ಮಕ್ಕಳನ್ನು ಸಮಾಜದ ಆಸ್ತಿಯನ್ನಾಗಿಸಲು ಅವರಿಗೆ ಸೂಕ್ತವಾದ ಶಿಕ್ಷಣ ನೀಡುವಂತಹ ವಾತಾವರಣ ನಿರ್ಮಾಣ ಆಗಬೇಕು. ಗುರುಹಿರಿಯರನ್ನು ಗೌರವಿಸುವ ಸಂಸ್ಕೃತಿಯನ್ನು ಹೆತ್ತವರು ಮನೆಯಿಂದ ಆರಂಭಿಸಿದಲ್ಲಿ ಮಾತ್ರ ಅವರ ಬದುಕಿನಲ್ಲಿ ಪ್ರಾಮಾಣಿಕತೆಯನ್ನು ಮೈಗೂಡಿಸಿಕೊಳ್ಳಲು ಸಾಧ್ಯವಿದೆ. ಯುವ ಜನರಿಗೆ ಸೂಕ್ತ ಮಾರ್ಗದರ್ಶನ ನೀಡಿ ಸ್ವಾವಲಂಬಿಗಳನ್ನಾಗಿ ಮಾಡಿರಿ ಎಂದು ಹಳೆಯಂಗಡಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಚಂದ್ರಶೇಖರ್ ನಾನಿಲ್ ಹೇಳಿದರು.
ಅವರು ಯುವವಾಹಿನಿ (ರಿ) ಹಳೆಯಂಗಡಿ ಘಟಕದ ಆಶ್ರಯದಲ್ಲಿ ಹಳೆಯಂಗಡಿ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ದಿನಾಂಕ 11.06.2017 ರಂದು ಜರುಗಿದ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಯುವವಾಹಿನಿ (ರಿ) ಹಳೆಯಂಗಡಿ ಘಟಕದ ಅಧ್ಯಕ್ಷ ಶರತ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು
ಮಂಗಳೂರು ಸೈಂಟ್ ಅಲೋಶಿಯಸ್ ಕಾಲೇಜಿನ ಉಪನ್ಯಾಸಕ ಡಾ.ಗಣೇಶ್ ಅಮೀನ್ ಸಂಕಮಾರ್ ದಿಕ್ಸೂಚಿ ಭಾಷಣದಲ್ಲಿ ಕೆಲವೊಂದು ಹೆತ್ತವರು ತಾನು ಅನಕ್ಷರಸ್ತನಾದರೂ ತನ್ನ ಮಕ್ಕಳಿಗೆ ಉನ್ನತ ವ್ಯಾಸಂಗವನ್ನು ನೀಡಲು ಬಹಳಷ್ಟು ಶ್ರಮ ವಹಿಸುತ್ತಾರೆ.ಅವರ ಅಂಕಾಕ್ಷೆಯನ್ನು ಗೌರವಿಸುವುದು ವಿದ್ಯಾರ್ಥಿಗಳ ಕರ್ತವ್ಯ . ಶಿಕ್ಷಣ ಪಡೆಯುವಾಗಲೇ ಭವಿಷ್ಯವನ್ನು ನಿರ್ಧರಿಸುವ ಗಟ್ಟಿತನ ಬೆಳೆಸಿಕೊಳ್ಳಬೇಕು. ಸಮಾಜದಿಂದ ಪಡೆದದ್ದನ್ನು ಸಮಾಜಕ್ಕೆ ಅರ್ಪಣೆ ಮಾಡುವ ಮೂಲಕ ಗುಣವಂತರಾಗಿ ಬದುಕಲು ಪ್ರಯತ್ನಿಸಬೇಕು ಎಂದರು.
ಹಳೆಯಂಗಡಿ ಪೂಜಾ ಸಂಸ್ಥೆಯ ಮಾಲಕ ಜೈಕೃಷ್ಣ ಬಿ.ಕೋಟ್ಯಾನ್ ಅವರು ತಮ್ಮ ತಾಯಿ ದಿ.ಕಮಲಾ ಬೂಬ ಅಮೀನ್ ಕೊಲ್ನಾಡು ಅವರ ಸ್ಮರಣಾರ್ಥ 38 ಹೈಸ್ಕೂಲ್ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ರೂ.25 ಸಾವಿರ ವೆಚ್ಚದಲ್ಲಿ ಉಚಿತವಾಗಿ ಪುಸ್ತಕ ವಿವರಿಸಿದರು.
ಉದ್ಯಮಿ ಮೂಲ್ಕಿ ವಿಶ್ವನಾಥ್ ಕೋಟ್ಯಾನ್ , ಪಣಂಬೂರು ಗ್ರಾಮ ಪಂಚಾಯತ್ ಅಧ್ಯಕ್ಷ ಮೋಹನ್ ದಾಸ್ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಪದ್ಮನಾಭ ಮರೋಳಿ, ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ರವಿಚಂದ್ರ ಶುಭ ಹಾರೈಕೆ ಮಾಡಿದರು. ಬಿಲ್ಲವ ಸಂಘದ ಕಟ್ಟಡ ಸಮಿತಿಯ ಅಧ್ಯಕ್ಷ ಭಾಸ್ಕರ್ ಸಾಲ್ಯಾನ್ ಸ್ವಾಗತಿಸಿ ಪ್ರಸ್ತಾಪಿಸಿದರು.ಚೈತ್ರಾ ಎಸ್ ಸುವರ್ಣ ವಿದ್ಯಾರ್ಥಿಗಳನ್ನು ಪರಿಚಯಿಸಿದರು.ಸಂಘದ ಕೋಶಾಧಿಕಾರಿ ರಮೇಶ್ ಬಂಗೇರ ವಂದಿಸಿದರು. ರಶ್ಮಿ ಕಾರ್ಯಕ್ರಮ ನಿರೂಪಿಸಿದರು.
Vidyadana mahadana