ಮಂಗಳೂರು : ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಜರುಗಿತು.
ಈ ಸಂದರ್ಭದಲ್ಲಿ ಹಲವು ವಿಭಾಗದಲ್ಲಿ ಸಾಧನೆ ಮಾಡಿದ ಸಾಧಕರು ಹಾಗೂ ಸಂಘ, ಸಂಸ್ಥೆಗಳಿಗೆ ಗೌರವ ಅಭಿನಂದನೆ, ಯುವವಾಹಿನಿ ಸಾಧಕ ಪುರಸ್ಕಾರ, ಯುವ ಸಾಧನಾ ಪುರಸ್ಕಾರ, ಸಾಧನಾ ಶ್ರೀ ಪ್ರಶಸ್ತಿ, ಸಾಧನಾ ಶ್ರೇಷ್ಠ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಸಾಂಸ್ಕೃತಿಕ ರಂಗದ ರಾಯಭಾರಿಯಾಗಿ, ಸಾಹಿತ್ಯ ಸೇತುವಾಗಿ, ಅಪೂರ್ವ ಸಂಘಟಕರಾಗಿ ಅನನ್ಯ ಸೇವೆ ಸಲ್ಲಿಸಿದ ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್.ಬಿ.ಸುವರ್ಣ, ಜೇಸಿ ಎಂಬ ಸೇವಾ ಸಂಸ್ಥೆಯ ಮೂಲಕ ಆಸರೆ ಇಲ್ಲದ ಕುಟುಂಬಕ್ಕೆ ಸೂರು ನಿರ್ಮಿಸಿಕೊಟ್ಟು ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ಬೊಗಸೆ ತುಂಬಾ ಕಾಣಿಕೆಯನ್ನಿತ್ತು, ಜೆಸಿಐ ಯಲ್ಲಿ ರಾಷ್ಟ್ರಮಣ್ಣನೆ ಪಡೆದ ಸಮಾಜ ಸೇವಕ ರವಿ ಕಕ್ಯಪದವು, ಸಮಾಜಿಕ ಸೇವೆಗೆ ಬದ್ದರಾಗಿ , ಆರೋಗ್ಯ ಸೇವೆಗೆ ಸಿದ್ದರಾಗಿ, ಸ್ವಚ್ಛ ಭಾರತದ ಪರಿಕಲ್ಪನೆಗೆ ನಿಜ ಅರ್ಥವ ತುಂಬಿ, ನಿರ್ಗತಿಕರಿಗೆ ಸೂರು ಒದಗಿಸಿ ಕೊಟ್ಟು ಸಾಮಾಜಿಕ ಪರಿವರ್ತನೆಗೆ ಪ್ರಮಾಣಿಕ ಪ್ರಯತ್ನ ನಡೆಸಿದ ಮಕ್ಕಳ ತಜ್ಞ ವೈದ್ಯರಾದ ಡಾ.ಮುರಳಿಕೃಷ್ಣ, ಹಲವು ರಾಷ್ಟ್ರಗಳು ಭಾಗವಹಿಸಿರುವ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ವೈಟ್ ಲಿಪ್ಟಿಂಗ್ ವಿಭಾಗದಲ್ಲಿ ಭಾರತಕ್ಕೆ ಬೆಳ್ಳಿ ಪದಕ ತಂದುಕೊಟ್ಟ ಅಂತರಾಷ್ಟ್ರೀಯ ಕ್ರೀಡಾಪಟು ಗುರುರಾಜ್ ಇವರುಗಳಿಗೆ 2018 ನೇ ಸಾಲಿನ ಯುವವಾಹಿನಿ ಯುವ ಸಾಧನಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖಾ ಸಚಿವರಾದ ಡಾ.ಜಯಮಾಲ , ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೋಟ ಶ್ರೀನಿವಾಸ್ ಪೂಜಾರಿ, ಮಂಗಳೂರು ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನ್ ಚಂದ್ರ ಡಿ.ಸುವರ್ಣ, ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿ ಅಧ್ಯಕ್ಷ ಎಚ್.ಎಸ್.ಸಾಯಿರಾಮ್, ಉದ್ಯಮಿ ದಿವಾಕರ್, ಖ್ಯಾತ ರಂಗಭೂಮಿ, ಚಲನಚಿತ್ರ ನಟ ಅರವಿಂದ ಬೋಳಾರ್, ಯುವವಾಹಿನಿ(ರಿ) ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿ, ಪ್ರಧಾನ ಕಾರ್ಯದರ್ಶಿ ರಾಜೇಶ್ ಸುವರ್ಣ, ಸಂಚಾಲಕ ನವೀನ್ ಚಂದ್ರ ಡಿ.ಸುವರ್ಣ, ನಿರ್ದೇಶಕ ಹರೀಶ್ ಕೆ.ಪೂಜಾರಿ ಹಾಗೂ ಯುವವಾಹಿನಿಯ 31 ಘಟಕಗಳ ಅಧ್ಯಕ್ಷರುಗಳು ಉಪಸ್ಥಿತರಿದ್ದರು.