ಆಗಸ್ಟ್ 9, 2015 ರಂದು ಮೆಲ್ಕಾರ್ ಬಿರ್ವ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 28ನೇ ವಾರ್ಷಿಕ ಸಮಾವೇಶದಲ್ಲಿ ಬಿಲ್ಲವರ ಮಹಾ ಮಂಡಲದ ಅಧ್ಯಕ್ಷರಾದ ಜಯ ಸಿ. ಸುವರ್ಣರ ಸಾಮಾಜಿಕ ಕ್ಷೇತ್ರದ ಸಾಧನೆಯನ್ನು ಗುರುತಿಸಿ ಯುವವಾಹಿನಿ ಸಾಧನಾ ಶ್ರೇಷ್ಠ ಪ್ರಶಸ್ತಿ-2015 ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಕೆ. ಸೇಸಪ್ಪ ಕೋಟ್ಯಾನ್, ಮುಂಬಯಿ ಬಿಲ್ಲವರ ಅಸೋಸಿಯೇಶನ್ ಅಧ್ಯಕ್ಷರಾದ ನಿತ್ಯಾನಂದ ಡಿ. ಕೊಟ್ಯಾನ್, ದ.ಕ.ಜಿಲ್ಲಾ ಮೂರ್ತೆದಾರರ ಮಹಾ ಮಂಡಲದ ಅಧ್ಯಕ್ಷರಾದ ಕೆ.ಸಂಜೀವ ಪೂಜಾರಿ, ಆಳ್ವಾಸ್ ಕಾಲೇಜಿನ ಸಮಾಜ ಕಾರ್ಯ ವಿಭಾಗದ ಪ್ರೊ| ಮಧುಮಾಲ ಕೆ., ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಮಿತಿಯ ಅಧ್ಯಕ್ಷೆ ಮಾಲತಿ ಎಸ್. ಪೂಜಾರಿ, ಕೇಂದ್ರ ಸಮಿತಿಯ ಅಧ್ಯಕ್ಷ ಪ್ರೇಮನಾಥ ಕೆ., ಸಮಾವೇಶ ನಿರ್ದೇಶಕ ರಾಜೇಶ್ ಸುವರ್ಣ, ಗೌರವ ಪ್ರಧಾನ ಕಾರ್ಯದರ್ಶಿ ಮೋಹನ್ ಪೆಜಕ್ಕಳ ಹಾಗೂ ಸಮಾವೇಶ ಸಂಚಾಲಕ ತಾರಾನಾಥ್ ಕೆ. ಉಪಸ್ಥಿತರಿದ್ದರು.