ಬಂಟ್ವಾಳ : ವಿದ್ಯೆಯು ಚೋರರಿಂದ ಅಪಹರಿಸಲ್ಪಡುವಂತದ್ದಲ್ಲ, ರಾಜನಿಂದ ಗೆದ್ದುಕೊಳ್ಳಲು ಸಾಧ್ಯವಾಗುವಂತದ್ದಲ್ಲ, ಹಂಚಿದಷ್ಟು ವೃದ್ದಿಯಾಗುವುದೇ ವಿದ್ಯೆ, ವಿದ್ಯಾದಾನ ಶ್ರೇಷ್ಠ ದಾನ, ಶಿಕ್ಷಣವು ಶಿಕ್ಷೆಯಾಗಬಾರದು, ತಪಸ್ಸಾಗಬೇಕು ಶಿಕ್ಷಣವು ಆನಂದದ ಕಲಿಕೆಯಾಗಬೇಕು. ಜ್ಞಾನಾರ್ಜನೆಯೊಂದಿಗೆ ಅನ್ವೇಷಣಾದಂತಹ ಕಾರ್ಯಾಗಾರಗಳು ವಿದ್ಯಾರ್ಥಿಗಳ ಉತ್ತಮ ಭವಿಷ್ಯ ರೂಪಿಸಲು ಸಹಕಾರಿಯಾಗಿದೆ ಎಂದು ಬಂಟ್ವಾಳ ರೋಟರಿ ಕ್ಲಬ್ ನ ಮಾಜಿ ಅಧ್ಯಕ್ಷ ಸಂಜೀವ ಪೂಜಾರಿ ಗುರುಕೃಪಾ ತಿಳಿಸಿದರು.
ಅವರು ದಿನಾಂಕ 25.12.2018 ರಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಮೆಲ್ಕಾರ್ ಬಿರ್ವ ಆಡಿಟೋರಿಯಂ ನಲ್ಲಿ ಕಾಲೇಜು ವಿದ್ಯಾರ್ಥಿಗಳಿಗಾಗಿ ಜರುಗಿದ ಶೈಕ್ಷಣಿಕ, ವೃತ್ತಿಮಾರ್ಗದರ್ಶನ ಹಾಗೂ ಪುನರ್ಮನನ ರಾಷ್ಟ್ರೀಯ ಕಾರ್ಯಾಗಾರ ಅನ್ವೇಷಣಾ 2018 ನ್ನು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು.
ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷ ಶಿವಾನಂದ ಎಮ್ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಬಂಟ್ವಾಳ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ. ಯಶವಂತ ದೇರಾಜೆ, ಶಂಬೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪುರುಷೋತ್ತಮ ಸಾಲ್ಯಾನ್, ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಮಿತಿಯ ಅಧ್ಯಕ್ಷೆ ಜಯಲಕ್ಷ್ಮಿ ಭುವನೇಶ್, ವಾತ್ಸಿ ರೆಸಿಡೆನ್ಸಿ ಮಾಲಕ ರಾಜೇಶ್ ಸುವರ್ಣ, ಯುವವಾಹಿನಿ ಬಂಟ್ವಾಳ ಘಟಕದ ಸಲಹೆಗಾರ ಬಿ.ತಮ್ಮಯ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ರಾಜೇಶ್ ಸುವರ್ಣ ಪ್ರಸ್ತಾವನೆ ಮಾಡಿದರು, ಅನ್ವೇಷಣಾ ಸಂಚಾಲಕ ಶಿವಪ್ರಸಾದ್ ಸ್ವಾಗತಿಸಿದರು, ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ಪ್ರೇಮನಾಥ್ ಧನ್ಯವಾದ ನೀಡಿದರು, ಉಪನ್ಯಾಸಕ ಚೇತನ್ ಮುಂಡಾಜೆ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಾಗಾರ :
ವ್ಯಕ್ತಿತ್ವ ವಿಕಸನದ ಬಗ್ಗೆ ರಾಜೇಂದ್ರ ಭಟ್, ವೃತ್ತಿ ಮಾರ್ಗದರ್ಶನ ದ ಬಗ್ಗೆ ಅರವಿಂದ ಚೊಕ್ಕಾಡಿ ಹಾಗೂ ವಿದ್ಯೆ ಕೌಶಲ ಮತ್ತು ಉದ್ಯೋಗ ದ ಬಗ್ಗೆ ಅಭಿಜಿತ್ ಕರ್ಕೇರ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಕಾರ್ಯಾಗಾರ ನಡೆಸಿಕೊಟ್ಟರು
ಸಮಾರೋಪ ಸಮಾರಂಭ
ವಿಶ್ವವಿದ್ಯಾಲಯದ ಪರೀಕ್ಷೆಗಳಿಗಿಂತ ಜೀವನ ಪರೀಕ್ಷೆ ಅತೀ ಮುಖ್ಯವಾದುದು, ಈ ಪರೀಕ್ಷೆಯಲ್ಲಿ ಯಶಸ್ವೀಯಾಗುವುದರ ಮೂಲಕ ವಿದ್ಯಾರ್ಥಿ ಜೀವನ ಸಾರ್ಥಕತೆ ಪಡೆಯುತ್ತದೆ. ಈ ನಿಟ್ಟಿನಲ್ಲಿ ಯುವವಾಹಿನಿ ಬಂಟ್ವಾಳ ಘಟಕವು ವರ್ಷಂಪ್ರತಿ ಆಯೋಜಿಸುವ ರಾಷ್ಟ್ರೀಯ ಕಾರ್ಯಾಗಾರ ಅನ್ವೇಷಣವು ವಿದ್ಯಾರ್ಥಿಗಳ ಬದುಕಿನಲ್ಲಿ ಹೊಸ ತಿರುವು ನೀಡಲಿದೆ ಎಂದು ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಜಯಂತ್ ನಡುಬೈಲು ತಿಳಿಸಿದರು.
ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಕೆ.ಸೇಸಪ್ಪ ಕೋಟ್ಯಾನ್, ಜಿಲ್ಲಾ ವೆನ್ ಲಾಕ್ ಆಸ್ಪತ್ರೆಯ ಮೂತ್ರರೋಗ ತಜ್ಞರಾದ ಡಾ.ಸದಾನಂದ ಪೂಜಾರಿ, ದ.ಕ.ಜಿಲ್ಲಾ ಅಮೆಚೂರ್ ಕಬ್ಬಡ್ಡಿ ಅಸೋಸಿಯೇಷನ್ ಅಧ್ಯಕ್ಷ ಬೇಬಿ ಕುಂದರ್, ಮಂಗಳೂರು ಮಹಾನಗರ ಪಾಲಿಕೆಯ ಗುತ್ತಿಗೆದಾರರಾದ ಲೋಕೇಶ್ ಪೂಜಾರಿ ಕಲ್ಲಡ್ಕ, ಬಂಟ್ವಾಳ ತಾಲೂಕು ಗ್ಯಾರೇಜು ಮಾಲಕರ ಸಂಘದ ಅಧ್ಯಕ್ಷ ವಿಶ್ವನಾಥ ಪೂಜಾರಿ, ಎಸ್.ಕೆ.ಬಿಲ್ಡರ್ಸ್ ಇಂಜಿನಿಯರ್ ಸಂತೋಷ್ ಕುಮಾರ್ ಕೊಟ್ಟಿಂಜ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ಪ್ರಗತಿಪರ ಕೃಷಿಕರಾದ ಮೋಹನ್ ಪೂಜಾರಿ ಅಗ್ರಬೈಲು, ಉದ್ಯಮಿ ಸುಂದರ ಪೂಜಾರಿ ಬೊಳಂಗಡಿ, ಬಂಟ್ವಾಳ ಪುರಸಭೆಯ ಸ್ಥಾಯಿ ಸಮಿತಿಯ ಮಾಜಿ ಅಧ್ಯಕ್ಷ ವಾಸು ಪೂಜಾರಿ, ಜಿಲ್ಲಾ ಕೆ.ಡಿ.ಪಿ ಸದಸ್ಯೆ ಜಯಂತಿ.ವಿ.ಪೂಜಾರಿ, ಬಂಟ್ವಾಳ ಪುರಸಭೆಯ ಮಾಜಿ ಸದಸ್ಯ ಗೋಪಾಲ ಸುವರ್ಣ, ಯುವವಾಹಿನಿ ಕೇಂದ್ರ ಸಮಿತಿಯ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕ ಅಶೋಕ್ ಕುಮಾರ್ ಪಡ್ಪು, ಪ್ರಧಾನ ಕಾರ್ಯದರ್ಶಿ ಸುನೀಲ್ ಕೆ.ಅಂಚನ್, ಯುವವಾಹಿನಿ ಬಂಟ್ವಾಳ ಘಟಕದ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕ ಯೋಗೀಶ್ ಪೂಜಾರಿ ಕಲ್ಲಡ್ಕ, ಜತೆ ಕಾರ್ಯದರ್ಶಿ ರಚನಾ ಕರ್ಕೇರ, ವಿದ್ಯಾರ್ಥಿ ಸಂಘಟನಾ ಕಾರ್ಯದರ್ಶಿಗಳಾದ ಸುಪ್ರೀತ್, ತ್ರಿಷಿತ್, ದೀಪಾ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಯುವವಾಹಿನಿ ಬಂಟ್ವಾಳ ಘಟಕದ ನಿಕಟಪೂರ್ವ ಅಧ್ಯಕ್ಷ ಲೋಕೇಶ್ ಸುವರ್ಣ ಸ್ವಾಗತಿಸಿದರು, ದಿನೇಶ್ ಸುವರ್ಣ ರಾಯಿ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಗಾರ ಯಶಸ್ವಿಯಾಗಿ ನಡೆದಿದೆ.. ಸಂಘಟಿಸಿದ ಬಂಟ್ವಾಳ ತಾಲೂಕು ಘಟಕದ ಸದಸ್ಯರಿಗೆ ಅಭಿನಂದನೆಗಳು..