ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಪದಗ್ರಹಣ

ಯುವವಾಹಿನಿ ಬಂಟ್ವಾಳ ಘಟಕದ ಸಾಧನೆ ಶ್ಲಾಘನೀಯ : ಮರೋಳಿ

ಬಂಟ್ವಾಳ : ಯುವವಾಹಿನಿ ಬಂಟ್ವಾಳ ಘಟಕದ ಸಾಧನೆ ಶ್ಲಾಘನೀಯವಾದುದು, ಕಳೆದ 29 ವರ್ಷಗಳಿಂದ ನಿರಂತರ ಸಮಾಜಮುಖಿ ‌ಕಾರ್ಯದಲ್ಲಿ‌ ತೊಡಗಿಸಿಕೊಂಡ ಯುವವಾಹಿನಿ ಬಂಟ್ವಾಳ ಘಟಕವು ಕೇಂದ್ರ ಸಮಿತಿಯಲ್ಲಿ ವಿಶೇಷ ಗೌರವಕ್ಕೆ ಪಾತ್ರವಾಗಿದೆ,
ಯುವಬಿಲ್ಲವ ಸಮಾವೇಶ, ಡೆನ್ನಾನ ಡೆನ್ನನ ದಂತಹ ದಾಖಲೆಯ ಕಾರ್ಯಕ್ರಮದ ಮೂಲಕ ಬಂಟ್ವಾಳ ಯುವವಾಹಿನಿ ಜನಮಾನಸದಲ್ಲಿ ನೆಲೆನಿಂತಿದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ನಿಕಟಪೂರ್ವ ಅಧ್ಯಕ್ಷ ಪದ್ಮನಾಭ ಮರೋಳಿ‌ ತಿಳಿಸಿದರು.

ಅವರು ದಿನಾಂಕ‌ 10.06.2018 ರಂದು ಬಿ.ಸಿ.ರೋಡ್ ಯುವವಾಹಿನಿ ಭವನದಲ್ಲಿ ಯುವವಾಹಿನಿ (ರಿ) ಬಂಟ್ವಾಳ ಘಟಕದ 2018-19 ನೇ ಸಾಲಿನ ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ‌ ಭೋಧಿಸಿ ಮಾತನಾಡಿದರು.

ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಕೆ.ಸೇಸಪ್ಪ ಕೋಟ್ಯಾನ್ ದೀಪ ಬೆಳಗುವುದರ ಮೂಲಕ‌ ಸಮಾರಂಭ ಉದ್ಘಾಟಿಸಿದರು. ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷ ಲೋಕೇಶ್ ಅಲೆತ್ತೂರು ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಸಲಹೆಗಾರರಾದ ಬಿ.ತಮ್ಮಯ, ಅಣ್ಣು ಪೂಜಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. 2018-19 ನೇ ಸಾಲಿನ ಅಧ್ಯಕ್ಷರಾಗಿ ಶಿವಾನಂದ ಎಮ್ ನೇತ್ರತ್ವದಲ್ಲಿ ತಂಡವು ಪ್ರತಿಜ್ಞಾವಿಧಿ ಸ್ವೀಕರಿಸಿದರು.

ಮಾಜಿ ಅಧ್ಯಕ್ಷ ಪ್ರೇಮನಾಥ್ ಕೆ. ಪ್ರಸ್ತಾವನೆ ಮಾಡಿದರು, ನಿಕಟಪೂರ್ವ ಅಧ್ಯಕ್ಷ ಅರುಣ್ ಕುಮಾರ್ ನೂತನ ಪದಾಧಿಕಾರಿಗಳನ್ನು ಸಭೆಗೆ ಪರಿಚಯಿಸಿದರು, ಕಾರ್ಯದರ್ಶಿ ದಿನೇಶ್ ಸುವರ್ಣ ರಾಯಿ 2017-18 ನೇ ಸಾಲಿನ ವಾರ್ಷಿಕ ವರದಿ ಮಂಡಿಸಿದರು, ಉಪನ್ಯಾಸಕ ಚೇತನ್ ಎಮ್ ಹಾಗೂ ಬಿ.ಶ್ರೀಧರ ಅಮೀನ್ ಕಾರ್ಯಕ್ರಮ ನಿರೂಪಿಸಿದರು.

3 thoughts on “ಯುವವಾಹಿನಿ ಬಂಟ್ವಾಳ ಘಟಕದ ಸಾಧನೆ ಶ್ಲಾಘನೀಯ : ಮರೋಳಿ

  1. ಯುವವಾಹಿನಿಯ ಬಂಟ್ವಾಳ ಘಟಕದ ನೂತನ ಅಧ್ಯಕ್ಷರು ಮತ್ತು ಪದಾದಿಕಾರಿಗಳೆಲ್ಲರಿಗೂ ಹೃತ್ಪೂರ್ವಕ ಅಭಿನಂದನೆಗಳು. ನಿಮ್ಮ ಅವಧಿಯಲ್ಲಿ ಇನ್ನೂ ಹೆಚ್ಚಿನ ಸಮಾಜಮುಖಿ ಕೆಲಸಗಳು ನಡೆಯುವಂತಾಗಲಿ ಎಂಬುದಾಗಿ ಹಾರೈಕೆ.

Leave a Reply to Narayana Amin Cancel reply

Your email address will not be published. Required fields are marked *

error: Content is protected !!