ಯುವವಾಹಿನಿ(ರಿ) ಬಂಟ್ವಾಳ ತಾಲೂಕು ಘಟಕ

ಯುವವಾಹಿನಿ ಭವನ ಉದ್ಘಾಟನೆ

ಬಂಟ್ವಾಳ: ಸಂಘಟನೆಯ ಬೆಳವಣಿಗೆಯಿಂದ ಸಾಮಾಜಿಕ ಜಾಗೃತಿ ಉಂಟಾಗುತ್ತದೆ. ನಿಸ್ವಾರ್ಥ ಮನೋಭಾವದ ಸಮಾಜ ಸೇವಕರು ಸಂಘಟಿತರಾದಾಗ ಸಾಮಾಜಿಕ, ಧಾರ್ಮಿಕ, ರಾಜಕೀಯ ಮಾತ್ರವಲ್ಲ ಆಧ್ಯಾತ್ಮಿಕ ಭಾವನೆಗಳು ಜಾಗೃತಗೊಳ್ಳುತ್ತದೆ. ಬಂಟ್ವಾಳ ತಾಲೂಕಿನ ಕೇಂದ್ರಸ್ಥಾನ ಬಿ.ಸಿ.ರೋಡಿನಲ್ಲಿ ಯುವವಾಹಿನಿಯ ಕಛೇರಿ ಯುವವಾಹಿನಿ ಭವನ ನಿರ್ಮಾಣವಾಗಿ ಸಂಘಟನೆಯು ಇನ್ನಷ್ಟು ಬಲಿಷ್ಠಗೊಂಡಿರುವುದು ಶ್ಲಾಘನೀಯ ಎಂದು ದ.ಕ.ಜಿಲ್ಲಾ ಮೂರ್ತೆದಾರರ ಮಹಾ ಮಂಡಲದ ಅಧ್ಯಕ್ಷರಾದ ಕೆ. ಸಂಜೀವ ಪೂಜಾರಿ ತಿಳಿಸಿದರು.

ಅವರು ದಿನಾಂಕ 21-6-2015 ರಂದು ಬಿ.ಸಿ.ರೋಡಿನಲ್ಲಿ ನೂತನವಾಗಿ ನಿರ್ಮಾಣವಾದ ಯುವವಾಹಿನಿಯು ಬಂಟ್ವಾಳ ತಾಲೂಕು ಘಟಕದ ಕಛೇರಿ ಯುವವಾಹಿನಿ ಭವನದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.

ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಸೇಸಪ್ಪ ಕೋಟ್ಯಾನ್ ಯುವವಾಹಿನಿ ಭವನವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.

ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದ ಕೋಶಾಧಿಕಾರಿ ಶ್ರೀ ಪದ್ಮರಾಜ್, ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಶ್ರೀ ಪ್ರೇಮನಾಥ್ ಕೆ. ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶುಭ ಹಾರೈಕೆ ಮಾಡಿದರು.  ಯುವವಾಹಿನಿ ಮಾಜಿ ಅಧ್ಯಕ್ಷರಾದ ಭುವನೇಶ್ ಪಚ್ಚಿನಡ್ಕರವರು ಯುವವಾಹಿನಿ ಭವನ ನಿರ್ಮಾಣಕ್ಕೆ ಸಹಕಾರ ನೀಡಿದ ಎಲ್ಲರನ್ನು ಅಭಿನಂದಿಸಿದರು. ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷರಾದ ರಾಜೇಶ್ ಸುವರ್ಣ ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಯುವವಾಹಿನಿ ಭವನ ನಿರ್ಮಾಣಕ್ಕೆ ಸ್ಥಳಾವಕಾಶ ಒದಗಿಸಿದ ಯುವವಾಹಿನಿಯ ಮಾಜಿ ಅಧ್ಯಕ್ಷರಾದ ಶ್ರೀ ರಾಜೇಶ ಬಿ. ದಂಪತಿಗಳನ್ನು ಅಭಿನಂದಿಸಲಾಯಿತು.

ಇತ್ತೀಚೆಗೆ ನಡೆದ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ವಿಜೇತರಾದ ಯುವವಾಹಿನಿಯ ಸದಸ್ಯರಾದ ಶ್ರೀಮತಿ ಬಬಿತಾ ಕೋಟ್ಯಾನ್, ಶ್ರೀ ಯೋಗಿಶ್ ಸುವರ್ಣ, ಶ್ರೀಮತಿ ಜಯಶ್ರೀ ಕರ್ಕೆರಾ, ಶ್ರೀ ಸುನಿಲ್ ಕುಮಾರ್ ಕಾಯರ್‌ಮಾರ್ ಹಾಗೂ ಬಂಟ್ವಾಳ ಪುರಸಭೆಯ ನಾಮನಿರ್ದೇಶಿತ ಸದಸ್ಯರಾದ ಲೋಕೇಶ್ ಸುವರ್ಣರನ್ನು ಅಭಿನಂದಿಸಲಾಯಿತು. ಯುವಾಹಿನಿಯ ಮಾಜಿ ಅಧ್ಯಕ್ಷರಾದ ತಾರಾನಾಥ ಕೆ. ಸನ್ಮಾನಿತರನ್ನು ಪರಿಚಯಿಸಿದರು.

ಯುವವಾಹಿನಿ ಬಂಟ್ವಾಳದ ಮಾಜಿ ಅಧ್ಯಕ್ಷರಾದ ಬಿ. ಶ್ರೀಧರ ಅಮೀನ್ ಪ್ರಸ್ತಾವನೆ ಮಾಡಿದರು. ಮಾಜಿ ಅಧ್ಯಕ್ಷರಾದ ಹರೀಶ್ ಎಸ್. ಕೋಟ್ಯಾನ್ ಸ್ವಾಗತಿಸಿದರು. ಕಾರ್ಯದರ್ಶಿ ಕು| ಸುಲತಾ ವಂದಿಸಿದರು. ಯುವವಾಹಿನಿ ಸಂಘಟನಾ ಕಾರ್ಯದರ್ಶಿ ದಿನೇಶ್ ಕೆ. ಸುವರ್ಣ ರಾಯಿ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!