ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಿರುವೆರ್ ಕುಡ್ಲ (ರಿ.) ಮಂಗಳೂರು ಸಂಘಟನೆಯ ದಶಮಾನೋತ್ಸವದ ಸವಿನೆನಪಿಗಾಗಿ, ಕಳೆದ 36 ವರ್ಷಗಳಿಂದ ಸುಧೀರ್ಘ ಸಮಾಜಮುಖಿ ಸೇವೆಯನ್ನು ನೀಡುತ್ತಿರುವ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಾಜ್ಯದ ಪ್ರತಿಷ್ಠಿತ ಸಂಸ್ಥೆಯಾದ ಯುವವಾಹಿನಿಯ ಸೇವೆಯನ್ನು ಗುರುತಿಸಿ, ಗೌರವಿಸಿ, ಗೌರವದ ಸನ್ಮಾನ ನೀಡಿದೆ.
ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ. ಪೂಜಾರಿ ಯುವವಾಹಿನಿಯ ಪರವಾಗಿ ಸನ್ಮಾನವನ್ನು ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಜಗದೀಶ್ಚಂದ್ರ ಡಿ.ಕೆ, ಜೊತೆ ಕಾರ್ಯದರ್ಶಿ ರೇಖಾ ಗೋಪಾಲ್, ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ಕೇಂದ್ರ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.