭವಿಷ್ಯ ಉಜ್ವಲವಾಗಲಿ ಎಂದು ಹಾರೈಸುತ್ತಾ ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಯುವವಾಹಿನಿ (ರಿ) ಉಪ್ಪಿನಂಗಡಿ ಘಟಕದ ಆತಿಥ್ಯದಲ್ಲಿ ದಿನಾಂಕ 06.08.2017 ರಂದು ಉಪ್ಪಿನಂಗಡಿಯ ಎಚ್ ಎಮ್.ಆಡಿಟೋರಿಯಂ ಇಲ್ಲಿ ಜರುಗಿದ ಯುವವಾಹಿನಿಯ 30ನೇ ವಾರ್ಷಿಕ ಸಮಾವೇಶದ ಸುಸಂದರ್ಭದಲ್ಲಿ ‘ಯುವವಾಹಿನಿ ಅಕ್ಷರ ಪುರಸ್ಕಾರ’ ನೀಡಿ ಗೌರವಿಸುತ್ತಿದೆ.
ಈ ಸಂದರ್ಭದಲ್ಲಿ ಕರ್ನಾಟಕ ಸರಕಾರದ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಶ್ರೀ ಕೆ.ವಸಂತ ಬಂಗೇರ, ಐ ಎಪ್ ಎಸ್ ಅಧಿಕಾರಿ ಶ್ರೀ ದಾಮೋದರ ಎ.ಟಿ, ಜಿಲ್ಲಾ ಪಂಚಾಯತ್ ಸದಸ್ಯರಾದ ಶ್ರೀಮತಿ ಶಯನಾ ಜಯಾನಂದ,ಪುತ್ತೂರು ತಾಲೂಕು ಬಿಲ್ಲವ ಸಂಘದ ಅಧ್ಯಕ್ಷರಾದ ಶ್ರೀ ಜಯಂತ ನಡುಬೈಲು, ಕಾಸರಗೋಡು ಸರಕಾರಿ ಕಾಲೇಜು ಸಹ ಪ್ರಾಧ್ಯಾಪಕರಾದ ಡಾ.ರಾಜೇಶ್ ಬೆಜ್ಜಂಗಳ,ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಮರೋಳಿ, ಸಮಾವೇಶ ನಿರ್ದೇಶಕರಾದ ಡಾ.ಸದಾನಂದ ಕುಂದರ್, ಕಾರ್ಯದರ್ಶಿ ನಿತೇಶ್ ಜೆ.ಕರ್ಕೇರಾ ಸ್ವಾಗತ ಸಮಿತಿಯ ಅಧ್ಯಕ್ಷರಾದ ಡಾ.ರಾಜಾರಾಮ್, ಯುವವಾಹಿನಿ ಉಪ್ಪಿನಂಗಡಿ ಘಟಕದ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ಉಪಸ್ಥಿತರಿದ್ದರು