ಉಡುಪಿ : ಯುವವಾಹಿನಿ (ರಿ) ಉಡುಪಿ ಘಟಕದ ವತಿಯಿಂದ ವಿದ್ಯಾನಿಧಿ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಘಟಕದ ಸಭಾಂಗಣದಲ್ಲಿ ಘಟಕದ ಅಧ್ಯಕ್ಷರು ಶ್ರೀಮತಿ ಅಮಿತಾಂಜಲಿ ಕಿರಣ್ ರವರ ಅಧ್ಯಕ್ಷತೆಯಲ್ಲಿ ದಿನಾಂಕ 29-09-2024 ರಂದು ಜರಗಿತು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕಾರ್ಕಳ ಭುವನೇಂದ್ರ ಕಾಲೇಜಿನ ಉಪನ್ಯಾಸಕರು ಶ್ರೀಮತಿ ಸುಲೋಚನಾ ಪಚ್ಚಿನಡ್ಕ ಇವರು ಮಾತನಾಡಿ ವಿದ್ಯಾರ್ಥಿಗಳಿಗೆ ಒಳ್ಳೆಯ ವಿದ್ಯಾಭ್ಯಾಸ ಕಲಿತು ಸಮಾಜದಲ್ಲಿ ಉನ್ನತ ಸ್ಥಾನ ಪಡೆದು ಮುಂದಿನ ದಿನಗಳಲ್ಲಿ ಸಂಘಟನೆಗಳೊಂದಿಗೆ ಬೆರೆತು ಸಮಾಜಮುಖಿ ಕೆಲಸ ಮಾಡುವಂತೆ ಸಲಹೆ ನೀಡಿದರು.
ಹನ್ನೊಂದು ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ವಿತರಣೆ ಮಾಡಲಾಯಿತು.
ಪ್ರತಿಭಾವಂತ ವಿದ್ಯಾರ್ಥಿಗಳಾದ ಹಸ್ಮಿತಾ ಡಿ ಅಮೀನ್, ಕುಮಾರಿ ಮಾನ್ಯ, ತ್ರಿಷ್ಣ ಡಿ ಪೂಜಾರಿ, ಕುಮಾರಿ ಶ್ರವ್ಯಾ ಇವರನ್ನು ಗುರುತಿಸಿ ಸನ್ಮಾನಿಸಲಾಯಿತು. ದಾನಿಗಳಾದ ಶ್ರೀ ಸುರೇಂದ್ರ ಕೋಟ್ಯಾನ್ ಹಾಗೂ ಶ್ರೀ ವಿಠ್ಠಲ್ ಪೂಜಾರಿ ಇವರನ್ನು ಗುರುತಿಸಿ ಗೌರವಿಸಲಾಯಿತು.
ಶ್ರೀಯುತ ಅಮಿತ್ ಮಟ್ಟು ಇವರು ಸುಮಾರು 58 ಕೆಜಿ ನಟ್ ಬಳಸಿ ಆದಿಯೋಗಿ ಶಿವನ ಪ್ರತಿಮೆ ರಚಿಸಿ ಇಂಟರ್ರ್ನ್ಯಾಷನಲ್ ಬುಕ್ ಆಫ್ ರೆಕಾರ್ಡ್ ಮಾಡಿರುವ ಬಗ್ಗೆ ಅವರನ್ನು ಸನ್ಮಾನಿಸಲಾಯಿತು.
ಉಪಾಧ್ಯಕ್ಷರು ದಯಾನಂದ ಉಗ್ಗೇಲ್ ಬೆಟ್ಟು ಸ್ವಾಗತಿಸಿದರು. ಕಾರ್ಯಕ್ರಮದ ಸಂಚಾಲಕರು ಮಹಾಬಲ ಅಮೀನ್ ರವರು ಪ್ರಸ್ತಾವನೆ ಮಾಡಿ ಸಹಕರಿಸಿದ ಎಲ್ಲರಿಗೂ ವಂದನೆಗಳನ್ನು ತಿಳಿಸಿದರು.
ಕಾರ್ಯದರ್ಶಿ ಸುಪ್ರೀತ್ ಸುವರ್ಣ ಧನ್ಯವಾದಗಳನ್ನು ನೀಡಿದರು. ಗೌರವ ಸಲಹೆಗಾರರು ಶಂಕರ್ ಪೂಜಾರಿ ದ್ವಾರಕ, ಮಹಿಳಾ ಸಂಚಾಲಕರು ಕುಮಾರಿ ಶ್ರೀಲಕ್ಷ್ಮಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಘಟಕದ ಮಾಜಿ ಅಧ್ಯಕ್ಷರು, ಸದಸ್ಯರು ಹಾಗೂ ವಿದ್ಯಾರ್ಥಿಗಳ ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಘಟಕದ ಸದಸ್ಯರಾದ ಪ್ರಜ್ಞಾಶ್ರಿ ಹಾಗೂ ಮಹೇಶ್ ಮಲ್ಪೆ ಕಾರ್ಯಕ್ರಮವನ್ನು ನಿರೂಪಿಸಿದರು.