ಕೊಣಾಜೆ : ಯುವವಾಹಿನಿ (ರಿ) ಗ್ರಾಮಚಾವಡಿ ಕೊಣಾಜೆ ಘಟಕದ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ) ಗ್ರಾಮಚಾವಡಿ ಕೊಣಾಜೆ ಇಲ್ಲಿಯ ಸಮುದಾಯ ಭವನದಲ್ಲಿ ಮುದ್ದು ಮಕ್ಕಳೊಂದಿಗೆ ಒಂದು ಸಂಜೆ ಕಾರ್ಯಕ್ರಮವನ್ನು ಆಚರಿಸಲಾಯಿತು.
ಘಟಕದ ಅಧ್ಯಕ್ಷರಾದ ಹರೀಶ್ ಪೂಜಾರಿ ಕೊಣಾಜೆ ಅಧ್ಯಕ್ಷತೆ ವಹಿಸಿದ್ದರು.
ಯೆನಪೋಯಾ ವೈದ್ಯಕೀಯ ಕಾಲೇಜು M.B.B.S ವಿದ್ಯಾರ್ಥಿನಿ ಕು! ಶ್ರಾವ್ಯಶ್ರೀ ಕೊಣಾಜೆ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಸೂರ್ಯಕಾಂತಿ ಚಾರಿಟೇಬಲ್ ಟ್ರಸ್ಟ್ ಇದರ ಅಧ್ಯಕ್ಷರಾದ ಶ್ರೀಮತಿ ವಿದ್ಯಾ ರಾಕೇಶ್, ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಅಧ್ಯಕ್ಷರಾದ ಶ್ರೀ ರವೀಂದ್ರ ಬಂಗೇರ ಕೊಣಾಜೆ ಮುಖ್ಯ ಅತಿಥಿಗಳಾಗಿದ್ದರು.
ಕಾರ್ಯಕ್ರಮದ ಸಂಯೋಜಕಿ ಶ್ರೀಮತಿ ಅನಿತಾ ಹರೇಕಳ ಅತಿಥಿಗಳನ್ನು ಸ್ವಾಗತಿಸಿದರು.
ಶ್ರೀಮತಿ ಸೌಮ್ಯ ಮನೋಜ್ ವಂದಿಸಿದರು.
ಕು. ಅಭಿಜ್ಞಾ ಕಾರ್ಯಕ್ರಮ ನಿರೂಪಿಸಿದರು.