ಯುವವಾಹಿನಿ(ರಿ) ಪಣಂಬೂರು ಘಟಕ

’ಬ್ರಹ್ಮಶ್ರೀ ನಾರಾಯಣಗುರುಗಳ ತತ್ವಾದರ್ಶಗಳ ಅನುಷ್ಠಾನದಲ್ಲಿ ಬಿಲ್ಲವ ಸಮಾಜ’ ವಿಚಾರ ಕಮ್ಮಟ

ದಿನಾಂಕ 11-12-2016 ರಂದು ಕುಳಾಯಿ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘದಲ್ಲಿ ಯುವವಾಹಿನಿ (ರಿ) ಪಣಂಬೂರು ಘಟಕದ ವತಿಯಿಂದ ಯುವವಾಹಿನಿ ಕೂಳೂರು ಘಟಕದ ಸಹಯೋಗದೊಂದಿಗೆ ಬ್ರಹ್ಮಶ್ರೀ ನಾರಾಯಣಗುರುಗಳ ತತ್ವಾದರ್ಶಗಳ ಅನುಷ್ಠಾನದಲ್ಲಿ ಬಿಲ್ಲವ ಸಮಾಜ ಎಂಬ ವಿಚಾರ ಕಮ್ಮಟ ನಡೆಯಿತು. ಕುಳಾಯಿ ಸಂಘದ ಅಧ್ಯಕ್ಷ ಎಂ.ಟಿ. ಸಾಲ್ಯಾನ್ ದೀಪ ಬೆಳಗಿಸಿ ಕಮ್ಮಟವನ್ನು ಉದ್ಘಾಟಿಸಿದರು. ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ಕೆ. ವಿಶ್ವನಾಥ್‌ರವರು ಪಣಂಬೂರು ಹಾಗೂ ಕೂಳೂರು ಘಟಕದ ಬೆಳವಣಿಗೆಯನ್ನು ತಿಳಿಸುತ್ತಾ ಕಾರ್ಯಕ್ರಮದ ಬಗ್ಗೆ ಪ್ರಸ್ತಾವನೆ ಗೈದರು. ಯುವವಾಹಿನಿ (ರಿ) ಕೇಂದ್ರ ಸಮಿತಿಯ ಹಾಗೂ ಪಣಂಬೂರು ಘಟಕದ ಮಾಜಿ ಅಧ್ಯಕ್ಷ ಕೆ. ರಾಜೀವ ಪೂಜಾರಿಯವರು ಸಂಪನ್ಮೂಲ ವ್ಯಕ್ತಿಯಾಗಿ ಕಮ್ಮಟವನ್ನು ನಡೆಸಿಕೊಟ್ಟರು. ಶ್ರೀ ನಾರಾಯಣ ಗುರುಗಳ ಜನನ, ಬೆಳವಣಿಗೆ, ಸಾಧನೆ-ಬೋಧನೆ, ಕಾರ್ಯಕ್ಷೇತ್ರಗಳ ಮೇಲೆ ಬೆಳಕು ಚೆಲ್ಲುತ್ತಾ ಬಿಲ್ಲವ ಜನಾಂಗ ಹಾಗೂ ಇನ್ನಿತರ ಹಿಂದುಳಿದ ಜನಾಂಗಕ್ಕೆ ಬ್ರಹ್ಮಶ್ರೀಯವರ ಸೇವೆ ಹಾಗೂ ಕರೆಗಳನ್ನು ಕಮ್ಮಟದಲ್ಲಿ ಮಂಡಿಸಿದರು.


ಕುಳಾಯಿ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘದಲ್ಲಿ ಶಾಂತಿಯಾಗಿ ಸುಮಾರು 25 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಶ್ರೀ ಶ್ರೀನಿವಾಸ ಶಾಂತಿ ಹಾಗೂ ಕೂಳೂರು ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘದಲ್ಲಿ ಶಾಂತಿಯಾಗಿ ಸುಮಾರು 23 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಶ್ರೀ ಕೃಷ್ಣ ಶಾಂತಿಯವರನ್ನು ಕಾರ್ಯಕ್ರಮದಲ್ಲಿ ಗೌರವಿಸಿ ಸನ್ಮಾನಿಸಲಾಯಿತು. ಹಾಗೂ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ನಿಯಮಿತ ಸಂಸ್ಥೆಯು ಆರಂಭವಾಗಿ ಕೇವಲ 5 ವರ್ಷಗಳಲ್ಲಿ ಸಹಕಾರಿ ಕ್ಷೇತ್ರದಲ್ಲಿ ಮಹತ್ತರವಾದ ಸಾಧನೆ ಮಾಡಿ 2016 ರ ಸಾಲಿನ ರಾಜ್ಯಮಟ್ಟದ ಅತ್ಯುತ್ತಮ ಸಹಕಾರೀ ಸಂಸ್ಥೆಯೆಂಬ ಬಿರುದನ್ನು ಗಳಿಸುವಲ್ಲಿ ಯಶಸ್ವಿಯಾದುದು ಒಂದು ಹೆಮ್ಮೆಯ ಸಂಗತಿ. ಸಹಕಾರಿ ಕ್ಷೇತ್ರದ ಈ ಮಹತ್ತರ ಸಾಧನೆಯ ಹಿಂದೆ ಸಂಸ್ಥೆಯ ಅಧ್ಯಕ್ಷರಾದ ಚಿತ್ತರಂಜನ್ ಬೋಳಾರ್‌ರವರ ಪರಿಪಕ್ವತೆಯುಳ್ಳ ನೇತೃತ್ವವನ್ನು ಗುರುತಿಸಿ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಕೇಂದ್ರ ಸಮಿತಿಯ ಅಧ್ಯಕ್ಷ ಪದ್ಮನಾಭ ಮರೋಳಿ, ಪಣಂಬೂರು ಘಟಕದ ಅಧ್ಯಕ್ಷ ವಸಂತ ಪೂಜಾರಿ, ಕಾರ್ಯದರ್ಶಿ ಉದಯ ಆರ್., ಕೂಳೂರು ಘಟಕದ ಕಾರ್ಯದರ್ಶಿ ದೀಕ್ಷಿತ್, ಉಪಾಧ್ಯಕ್ಷ ಪುಷ್ಪರಾಜ್ ಮೊದಲಾದವರು ಉಪಸ್ಥಿತರಿದ್ದರು.

ಕುಮಾರಿ ಭೂಮಿಕ ಮತ್ತು ಅನುಜ್ಞ ಪ್ರಾರ್ಥನೆಗೈದರು. ಪಣಂಬೂರು ಘಟಕದ ಅಧ್ಯಕ್ಷ ವಸಂತ್ ಪೂಜಾರಿ ಸ್ವಾಗತಿಸಿದರು. ಕಾರ್ಯದರ್ಶಿ ಉದಯ ಆರ್. ಕೂಳೂರು ವಂದಿಸಿದರು. ಘಟಕದ ಹಾಗೂ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ರವಿಚಂದ್ರ ಕಾರ್ಯಕ್ರಮ ನಿರೂಪಿಸಿದರು.

One thought on “’ಬ್ರಹ್ಮಶ್ರೀ ನಾರಾಯಣಗುರುಗಳ ತತ್ವಾದರ್ಶಗಳ ಅನುಷ್ಠಾನದಲ್ಲಿ ಬಿಲ್ಲವ ಸಮಾಜ’ ವಿಚಾರ ಕಮ್ಮಟ

  1. ಬಿಲ್ಲ,ವ ಸಮಾಜಕ್ಲೇ ಉತ್ತಮ ವಾದ ಸಂದೇಶ- ಒಳ್ಳೆಯ ಕಾರ್ಯ

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!