ಯುವವಾಹಿನಿ ಅರ್ಥಪೂರ್ಣ ಸಂಘಟನೆಯಾಗಿ ಬಲಿಷ್ಠವಾಗಿ ಬೆಳೆದಿದೆ, ಯುವವಾಹಿನಿ ಸಂಘಟನೆ ಶ್ರೇಷ್ಠ ನಾಯಕರನ್ನು ಈ ಸಮಾಜಕ್ಕೆ ನೀಡಿದೆ, ಉದ್ಯೋಗಸ್ಥರಿಗಾಗಿ ಹಾಸ್ಟೆಲ್ ನಿರ್ಮಾಣ ಮಾಡಬೇಕಾಗಿದೆ ಎಂಬ ಆಶಯವನ್ನು ಯುವವಾಹಿನಿಯ ಸ್ಥಾಪಕ ಸದಸ್ಯರು ಹಾಗೂ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ದಿನೇಶ್ ಅಮೀನ್ ಮಟ್ಟು ತಿಳಿಸಿದರು.
ಅವರು ದಿನಾಂಕ 24.09.2017 ರಂದು ಮಂಗಳೂರಿನ ಯುವವಾಹಿನಿ ಕೇಂದ್ರ ಕಛೇರಿಗೆ ಬೇಟಿ ನೀಡಿ ಮಾತನಾಡಿದರು. ಯುವವಾಹಿನಿ ಕೇಂದ್ರ ಸಮಿತಿಯ ಪದಾಧಿಕಾರಿಗಳು ಹಾಗೂ ಮಾಜಿ ಅಧ್ಯಕ್ಷರುಗಳ ಜತೆ ಯುವವಾಹಿನಿಯ ಸಮಾಜಮುಖಿ ಕಾರ್ಯಕ್ರಮಗಳ ಬಗ್ಗೆ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿ, ಉಪಾಧ್ಯಕ್ಷರಾದ ಜಯಂತ ನಡುಬೈಲು, ನರೇಶ್ ಕುಮಾರ್ ಸಸಿಹಿತ್ಲು, ಇತರ ಪದಾಧಿಕಾರಿಗಳು, ಮಾಜಿ ಅಧ್ಯಕ್ಷರು ಉಪಸ್ಥಿತರಿದ್ದರು
Really
Nice