ಪಡುಬಿದ್ರಿ : ಕರ್ನಾಟಕ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ) ಪಡುಬಿದ್ರಿ ಘಟಕದ ವತಿಯಿಂದ ಹೆಜಮಾಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಿನಾಂಕ 17-11-2024 ರಂದು ಮಕ್ಕಳ ಹಬ್ಬ 2024 ಕಾರ್ಯಕ್ರಮ ನೆರವೇರಿತು.
ಶಾಲೆಯ ವಿದ್ಯಾರ್ಥಿ ನಾಯಕಲಕ್ಷಿಣ್ ಕಾರ್ಯಕ್ರಮ ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಲೋಕೇಶ್ ಅಮೀನ್ ಮಾತನಾಡಿ ಕಳೆದ ಹಲವಾರು ವರ್ಷಗಳಿಂದ ಮಕ್ಕಳಿಗೆ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ಪ್ರೋತ್ಸಾಹಿಸಿ ಕೊಂಡು ಬರುತ್ತಿರುವ ಯುವವಾಹಿನಿ (ರಿ) ಪಡುಬಿದ್ರಿ ಘಟಕದ ಕಾರ್ಯ ನಿಜವಾಗಿಯೂ ಶ್ಲಾಘನೀಯ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಶ್ರೀಮತಿ ಶಶಿಕಲಾ ಯಶೋಧರ್ ವಹಿಸಿದ್ದರು.
ಈ ಸಂದರ್ಭ ಮಕ್ಕಳಿಗಾಗಿ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳಿಗೆ ಚಾಲನೆ ನೀಡಲಾಯಿತು.
ವೇದಿಕೆಯಲ್ಲಿ ಶರಣ್ ಕುಮಾರ್ ಮಟ್ಟು ಮತ್ತು ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಶ್ರೀಮತಿ ಸ್ವಪ್ನ ಹಾಗೆಯೇ ಮುಖ್ಯೋಪಾಧ್ಯಾಯ ರಾದ ಶ್ರೀಮತಿ ಲತಾ ಹಾಗೂ ಕಲೆ ಮತ್ತು ಸಾಹಿತ್ಯ ನಿರ್ದೇಶಕರಾದ ಶ್ರೀಮತಿ ಚೈತ್ರಾ ಮನೋಹರ್ ಹಾಗೂ ಕಾರ್ಯದರ್ಶಿ ಸುಜಾತಾ ಪ್ರಸಾದ್ ಉಪಸ್ಥಿತರಿದ್ದರು.
ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶೇಖರ್ ಹೆಜಮಾಡಿ ಇವರನ್ನು ಘಟಕದ ವತಿಯಿಂದ ಸನ್ಮಾನಿಸಲಾಯಿತು.
ವಿಧಿತ್ ಪೂಜಾರಿ ಕರ್ನಿರೆ ಹಾಗೂ ಕುಮಾರಿ ಕ್ಷಮ್ಯ ಕಾರ್ಯಕ್ರಮ ನಿರೂಪಣೆ ಮಾಡಿದರು.
ಮಕ್ಕಳ ಹಬ್ಬ 2024 ಸಮಾರೋಪ ಸಮಾರಂಭ
ಕರ್ನಾಟಕ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತ ಯುವವಾಹಿನಿ (ರಿ) ಪಡುಬಿದ್ರಿ ಘಟಕದ ವತಿಯಿಂದ ಹೆಜಮಾಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಮಕ್ಕಳ ಹಬ್ಬ 2024 ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಅತ್ಯುತ್ತಮ ಸಾಧನೆಗೈದ 7ನೇ ತರಗತಿಯ ದಿಯಾ ಪೂಜಾರಿ ಅವರಿಗೆ ಕಲಾರತ್ನ ಮತ್ತು ನಾಲ್ಕನೇ ತರಗತಿಯ ನಿಷಿಕ ಇವರಿಗೆ ಕಲಾಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ.ಪೂಜಾರಿ ಮಾತನಾಡಿ ಸರಕಾರಿ ಶಾಲೆಗೆ ಮಹತ್ವ ನೀಡಿ ಮಕ್ಕಳ ಪ್ರತಿಭೆಗೆ ಅವಕಾಶಕಲ್ಪಿಸಿದ ಯುವವಾಹಿನಿ ಅಭಿನಂದನಾರ್ಹ,ಯುವವಾಹಿನಿ ನೀಡಿದ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ಕಲಿತ ಶಾಲೆಗೂ, ಊರಿಗೂ ಕೀರ್ತಿ ತನ್ನಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತನ್ನುಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಡುಬಿದ್ರಿ ಘಟಕದ ಅಧ್ಯಕ್ಷರಾದ ಶಶಿಕಲಾ ಯಶೋಧರ್ ಪೂಜಾರಿ ವಹಿಸಿದ್ದರು.
ಹೆಜಮಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಮೋಹನ್ ಸುವರ್ಣ, ಹೆಜಮಾಡಿ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾದ ಶಿವರಾಮ್ ಎನ್ ಶೆಟ್ಟಿ, ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಶ್ರೀಮತಿ ಭಾರತಿ ಭಾಸ್ಕರ್, ಶಾಲಾ ಮುಖ್ಯೋಪಾಧ್ಯಾಯಾಯಿನಿ ಶ್ರೀಮತಿ ಲತಾ ಹಾಗೂ ಕಲೆ ಮತ್ತು ಸಾಹಿತ್ಯ ನಿರ್ದೇಶಕರಾದ ಶ್ರೀಮತಿ ಚೈತ್ರಾ ಮನೋಹರ್ ಉಪಸ್ಥಿತರಿದ್ದರು.
ಕಾರ್ಯದರ್ಶಿ ಶ್ರೀಮತಿ ಸುಜಾತಾ ಪ್ರಸಾದ್ ಧನ್ಯವಾದ ಸಲ್ಲಿಸಿದರು.
ಕುಮಾರಿ ತೃಪ್ತಿ ಹಾಗೂ ಹರೀಶ್ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು.