ಯುವವಾಹಿನಿ(ರಿ) ಕೇಂದ್ರ ಸಮಿತಿ * ಯುವವಾಹಿನಿ (ರಿ) ಉಡುಪಿ ಘಟಕ

ರಮ್ಯಾ ಸುಜೀರ್ ಇವರಿಗೆ ಯುವವಾಹಿನಿ ಯುವ ಸಾಹಿತ್ಯ ಪುರಸ್ಕಾರ – 2016

ಬಂಟ್ವಾಳ ತಾಲೂಕಿನ ಪುದು ಗ್ರಾಮದ ಸುಜೀರು ದೈಯಡ್ಕ ಮನೆ, ತಿಮ್ಮಪ್ಪ ಪೂಜಾರಿ ಹಾಗೂ ಶ್ರೀಮತಿ ಪುಷ್ಪಾರವರ ಸುಪುತ್ರಿಯಾದ ರಮ್ಯ ಸುಜೀರ್‌ರವರು ತನ್ನ ವಿದ್ಯಾಭ್ಯಾಸದ ಜೊತೆಯಲ್ಲಿಯೇ ಸಾಹಿತ್ಯದ ಬಗ್ಗೆ ಆಸಕ್ತಿ ಹೊಂದಿದವರು. ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕನ್ನಡದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿರುತ್ತಾರೆ. ತುಳು ಅಧ್ಯಯನ ವನ್ನು ಐಚ್ಛಿಕ ವಿಷಯವಾಗಿ ತೆಗೆದುಕೊಂಡಿದ್ದಾರೆ. ಸಂತ ಅಲೋಶಿಯಸ್ ಕಾಲೇಜಿನಲ್ಲಿ ಬಿ.ಎ. ಬಿ.ಎಡ್. ಪದವಿಯನ್ನು ಪಡೆದಿರುತ್ತಾರೆ.

ಸೈಂಟ್ ಜೋನ್ಸ್ ಪದವಿ ಪೂರ್ವ ಕಾಲೇಜು ಗಂಡಸಿ ಹಾಸನ ಇಲ್ಲಿ 1 ವರ್ಷ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸಿರುತ್ತಾರೆ.

ಸೈಂಟ್ ಆನ್ಸ್ ಆಂಗ್ಲಮಾಧ್ಯಮ ಪ್ರೌಢಶಾಲೆ ಇಲ್ಲಿ 3 ವರ್ಷಗಳ ಕಾಲ ಸೇವೆ ಸಲ್ಲಿಸಿ, ಪ್ರಸ್ತುತ 2 ವರ್ಷಗಳಿಂದ ಸೈಂಟ್ ಆಗ್ನೇಸ್ ಆಂಗ್ಲಮಾಧ್ಯಮ (ಸಿಬಿಎಸ್‌ಇ) ಶಾಲೆಯಲ್ಲಿ ಕನ್ನಡ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಶ್ರೀಕ್ಷೇತ್ರ ಮಂದಾರಬೈಲು ಕೊಂಚಾಡಿ ದೇರೆಬೈಲು ಇಲ್ಲಿ ನಡೆದ ’ಜಿಲ್ಲಾ ಚುಟುಕು ಸಾಹಿತ್ಯ ಸಮ್ಮೇಳನ-2012’ರಲ್ಲಿ ಇವರ ’ಭಾವಬಿಂಭ’ (ಕನ್ನಡ) ಕವನ ಸಂಕಲನ ಬಿಡುಗಡೆಯಾಗಿದೆ.

ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜು ಅಡ್ಯಾರ್ ಇಲ್ಲಿ ನಡೆದ ವಿಶ್ವ ತುಳುವೆರೆ ಪರ್ಬ-2014ರಲ್ಲಿ ಡಾ| ವೀರೇಂದ್ರ ಹೆಗ್ಗಡೆಯವರಿಂದ ಇವರ ತುಳು ಕವನ ಸಂಕಲನ ದಿಬ್ಬಣ ಬಿಡುಗಡೆ ಗೊಂಡಿದೆ. ಬೇಲಿಯ ಹೂ (ಕನ್ನಡ ಕವನ ಸಂಕಲನ) ಅಚ್ಚಿನಲ್ಲಿದೆ.

* ಅಖಿಲ ಭಾರತ ತುಳು ಒಕ್ಕೂಟ ಮತ್ತು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಆಶ್ರಯದಲ್ಲಿ ಸಹ್ಯಾದ್ರಿ ಕಾಲೇಜಿನಲ್ಲಿ ನಡೆದ ’ವಿಶ್ವ ತುಳುವೆರೆ ಪರ್ಬ-2014’ರಲ್ಲಿ ಕವನ ವಾಚನ.
* ದ.ಕ. ಜಿಲ್ಲಾ ಚುಟುಕು ಸಾಹಿತ್ಯ ಸಮ್ಮೇಳನದಲ್ಲಿ ಕವನವಾಚನ
* ಸರ್ವೋದಯ ಸಾಹಿತ್ಯ ಸಮ್ಮೇಳನ-೨೦೧೨ರಲ್ಲಿ ಕವನವಾಚನ
* ತಾಲೂಕು ಮಟ್ಟದ ತುಳು ಕವಿಗೋಷ್ಠಿ – ೨೦೧೬ರಲ್ಲಿ ಕವನವಾಚನ
* ಆಕಾಶವಾಣಿ ಮಂಗಳೂರು ಇದರ ’ತುಳು ಯುವವಾಣಿ’ಯಲ್ಲಿ ಕವನವಾಚನ
* ಅಂತರ್ ರಾಜ್ಯಮಟ್ಟದ ಕವಿಗೋಷ್ಠಿಗೆ ಆಯ್ಕೆ ಇವು ಅವರ ಪ್ರತಿಭೆಯ ದ್ಯೋತಕಗಳು.

ರಮ್ಯ ಸುಜೀರ್‌ರವರ ಲೇಖನಿಯಿಂದ ಪ್ರಕಟಗೊಂಡ ಲೇಖನಗಳು ’ಮಿತ್ತ ಮೊಗರಾಯನ ಚಾವಡಿ’ – ಸಂತ ಅಲೋಶಿಯಸ್ ಕಾಲೇಜಿನ ವಾರ್ಷಿಕ ಸಂಚಿಕೆ – 2007 ರಲ್ಲಿ ಪ್ರಕಟಿತವಾಗಿದೆ.

ನಿನ್ನ ನೆನಪಾಗುವುದು (ಕವನ) ವಿಜಯ ಕರ್ನಾಟಕದಲ್ಲಿ 2006  ಪ್ರಕಟವಾಗಿದೆ.

ಸ್ಪಂದನ ವಾಹಿನಿಯಲ್ಲಿ ಪ್ರತೀ ಆದಿತ್ಯವಾರ ಪ್ರಸಾರವಾಗುತ್ತಿದ್ದಂತಹ ತೆಲಿಕೆದ ಗಮ್ಮತ್ತ್ ಎಂಬ ಹಾಸ್ಯ ಕಾರ್ಯಕ್ರಮದಲ್ಲಿ ಹಾಸ್ಯನಟಿಯಾಗಿ ನಟಿಸಿದ ಅನುಭವ. ’ಗಾಳಿಗ್ ತೆಕ್ಕ್ಂಡಾ ತುಡರ್ ಎಂಬ ತುಳು ಕಿರು ಚಲನಚಿತ್ರಕ್ಕೆ ಕಂಠದಾನವನ್ನು ಮಾಡಿರುತ್ತಾರೆ.

ಶ್ರೀ ವೀರ ಹನುಮಾನ್ ದತ್ತನಗರ ಸುಜೀರು (ರಿ) ಇದರ, ಸಾಂಸ್ಕೃತಿಕ ಸಂಚಾಲಕಿಯಾಗಿ ಕಳೆದ 4 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಸಂಗೀತ ಗುರುಗಳಾದ ವಿದ್ವಾನ್ ಶ್ರೀಯುತ ಕೃಷ್ಣಾಚಾರ್ ನರಿಕೊಂಬು ಇವರ ಬಳಿಕ ನಾಟಕ ಶಾಸ್ತ್ರೀಯ ಸಂಗೀತ ಅಭ್ಯಾಸದ ಜೊತೆಗೆ ಸುಗಮ ಸಂಗೀತ ಕಾರ್‍ಯಕ್ರಮಗನ್ನು ನೀಡಿದ ಅನುಭವ. ಕು| ಯಶಸ್ವಿನಿ ಬಳ್ಳಾಲ್ ಇವರ ಬಳಿ ಜೂನಿಯರ್ ಕರ್ನಾಟಕ ಶಾಸ್ತ್ರೀಯ ಸಂಗೀತ ಮತ್ತು ಸುಗಮ ಸಂಗೀತದ ಅಭ್ಯಾಸ ಮಾಡಿ ಕಾರ್ಯಕ್ರಮ ನೀಡಿರುತ್ತಾರೆ.

ಕರಾವಳಿ ಕರ್ನಾಟಕ ನಂ.1 ರಿಯಾಲಿಟಿ ಶೋ ಬಲೆ ತೆಲಿಪಾಲೆಯಲ್ಲಿ ಟ್ಯಾಲೆಂಟ್ ಅವಾರ್ಡ್ ಪಡೆದಂತಹ ಪ್ರವೀಣ್ ತುಕರಾಮ್ ಇವರ ತಂಡದಲ್ಲಿ ಹಿನ್ನಲೆ ಗಾಯನ ಮತ್ತು ಸಾಹಿತ್ಯ, ನಿರೂಪಕಿಯಾಗಿ ಕಾರ್ಯ ನಿರ್ವಹಿಸಿರುತ್ತಾರೆ. ಹಲವಾರು ನೃತ್ಯ ಮತ್ತು ಸಂಗೀತ ಸ್ಪರ್ಧಾ ಕಾರ್ಯಕ್ರಮಗಳಲ್ಲಿ ನಿರ್ಣಾಯಕರಾಗಿ, ನಿರೂಪಕಿಯಾಗಿ ಕಾರ್ಯಕ್ರಮಗಳನ್ನು ನಿರ್ವಹಿಸಿರುತ್ತಾರೆ. ಇವರಿಗೆ ಈ ಬಾರಿಯ ಪ್ರಭಾಕರ ನೀರ್‌ಮಾರ್ಗ ಯುವವಾಹಿನಿ ಯುವಸಾಹಿತ್ಯ ಪ್ರಶಸ್ತಿ ನೀಡಿ ಅಭಿನಂದಿಸಲು ಯುವವಾಹಿನಿ ಹೆಮ್ಮೆ ಪಡುತ್ತದೆ.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 14-12-2024
ಸ್ಥಳ :

ಯುವವಾಹಿನಿ (ರಿ.) ಪುತ್ತೂರು ಘಟಕ

ದಿನಾಂಕ : 15-12-2024
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ (ರಿ) ಕುಳಾಯಿ

ಯುವವಾಹಿನಿ (ರಿ.) ಪಣಂಬೂರು - ಕುಳಾಯಿ ಘಟಕ

ದಿನಾಂಕ : 11-12-2024
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಶಿವಗಿರಿ, ಪೊನ್ನೊಟ್ಟು ವಿಟ್ಲ.

ಯುವವಾಹಿನಿ (ರಿ) ವಿಟ್ಲ ಘಟಕ

ದಿನಾಂಕ : 20-12-2024
ಸ್ಥಳ : ಮೂಡುಬಿದಿರೆ

37ನೇ ವಾರ್ಷಿಕ ಸಮಾವೇಶ

ದಿನಾಂಕ : 07-12-2024
ಸ್ಥಳ : ಕೂಳೂರು ಪಂಪ್‌ ಹೌಸ್ ಬಳಿ

ವಿದ್ಯಾನಿಧಿಯ ಸಹಾಯಾರ್ಥವಾಗಿ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
error: Content is protected !!