ಮಂಗಳೂರು: ಯುವವಾಹಿನಿ(ರಿ.) ಮಂಗಳೂರು ಘಟಕದ ವತಿಯಿಂದ ಪ್ರತಿ ಸೋಮವಾರ ಶ್ರೀ ಗೋಕರ್ಣನಾಥೇಶ್ವರ ಕ್ಷೇತ್ರ ಕುದ್ರೋಳಿಯಲ್ಲಿ ನಡೆಸಿಕೊಂಡು ಬರುತ್ತಿರುವ ಭಜನಾ ಸಂಕೀರ್ತನೆಯ ಅಂಗವಾಗಿ ಯುವವಾಹಿನಿ(ರಿ.) ಕೂಳೂರು ಘಟಕದ ವತಿಯಿಂದ ದಿನಾಂಕ 18-03-2024 ಸೋಮವಾರದಂದು ಯುವವಾಹಿನಿ(ರಿ.) ಕೂಳೂರು ಘಟಕದ ಸದಸ್ಯರು ಭಜನಾ ಕಾರ್ಯಕ್ರಮವನ್ನು ನಡೆಸಿಕೊಟ್ಟರು.
ಈ ಕಾರ್ಯಕ್ರಮದಲ್ಲಿ ಘಟಕದ ಅಧ್ಯಕ್ಷರಾದ ಇಂದಿರಾ ಸುರೇಶ್, ಒಂದನೇ ಉಪಾಧ್ಯಕ್ಷರಾದ ಲತೀಶ್ ಪೂಜಾರಿ, ಎರಡನೇ ಉಪಾಧ್ಯಕ್ಷರಾದ ಗೀತಾ, ಮಾಜಿ ಅಧ್ಯಕ್ಷರಾದ ದೀಕ್ಷಿತ್ ಸಿ. ಎಸ್., ಮಾರ್ಗದರ್ಶಕರಾದ ಜಯಾನಂದ ಅಮೀನ್, ಚಂದಪ್ಪ ಸನಿಲ್, ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರಾದ ವಿಮಲಾ, ಜೊತೆ ಕಾರ್ಯದರ್ಶಿ ಕೀರ್ತನ, ಘಟಕದ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.
ಸುಮಾರು 30 ಸದಸ್ಯರು ಸಂಜೆ 5:30 ರಿಂದ 7:00 ಗಂಟೆಯವರೆಗೆ ನಡೆದ ಭಜನಾ ಸಂಕೀರ್ತನೆಯಲ್ಲಿ ಪಾಲ್ಗೊಂಡರು. 7:00 ಗಂಟೆಗೆ ಮಂಗಳ ಹಾಡುವ ಮೂಲಕ ಭಜನಾ ಸೇವೆಯನ್ನು ಮುಕ್ತಾಯಗೊಳಿಸಲಾಯಿತು. ನಾರಾಯಣ ಗುರು ಸ್ವಾಮಿಗಳಿಗೆ ಆರತಿ ಬೆಳಗಿದ ನಂತರ ಮಂಗಳೂರು ಘಟಕದ ವತಿಯಿಂದ ಅಧ್ಯಕ್ಷರಿಗೆ ಶಾಲು ಹೊದಿಸಿ, ಪ್ರಸಾದ ನೀಡಿ ಗೌರವಿಸಿದರು. ಮಂಗಳೂರು ಘಟಕದ ಅಧ್ಯಕ್ಷರಾದ ನಾಗೇಶ್ ಅಮೀನ್, ಮಾಜಿ ಅಧ್ಯಕ್ಷರಾದ ಸಾಧು ಪೂಜಾರಿ, ಭಜನಾ ಸಂಚಾಲಕರು ಪೂವಪ್ಪ ಕುಕ್ಯಾನ್, ಪದಾಧಿಕಾರಿಗಳು ಮತ್ತು ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಮುಕ್ತಾಯದ ಹಂತದಲ್ಲಿ ಅವಲಕ್ಕಿ ಪಾನಕದ ವ್ಯವಸ್ಥೆ ಮಾಡಿದ್ದರು.