ಉಡುಪಿ : ಯುವವಾಹಿನಿ (ರಿ) ಉಡುಪಿ ಘಟಕದ ವತಿಯಿಂದ ಶಿಕ್ಷಕರ ದಿನಾಚರಣೆಯ 15-09-2024 ರಂದು ಉಡುಪಿಯಲ್ಲಿ ಜರುಗಿತು. ಮುಖ್ಯ ಅತಿಥಿ ಶಿಕ್ಷಣ ತಜ್ಞ ರವೀಂದ್ರ ಪೂಜಾರಿ ಅಡ್ವೆಯವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಆರಂಭಿಸಲಾಯಿತು.
ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ಹಾಗೂ ಸರ್ವೆಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದರು. ಘಟಕದ ಉಪಾಧ್ಯಕ್ಷರು ದಯಾನಂದ ಉಗ್ಗೆಲ್ಬೆಟ್ಟು ಪ್ರಾಸ್ತಾವಿಕ ಮಾತುಗಳೊಂದಿಗೆ ಎಲ್ಲರನ್ನು ಹಾರ್ದಿಕವಾಗಿ ಸ್ವಾಗತಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಅಡ್ವೆ ರವೀಂದ್ರ ಪೂಜಾರಿಯವರು “ವಿದ್ಯಾರ್ಥಿಗಳಲ್ಲಿ ಪ್ರತಿಭೆಗಳನ್ನು ಗುರುತಿಸಿ ಪಾಠ ಬೋಧನೆಯ ಜೊತೆಗೆ ಜೀವನ ಸಂಗತಿಗಳನ್ನು ಜೀವನ ಮೌಲ್ಯಗಳು ತಿಳಿಸಿ” ಎಂದು ಕರೆ ನೀಡಿದರು.
ವೇದಿಕೆಯಲ್ಲಿ ಉಪಸ್ಥಿತರಿದ್ದ ಘಟಕದ ಮಾಜಿ ಅಧ್ಯಕ್ಷರು ಹಾಗೂ ಕೇಂದ್ರ ಸಮಿತಿ ಮಾಜಿ ಅಧ್ಯಕ್ಷರು ರವಿರಾಜ್ ತನ್ನ ಹತ್ತು ವರ್ಷಕ್ಕೂ ಮಿಕ್ಕಿದ ಉಪನ್ಯಾಸ ವೃತ್ತಿಯ ದಿನಗಳ ನೆನಪನ್ನು ಮೆಲುಕು ಹಾಕಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಬೇರೆ ಬೇರೆ ಕ್ಷೇತ್ರದಲ್ಲಿ ಶಿಕ್ಷಕ ವೃತ್ತಿಯನ್ನು ನಡೆಸುತ್ತಿರುವ ಘಟಕದ ಸದಸ್ಯರನ್ನು ಹೂ ಹಾಗೂ ಪುಸ್ತಕ ನೀಡಿ ಗೌರವಿಸಲಾಯಿತು.
ಘಟಕದ ಅಧ್ಯಕ್ಷರು ಅಮಿತಾಂಜಲಿ ಅಧ್ಯಕ್ಷೀಯ ಮಾತುಗಳನ್ನಾಡಿದರು. ಧನ್ಯವಾದಗಳೊಂದಿಗೆ ಕಾರ್ಯಕ್ರಮದ ಮುಕ್ತಾಯಗೊಂಡಿತು.