ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು.
ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ ಕದ್ರಿ (ರಿ) ಇದರ ಅಧ್ಯಕ್ಷರಾದ ಶ್ರೀಮತಿ ಜಯಲಕ್ಷ್ಮಿ ಬಿ ಆರ್ ನಾರಾಯಣ ಗುರುಗಳ ಭಾವಚಿತ್ರಕ್ಕೆ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಶ್ರೀಮತಿ ಜಯಲಕ್ಷ್ಮಿ ಬಿ ಆರ್ ಮಹಿಳೆ ಒಂದು ಶಕ್ತಿ ಸ್ವರೂಪಿಣಿ ಪ್ರತಿಯೊಬ್ಬ ಸಾಧಕರ ಹಿಂದೆ ಮಹಿಳೆಯ ಪಾತ್ರ ಇದ್ದೇ ಇರುತ್ತದೆ ಸಮಾಜದಲ್ಲಿ ಪುರುಷ ಮತ್ತು ಮಹಿಳೆ ಸಮಾನರಾಗಿದ್ದು ಇಬ್ಬರನ್ನು ಒಂದೇ ರೀತಿ ಗೌರವಿಸುವ ಅಗತ್ಯವಿದೆ ಎಂದರು.
ಅಧ್ಯಕ್ಷತೆಯನ್ನು ವಹಿಸಿದ್ದ ಯುವವಾಹಿನಿ (ರಿ) ಮಂಗಳೂರು ಘಟಕದ ಅಧ್ಯಕ್ಷರಾದ ಶ್ರೀ ಅಶೋಕ್ ಅಂಚನ್ ಕೋಡಿಕಲ್ ಮಹಿಳಾ ದಿನಾಚರಣೆಯ ಶುಭ ಕೋರುತ್ತ ಮಾತನಾಡಿ ಪುರುಷ ಸದಸ್ಯರು ಮಾತ್ರ ಇದ್ದ ಮಂಗಳೂರು ಘಟಕದಲ್ಲಿ ಇಂದು ಮಹಿಳಾ ಸದಸ್ಯರನ್ನು ಸೇರ್ಪಡೆಗೊಳಿಸುವುದರ ಮೂಲಕ ಕಳೆದ ಎರಡು ವರ್ಷಗಳಿಂದ ಮಹಿಳಾ ದಿನಾಚರಣೆಯನ್ನು ಆಚರಿಸುತ್ತಾ ಬಂದಿದ್ದೇವೆ ಎಂದರು.
ಈ ಸಂದರ್ಭ ಕಾರ್ಯಕ್ರಮದ ಉದ್ಘಾಟಕರಾದ ಶ್ರೀಮತಿ ಜಯಲಕ್ಷ್ಮಿ ಬಿ ಆರ್ ಇವರ ಸಮಾಜಮುಖಿ ಸಾಧನೆಗಾಗಿ ಸನ್ಮಾನಿಸಲಾಯಿತು ಹಾಗೂ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಎಲ್ಲಾ ಮಹಿಳಾ ಸದಸ್ಯರನ್ನು ಮಹಿಳಾ ದಿನಾಚರಣೆ ಅಂಗವಾಗಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಘಟಕದ ಮಾಜಿ ಅಧ್ಯಕ್ಷರು ಹಾಗೂ ಹೆಚ್ಚಿನ ಸದಸ್ಯರು ಭಾಗವಹಿಸಿದ್ದರು. ಶ್ರೀಮತಿ ಜಯಂತಿ ಕೋಟ್ಯಾನ್ ಪ್ರಾರ್ಥನೆ ಗೀತೆ ಹಾಡಿದರು.
ಮಹಿಳಾ ಸಂಘಟನಾ ನಿರ್ದೇಶಕರಾದ ಶ್ರೀಮತಿ ಪೂರ್ಣಿಮಾ ಯು ಆರ್ ಸ್ವಾಗತಿಸಿದರು. ಕಾರ್ಯದರ್ಶಿ ಯಶವಂತ್ ಪೂಜಾರಿ ಉಳಾಯಿಬೆಟ್ಟು ಧನ್ಯವಾದ ಅರ್ಪಿಸಿದರು. ಘಟಕದ ನಿಕಟ ಪೂರ್ವ ಅಧ್ಯಕ್ಷರಾದ ಶ್ರೀ ನಾಗೇಶ್ ಅಮೀನ್ ಕಾರ್ಯಕ್ರಮ ನಿರೂಪಿಸಿದರು.