ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ಪ್ರಶಸ್ತಿ ಸ್ವೀಕರಿಸಲಿದ್ದಾರೆ.
ಸಮಾಜದಲ್ಲಿ ತೀರಾ ಹಿಂದುಳಿದಿರುವ ಬಡ ಕುಟುಂಬಗಳಿಗೆ ಮನೆ ನಿರ್ಮಾಣ, ಚಿಮಣಿ ಬೆಳಕಿನ ಮನೆಗಳಿಗೆ ವಿದ್ಯುತ್ ಭಾಗ್ಯ, ಗ್ರಾಮಗ್ರಾಮಗಳಲ್ಲಿ ಆರೋಗ್ಯ ಶಿಬಿರ, ಸಾವಿರಕ್ಕೂ ಅಧಿಕ ಮಕ್ಕಳ ದತ್ತು ಸ್ವೀಕಾರ, ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ನೆರವು, ವೃತ್ತಿ ಮಾರ್ಗದರ್ಶನ ಶಿಬಿರ, ಆಶಕ್ತರಿಗೆ ಆರೋಗ್ಯ ನೆರವು, ವಿದ್ಯಾರ್ಥಿಗಳಿಗೆ ಪ್ರೇರಣಾ ಶಿಬಿರ, ಹೀಗೆ ಸಾವಿರಾರು ಕಾರ್ಯಕ್ರಮಗಳನ್ನು ಯುವವಾಹಿನಿಯು ನಡೆಸುತ್ತಾ ಬಂದಿದೆ. ರಾಜ್ಯಾದ್ಯಂತ 33 ಘಟಕಗಳ ಮೂರು ಸಾವಿರಕ್ಕೂ ಅಧಿಕ ಸದಸ್ಯರು ಕಳೆದ 35 ವರುಷಗಳಿಂದ ಸೇವೆಯನ್ನು ನೀಡುತ್ತಾ ಬರುತ್ತಿರುವ ಯುವವಾಹಿನಿ ಸಾಹಿತ್ಯಿಕ ಸೇವೆಯನ್ನು ನಡೆಸುತ್ತಿದ್ದು ಹಿರಿಯ ಸಾಹಿತಿ ದಿವಂಗತ ವಿಶುಕುಮಾರ್ ಅವರ ಹೆಸರಿನಲ್ಲಿ ವಿಶುಕುಮಾರ್ ಪ್ರಶಸ್ತಿಯನ್ನೂ ನೀಡುತ್ತಾ ಬರುತ್ತಿದೆ.
Congrulations.