ಮಂಗಳೂರು : ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕ ಇದರ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಮಂಗಳೂರು ತಾಲೂಕು ಇದರ ಸಹಕಾರದೊಂದಿಗೆ ಮಲ್ಲಿಗೆ ಕೃಷಿ ತರಬೇತಿ ಕಾರ್ಯಗಾರವು ದಿ : 20.12.2024 ರಂದು ಮಧ್ಯಾಹ್ನ 2:30ಕ್ಕೆ ಯುವವಾಹಿನಿ ಸಭಾಂಗಣ ಊರ್ವ ಸ್ಟೋರ್ ಇಲ್ಲಿ ನಡೆಯಿತು. ಮೊದಲಿಗೆ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವು ಪ್ರಾರಂಭವಾಯಿತು.
ವೇದಿಕೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಮಂಗಳೂರು ತಾಲೂಕು ಇದರ ಕೃಷಿ ಅಧಿಕಾರಿ ಶ್ರೀಯುತ ಮೋಹನ್ ಕುಮಾರ್ ಇವರು ಉಪಸ್ಥಿತರಿದ್ದರು.
ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಮಂಗಳೂರು ತಾಲೂಕು ಇದರ ಬಿ.ಸಿ. ಟ್ರಸ್ಟ್ ಪ್ರಗತಿ ಬಂದು ಸ್ವಸಹಾಯಕ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷರು ಶ್ರೀಮತಿ ಗೀತಾ ಪ್ರವೀಣ್ ಹಾಗೂ ಸ್ಥಳೀಯ ಸೇವಾ ಪ್ರತಿನಿಧಿಯಾಗಿ ಶ್ರೀಮತಿ ದಿವ್ಯ ಉಪಸ್ಥಿತರಿದ್ದರು.
ಘಟಕದ ಕಾರ್ಯದರ್ಶಿಯಾದ ಶ್ರೀಮತಿ ಜಯಲಕ್ಷ್ಮಿ ಇವರು ಬಂದಿರುವ ಅತಿಥಿಗಳನ್ನು ಹಾಗೂ ಎಲ್ಲರನ್ನೂ ಸ್ವಾಗತಿಸಿದರು.
ಅತಿಥಿಗಳು ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಕಾರ್ಯಕ್ರಮವು ಮಂಗಳೂರು ಮಹಿಳಾ ಘಟಕದ ಅಧ್ಯಕ್ಷರಾದ ಶ್ರೀಮತಿ ನೈನ ವಿಶ್ವನಾಥ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
ಈ ಕಾರ್ಯಕ್ರಮ ದ ರೂವಾರಿಯಾದಂತಹ ಮಂಗಳೂರು ಮಹಿಳಾ ಘಟಕದ ಮಾಜಿ ಅಧ್ಯಕ್ಷರಾದ ಶ್ರೀಮತಿ ರೇಖಾ ಗೋಪಾಲ್ ಉಪಸ್ಥಿತರಿದ್ದರು. ಬಳಿಕ ಸಂಪನ್ಮೂಲ ವ್ಯಕ್ತಿಗಳು ಮಲ್ಲಿಗೆ ಕೃಷಿಯ ಬಗ್ಗೆ ಮಾಹಿತಿ ಕಾರ್ಯಗಾರವನ್ನು ನಡೆಸಿಕೊಟ್ಟರು.
ಎಲ್ಲರಿಗೂ ಉಚಿತವಾಗಿ ಮಲ್ಲಿಗೆ ಗಿಡವನ್ನು ವಿತರಿಸಲಾಯಿತು.
ಸುಮಾರು 40 ಸದಸ್ಯರು ಈ ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಂಡರು. ಮಹಿಳಾ ಘಟಕದ ಅಧ್ಯಕ್ಷರಾದ ಶ್ರೀಮತಿ ನೈನ ವಿಶ್ವನಾಥ್ ಅತಿಥಿಗಳಿಗೆ ಸ್ಮರಣಿಕೆಗಳನ್ನು ನೀಡಿ ಗೌರವಿಸಿದರು.
ಮಾಜಿ ಅಧ್ಯಕ್ಷರಾದ ಶ್ರೀಮತಿ ರೇಖಾ ಗೋಪಾಲ್ ಅವರು ಎಲ್ಲರಿಗೂ ಧನ್ಯವಾದ ಸಮರ್ಪಿಸಿದರು.