ಕೂಳೂರು :- ಯುವವಾಹಿನಿ ಕೂಳೂರು ಘಟಕದ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಮಹಿಳಾ ದಿನಾಚರಣೆ ಕಾರ್ಯಕ್ರಮವು ದಿನಾಂಕ 16-03-2022 ಬುಧವಾರದಂದು ಬ್ರಹ್ಮಶ್ರೀ ನಾರಾಯಣಗುರು ಸೇವಾ ಮಂದಿರ ಕೂಳೂರು ಇಲ್ಲಿ 7.00 ಗಂಟೆಗೆ ಸರಿಯಾಗಿ ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವ ಚಿತ್ರಕ್ಕೆ ದೀಪ ಬೆಳಗಿಸುವುದರೊಂದಿಗೆ ಆರಂಭವಾಯಿತು. ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ಉಪಮೇಯರ್ ಸುಮಂಗಲಾ ರಾವ್ ಕಾರ್ಯಕ್ರಮವನ್ನು ಉದ್ಘಾಟಿಸಿ ಹೆಣ್ಣು ಅಬಲೆಯಲ್ಲ ಸಬಲೆ ಮಹಿಳೆ ಕೇವಲ ಮನೆ ಕೆಲಸಕ್ಕೆ ಸೀಮಿತವಲ್ಲ ಆಕೆಯನ್ನು ಎಲ್ಲಾ ಕ್ಷೇತ್ರಗಳಲ್ಲೂ ಸರಿಸಮಾನವಾಗಿ ನೋಡಬೇಕು ಎಂದು ಹೇಳಿದರು.
ಮುಖ್ಯ ಅತಿಥಿಯಾಗಿ ಆಗಮಿಸಿದ ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಮಹಿಳಾ ಸಂಘಟನಾ ನಿರ್ದೇಶಕಿ ಸುಮಾ ವಸಂತ್ ಇವರು ಮಾತನಾಡಿ ಮಹಿಳಾ ದಿನಾಚರಣೆ ಕುರಿತು ಮಾಹಿತಿ ನೀಡಿದರು. 1975 ಮಾರ್ಚ್ 8 ರಿಂದ ವಿಶ್ವ ಮಹಿಳಾ ದಿನಾಚರಣೆ ಆಚರಿಸುತ್ತಾ ಇದ್ದೇವೆ. ಮಹಿಳೆಯರು ದೈಹಿಕವಾಗಿ ಬಲಾಢ್ಯರಲ್ಲದಿದ್ದರು ಮಾನಸಿಕವಾಗಿ ಬಲಾಢ್ಯರು ಎಂದು ಹೇಳಿದರು, ಎಪ್ರಿಲ್ 3ರಂದು ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಸಾರಥ್ಯದಲ್ಲಿ ಹೊಂಬೆಳಕು 2022 ಮಹಿಳಾ ಆರ್ಥಿಕ ಸ್ವಾವಲಂಬನೆಯತ್ತ ದಿಟ್ಟ ಹೆಜ್ಜೆ (ಬೃಹತ್ ವಸ್ತು ಪ್ರದರ್ಶನ ಹಾಗೂ ಮಾರಾಟ) ಕಾರ್ಯಕ್ರಮವು ಹೋಟೆಲ್ ವುಡ್ ಲ್ಯಾಂಡ್ಸ್ ಜ್ಯೋತಿ ಬಂಟ್ಸ್ ಹಾಸ್ಟೆಲ್ ಇಲ್ಲಿ ನಡೆಯಲಿದ್ದು ಎಲ್ಲರೂ ಭಾಗವಹಿಸಿ ಸಹಕರಿಸಬೇಕೆಂದು ಕೇಳಿಕೊಂಡರು. ಕಾರ್ಯಕ್ರಮದಲ್ಲಿ ಮಹಿಳಾ ಸಾಧಕಿ ರಾಧಿಕಾ ಸಿ ಎಸ್ ಇವರನ್ನು ಅಭಿನಂದಿಸಲಾಯಿತು. ಅಭಿನಂದನೆಯನ್ಮು ಸ್ವೀಕರಿಸಿದ ಇವರು ತನ್ನ ವೃತ್ತಿ ಜೀವನದ ಅನುಭವವನ್ನು ಹಂಚಿಕೊಂಡರು. ತನ್ನನ್ನು ಅಭಿನಂದಿಸಿದಕ್ಕೆ ಘಟಕಕ್ಕೆ ಧನ್ಯವಾದ ಸಲ್ಲಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಘಟಕದ ಅಧ್ಯಕ್ಷರಾದ ದೀಕ್ಷಿತ್ ಸಿ ಎಸ್ ಮಾತನಾಡಿ ಹೆಣ್ಣು ತಾಯಿಯಾಗಿ , ತಂಗಿಯಾಗಿ, ಅಕ್ಕನಾಗಿ, ಹೆಂಡತಿಯಾಗಿ, ಸ್ನೇಹಿತೆಯಾಗಿ ಪ್ರತಿಯೊಬ್ಬರ ಬದುಕಿನಲ್ಲೂ ಮುಖ್ಯವಾದ ಪಾತ್ರವನ್ನು ವಹಿಸುವಳು ಎಂದು ಹೆಣ್ಣಿನ ಮಹತ್ವದ ಬಗ್ಗೆ ತಿಳಿಸಿದರು. ಮಹಿಳಾ ದಿನಾಚರಣೆ ಅಂಗವಾಗಿ ಮಹಿಳೆಯರಿಗೆ ಏರ್ಪಡಿಸಿದ್ದ ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಅತಿಥಿಗಳಿಗೆ , ತೀರ್ಪುಗಾರರಿಗೆ , ಸಂಚಾಲಕರು ಮತ್ತು ಸಹಸಂಚಾಲಕರಿಗೆ ಅಧ್ಯಕ್ಷರು ನೆನಪಿನ ಕಾಣಿಕೆ ನೀಡಿ ಗೌರವಿಸಿದರು. ಕಾರ್ಯಕ್ರಮದಲ್ಲಿ ಮಹಿಳೆಯರಿಗಾಗಿ ಬೆಂಕಿ ರಹಿತ ಅಡುಗೆ ಸ್ಪರ್ಧೆ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಕೊನೆಗೆ ಸದಸ್ಯರು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ವೇದಿಕೆಯಲ್ಲಿ ಘಟಕದ ಕಾರ್ಯದರ್ಶಿ ಸುಮಾ ಶಿವು ಕೋಡಿಕಲ್, ಸಂಚಾಲಕರಾದ ಅನಿತಾ ತುಕಾರಾಮ್ ಉಪಸ್ಥಿತರಿದ್ದರು. ನಿಕಟ ಪೂರ್ವ ಅಧ್ಯಕ್ಷರಾದ ನಯನರಮೇಶ್ , ಮಾಜಿ ಅಧ್ಯಕ್ಷರಾದ ಪುಷ್ಪರಾಜ್ ಕುಮಾರ್, ಲೋಕೇಶ್ ಕೋಟ್ಯಾನ್, ಭಾಸ್ಕರ್ ಕೋಟ್ಯಾನ್, ಮಾರ್ಗದರ್ಶಕರಾದ ಗಿರಿಧರ್ ಸನಿಲ್, ಚಂದಪ್ಪ ಸನಿಲ್, ಕೇಂದ್ರ ಸಮಿತಿಯ ಸ್ಥಾಪಕ ಅಧ್ಯಕ್ಷರಾದ ಸಂಜೀವ್ ಪೂಜಾರಿ,ಹಾಗೂ ವಿವಿಧ ಘಟಕಗಳ ಅಧ್ಯಕ್ಷರು ,ಕಾರ್ಯದರ್ಶಿಗಳು , ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು. ಘಟಕದ ಸದಸ್ಯರಾದ ಪ್ರತೀಕ್ಷಾ, ಸ್ವಾತಿ, ಸುಶ್ಮಿತಾ ಪ್ರಾರ್ಥನೆ ಮಾಡಿದರು. ಘಟಕದ ಅಧ್ಯಕ್ಷರಾದ ದೀಕ್ಷಿತ್ ಸಿ ಎಸ್ ಸ್ವಾಗತಿಸಿದರು. ಸುಮಂಗಲಾ ಕಾರ್ಯಕ್ರಮವನ್ನು ನಿರೂಪಣೆ ಮಾಡಿದರು .ಸಂಚಾಲಕರಾದ ಅನಿತಾ ತುಕಾರಾಮ್ ವಂದಿಸಿದರು.