ಪುತ್ತೂರು : ದಿನಾಂಕ 11.08.2019 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ವಿಶಾಲ ಗದ್ದೆಯಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಯುವವಾಹಿನಿ ಸಂಸ್ಥೆಯ 32ನೇ ವಾರ್ಷಿಕ ಸಮಾವೇಶದಲ್ಲಿ ಯುವವಾಹಿನಿ ಗೌರವ ಅಭಿನಂದನೆ ಹಾಗೂ ಯುವವಾಹಿನಿ ಸಾಧಕ ಪುರಸ್ಕಾರ ಪ್ರದಾನ ಮಾಡಲಾಯಿತು.
ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡುವ ಮೂಲಕ ಡಾಕ್ಟರೇಟ್ ಪದವಿ ಪಡೆದ ಬಿಲ್ಲವ ಸಮುದಾಯದ ಡಾ| ಸಂತೋಷ್ ಕುಮಾರ್ ನೆಲ್ಲಿಕಟ್ಟೆ, ಡಾ|ಮನೋಹರ್, ಡಾ| ಲತಾ ಆರ್ ಕೋಟ್ಯಾನ್, ಡಾ|ಶಿಲ್ಪಶ್ರೀರವರಿಗೆ ಶಾಲು ಹೊದಿಸಿ ಯುವವಾಹಿನಿ ಗೌರವ ಅಭಿನಂದನೆ ಪುರಸ್ಕ್ರತರಾಗಿ ಗೌರವಿಸಲಾಯಿತು. ಬಡ ಮಕ್ಕಳಿಗೆ ಆಶ್ರಯ ತಾಣ ನಿಸರ್ಗ ಧಾಮವನ್ನು ನಿರ್ಮಿಸಿ ಮಕ್ಕಳಿಗೆ ಅಗತ್ಯ ಶಿಕ್ಷಣವನ್ನು ನೀಡುವ ಮೂಲಕ ಗುರುತಿಸಿಕೊಂಡ ಯುವವಾಹಿನಿ ಬೆಂಗಳೂರು ಘಟಕದ ಸದಸ್ಯರಾದ ಶಶಿಧರ್ ಕೋಟ್ಯಾನ್ ಬೆಂಗಳೂರು, ಶಿಕ್ಷಣ ಕ್ಷೇತ್ರದಲ್ಲಿ ಕವಿ, ಸಂಘಟಕ, ಮಕ್ಕಳ ಒಲವಿನ ಶಿಕ್ಷಣ ಸೇವಕ ಎನಿಸಿಕೊಂಡಿರುವ ಯುವವಾಹಿನಿ ಮಾಣಿ ಘಟಕದ ಉಪಾಧ್ಯಕ್ಷರಾದ ಪ್ರಶಾಂತ್ ಬಿ.ಅನಂತಾಡಿ ಮಾಣಿ, ಫೋಟೋಗ್ರಫಿಯಲ್ಲಿ ಮೂಲಕ ಅಂತರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿರುವ ಯುವವಾಹಿನಿ ಬಂಟ್ವಾಳ ಘಟಕದ ಸದಸ್ಯರಾದ ಅಗ್ರಬೈಲು ಶ್ರವಣ್ ಪೂಜಾರಿರವರನ್ನು ಯುವವಾಹಿನಿ ಸಾಧಕ ಪುರಸ್ಕಾರ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಐಪಿಎಸ್ ಅಧಿಕಾರಿ `ಕರ್ನಾಟಕದ ಸಿಂಗಂ’ ಖ್ಯಾತಿಯ ಅಣ್ಣಾಮಲೈ, ಪುತ್ತೂರು ಸಹಾಯಕ ಆಯುಕ್ತ ಎಚ್.ಕೆ ಕೃಷ್ಣಮೂರ್ತಿ, ಸಾಗರೋತ್ತರ ಉದ್ಯಮಿ ಮಸ್ಕತ್‍ನಲ್ಲಿನ ಡಾ|ಸಿ.ಕೆ ಅಂಚನ್, ತುಳುರಂಗದ ಚಿತ್ರನಟಿ ನವ್ಯಾ ಪೂಜಾರಿ, ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷ ಡಾ| ರಾಜಶೇಖರ ಕೋಟ್ಯಾನ್, ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಜಯಂತ್ ನಡುಬೈಲ್, ಯುವವಾಹಿನಿ ಕೇಂದ್ರ ಸಮಿತಿ ಸಮಾವೇಶದ ನಿರ್ದೇಶಕ ಶಶಿಧರ್ ಕಿನ್ನಿಮಜಲು, ಯುವವಾಹಿನಿ ಕೇಂದ್ರ ಸಮಿತಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕೆ.ಅಂಚನ್, ಯುವವಾಹಿನಿ ಪುತ್ತೂರು ಘಟಕದ ಅಧ್ಯಕ್ಷ ನಾರಾಯಣ ಪೂಜಾರಿ ಕುರಿಕ್ಕಾರ ಹಾಗೂ ಯುವವಾಹಿನಿ ಸಂಸ್ಥೆಯ 35 ಘಟಕಗಳ ಅಧ್ಯಕ್ಷರುಗಳು ಉಪಸ್ಥಿತರಿದ್ದರು.